ದೇವರು ವರ ಕೊಟ್ರು ಪೂಜಾರಿ ಕೊಡಲಿಲ್ಲ

ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ನಿಧಿಯಿಂದ, ಕೊಲ್ಲೂರು ಗ್ರಾಮದಿಂದ ಜೋನೇಕೇರಿ ಗ್ರಾಮದವರಿಗೆ ಡಾಂಬರ್ ರಸ್ತೆ ನಿರ್ಮಾಣ ಮಾಡಲಾಗಿದೆ. ಆದರೆ ರಸ್ತೆ ಪಕ್ಕದಲ್ಲಿ ಚರಂಡಿ ನಿರ್ಮಾಣ ಮಾಡಿದ ಕಾರಣ ಅಧಿಕಾರಿಗಳು ಮಾಡಿರುವ ಎಡವಟ್ಟಿನಿಂದ ಮಳೆಯಾದರೆ ಮನೆಗಳಿಗೆ ನೀರು ನುಗ್ಗುತ್ತಿವೆ.ಯಾವುದೇ ಒಂದು ರಸ್ತೆ ನಿರ್ಮಾಣ ಮಾಡಬೇಕಾದರೆ ಅದರ ಪಕ್ಕದಲ್ಲಿ ಚರಂಡಿ ವ್ಯವಸ್ಥೆ ಮಾಡಲೇಬೇಕಾಗುತ್ತದೆ.ಸರ್ಕಾರ ಹೈದರಾಬಾದ್-ಕರ್ನಾಟಕ ಅಭಿವೃದ್ಧಿ ಮಂಡಳಿ ಮುಖಾಂತರ  ಈ ಭಾಗದ ಅಭಿವೃದ್ಧಿಗಾಗಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತಿದ್ದರು ಅಧಿಕಾರಿಗಳು ಸರಿಯಾಗಿ ಅದನ್ನು ಬಳಸಿಕೊಳ್ಳದೆ ಈ ರೀತಿ ಅವಾಂತರ ಸೃಷ್ಟಿ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ವಿಜಯಪುರದಲ್ಲಿ ಬೆಡ್‌ಗಳ ಕೊರತೆ ಇಲ್ಲಾ- ಶಶಿಕಲಾ ಜೊಲ್ಲೆ

Mon Jul 20 , 2020
ವಿಜಯಪುರ ಪಟ್ಟಣದಲ್ಲಿ ಉಸ್ತುವಾರಿ ಸಚಿವೇ ಶಶಿಕಲಾ ಜೊಲ್ಲೆ ಅವರು ಇತ್ತಿಚೆಗೆ ವಿಜಯಪುರದಲ್ಲಿ ಬೆಡ್‍ಗಳ ಕೊರತೆ ಇಲ್ಲಾ ಎಂದು ಹೇಳಿದ್ದರು.ವಿಪರ್ಯಾಸವೆಂಬಂತೆ ತೀವ್ರ ಜ್ವರದಿಂದ ಬಳಲುತ್ತಿದ್ದ ರೋಗಿಗೆ ಚಿಕಿತ್ಸೆ ಸಿಗದೇ ಪರದಾಡಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಆಲಮೇಲ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಶಂಕರ್ ಜಂಬಗಿ  ರೋಗಿ ಎಂಬುವರು ರಸ್ತೆ ಮೇಲೆ ನರಳಾಡುತ್ತಿರುವಗ ಆತನ ಪತ್ನಿ ಶೋಭಾ ಆಸ್ಪತ್ರೆಗೆ ಸಾಗಿಸಲು ಮುಂದಾದರೂ .ಆದರೆ ಒಂದು ವರೆ […]

Advertisement

Wordpress Social Share Plugin powered by Ultimatelysocial