ದೇಶದಲ್ಲಿ ಕೊರೊನಾ ಅಟ್ಟಹಾಸ

ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಏರಿಕೆಯಾಗುತ್ತಿದ್ದು,  ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 29,429 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ದೇಶದಲ್ಲಿ  ಒಟ್ಟು ಸೋಂಕಿತರ ಸಂಖ್ಯೆ 9,36,181 ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 582 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಕರೋನವೈರಸ್‌ನಿಂದಾಗಿ ಒಟ್ಟು 24,309 ಜನ ಸಾವನ್ನಪ್ಪಿದ್ದಾರೆ.  ಒಟ್ಟು ಸೋಂಕಿತರ ಪೈಕಿ 5,92,032 ಮಂದಿ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 3,19,840 ಜನರು ಸೋಂಕಿನಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

Please follow and like us:

Leave a Reply

Your email address will not be published. Required fields are marked *

Next Post

ಭಗವಂತ ಖೂಬಾಗೆ ಕೊರೊನಾ ಸೋಂಕು ದೃಢ

Wed Jul 15 , 2020
ಇಲ್ಲಿನ ಪೊಲೀಸ್ ಇಲಾಖೆ ಸಿಬ್ಬಂದಿಯನ್ನು ಬೆಂಬಿಡದೇ ಕಾಡುತ್ತಿರುವ ಕೋವಿಡ್-೧೯ ಸೋಂಕು ಈಗ ಚುನಾಯಿತ ಪ್ರತಿನಿಧಿಗಳಿಗೆ ಬೆನ್ನಟ್ಟಿದೆ. ಬುಧವಾರ ಸಂಸದ ಭಗವಂತ ಖೂಬಾಗೂ ವೈರಸ್ ಒಕ್ಕರಿಸಿದೆ. ಸಂಸದರಿಗೆ ಕೋವಿಡ್-೧೯ ಸೋಂಕಿನ ಯಾವುದೇ ರೋಗ ಲಕ್ಷಣಗಳು ಕಂಡುಬAದಿಲ್ಲ. ಆದರೂ ಗಂಟಲು ದ್ರವ ಪರೀಕ್ಷೆಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ದೆಹಲಿ ಮತ್ತು ಬೆಂಗಳೂರು ಪ್ರಯಾಣ ಜತೆಗೆ ಜಿಲ್ಲೆಯಲ್ಲಿ ವಿವಿಧೆಡೆ ಸಂಚಾರ ಹಿನ್ನಲೆಯಲ್ಲಿ ಸೋಂಕು ತಗುಲಿರುವ ಸಾಧ್ಯತೆ ಇದೆ. ಇಲ್ಲಿನ ಶಿವನಗರದಲ್ಲಿ ಇರುವ ತಮ್ಮ ಮನೆಯಲ್ಲೇ ಪ್ರತ್ಯೇಕವಾಗಿದ್ದು, […]

Advertisement

Wordpress Social Share Plugin powered by Ultimatelysocial