ದೆಹಲಿಯ 135 ಯೋಧರಿಗೆ ಕೊರೊನಾ..!

ಕೊರೋನಾ ಭಾರತೀಯ ಸೇನೆಯನ್ನೂ ಆವರಿಸಿದ್ದು, ಇದೀಗ ದೆಹಲಿಯ 135 ಯೋಧರು ಕೊರೋನಾಗೆ ತುತ್ತಾಗಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿನ ಸಿಆರ್‌ಪಿಎಫ್ ಹೆಡ್ ಕ್ವಾಟರ್ಸ್ ಅನ್ನು ಸೀಲ್ ಡೌನ್ ಮಾಡಲಾಗಿದೆ.ಬಿಎಸ್‌ಎಫ್ 126 ಬೆಟಾಲಿಯನ್ ಹಾಗೂ 178 ಬೆಟಾಲಿಯನ್ ಪಡೆಯ 15 ಮಂದಿ ಯೋಧರಲ್ಲಿ ವೈರಸ್ ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 135ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೆಡ್ ಕ್ವಾಟರ್ಸ್ ಅನ್ನು ಸೀಲ್ ಡೌನ್ ಮಾಡಲಾಗಿದೆ.ವಿಶೇಷ ಮಹಾನಿರ್ದೇಶಕ ಶ್ರೇಣಿಯ ಅಧಿಕಾರಿ, ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಸೇರಿದಂತೆ 40ಕ್ಕೂ ಹೆಚ್ಚು ಅಧಿಕಾರಿಗಳು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Please follow and like us:

Leave a Reply

Your email address will not be published. Required fields are marked *

Next Post

ಸರ್ಕಾರ ಕಾರ್ಮಿಕರ ಆರೋಗ್ಯ ವಿಚಾರದಲ್ಲಿ ಚೆಲ್ಲಾಟವಾಡುತ್ತಿದೆ:ಹೆಚ್ ಡಿ ಕೆ

Sun May 3 , 2020
ಬೆಂಗಳೂರು: ಸರ್ಕಾರ ಕಾರ್ಮಿಕರ ಆರೋಗ್ಯ ವಿಚಾರದಲ್ಲಿ ಚೆಲ್ಲಾಟವಾಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪೂರ್ವ ಸಿದ್ಧತೆಗಳಿಲ್ಲದೇ ಜಾರಿ ಮಾಡಲಾದ ಲಾಕ್‌ಡೌನ್‌ನನ್ನು ಈಗ ಮುನ್ನೆಚ್ಚರಿಕೆ ಇಲ್ಲದೇ ಸಡಿಲ ಮಾಡಲಾಗಿದೆ. ವಲಸೆ ಕಾರ್ಮಿಕರು ಊರಿಗೆ ಹೋಗಲು ಸರ್ಕಾರ ಅವಕಾಶ ಮಾಡಿಕೊಟ್ಟಿದ್ದರಿಂದ ಜನರು ಭಾರಿ ಪ್ರಮಾಣದಲ್ಲಿ ಗುಂಪು ಗೂಡುವಂತೆ ಮಾಡಿದೆ. ಈ ಮೂಲಕ ಕಾರ್ಮಿಕರ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.ವಿದೇಶದಿಂದ ಸೋಂಕು ಹೊತ್ತು […]

Advertisement

Wordpress Social Share Plugin powered by Ultimatelysocial