ದೇವಾಲಯಗಳಲ್ಲಿ ಸಿಸಿಟಿವಿ ಕಡ್ಡಾಯ

ದೇವಾಲಯಗಳು ಕಡ್ಡಾಯವಾಗಿ ಸಿಸಿಟಿವಿ ಕೆಮರಾಗಳನ್ನು ಒಳಗೊಂಡಿರಬೇಕು ಮತ್ತು ಅವುಗಳು ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ನಿತ್ಯ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ. ತಮ್ಮ ಕಚೇರಿಯಲ್ಲಿ ನಡೆದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ದೇವಾಲಯಗಳ ಆಭರಣಗಳ ಸಂರಕ್ಷಣೆ ಹಾಗೂ ಮೌಲ್ಯಮಾಪನ ಮಾಡುವ ಬಗ್ಗೆ ಕೈಗೊಳ್ಳಬೇಕಾದ ಕ್ರಮ ಕೈಗೊಳ್ಳಬೇಕು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಮುಖ್ಯವಾಗಿ ಎ ಮತ್ತು ಬಿ ವರ್ಗಕ್ಕೆ ಸೇರಿದ ದೇವಾಲಯಗಳಲ್ಲಿ ಪೊಲೀಸ್ ಇಲಾಖೆಯಿಂದ ತರಬೇತಿ ಪಡೆದ ನುರಿತ ಭದ್ರತಾ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಬೇಕು. ಭದ್ರತೆಯ ದೃಷ್ಟಿಯಿಂದ ಎಲ್ಲ ದೇವಾಲಯಗಳ ಆಡಳಿತ ವರ್ಗ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ದೇವಸ್ಥಾನಗಳಲ್ಲಿ ಒಂದೇ ಬಾಗಿಲಲ್ಲಿ ಪ್ರವೇಶಕ್ಕೆ ಅನುಮತಿ ನೀಡಬೇಕು. ಅಲಾರ್ಮ್ ಅಳವಡಿಸಿ ಅವುಗಳು ಕಾರ್ಯನಿರ್ವಹಿಸುತ್ತಿವೆಯೇ ಎಂದು ಪರಿಶೀಲಿಸಬೇಕು. ಈ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಅಂತ ತಿಳಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ವಿಶಾಖಪಟ್ಟಣಂನಲ್ಲಿ ಮತ್ತೊಂದು ದುರಂತ

Tue Jul 14 , 2020
ಆಂಧ್ರಪ್ರದೇಶದ ವಿಶಾಖಪಟ್ಟಣಂ ಬಳಿಯ ಔಷಧಿ ತಯಾರಿಕ ಘಟಕವೊಂದರಲ್ಲಿ ಮಧ್ಯರಾತ್ರಿ ವೇಳೆಗೆ ಭಾರೀ ಸ್ಫೋಟ ಸಂಭವಿಸಿದ್ದು ಕಾರ್ಮಿಕರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಪರವಾಡಾ ಪ್ರದೇಶದ ಜೆ. ಎಂ ಫಾರ್ಮಾಸಿಟಿಯಲ್ಲಿ ಈ ಸ್ಪೋಟ ಸಂಭವಿಸಿದ್ದು ಸ್ಥಳೀಯ ನಿವಾಸಿಗಳಲ್ಲಿ ಆತಂಕವನ್ನುAಟುಮಾಡಿದೆ. ಫಾರ್ಮಾ ಸಿಟಿಯಲ್ಲಿ ಮೊದಲು ಸ್ಫೋಟ ಸಂಭವಿಸಿ, ಅದರ ನಂತರ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಸುಮಾರು ೯ ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದವು. ಸಾಗರ […]

Advertisement

Wordpress Social Share Plugin powered by Ultimatelysocial