ದೇಶದಲ್ಲಿ ಕೊರೊನಾ ಆರ್ಭಟ

ದೇಶದಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ 8 ಲಕ್ಷ ಗಡಿ ದಾಟಿದೆ.  ಒಂದೇ ದಿನದಲ್ಲಿ 27,114 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಒಟ್ಟು ದೇಶದಲ್ಲಿ ಸೋಂಕಿತರ ಸಂಖ್ಯೆ 8,20,916ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ 519 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ, ಮೃತರ ಸಂಖ್ಯೆ 22,123ಕ್ಕೆ ಏರಿಕೆಯಾಗಿದೆ. ಇನ್ನು 8,20,916 ಮಂದಿ ಸೋಂಕಿತರ ಪೈಕಿ 5,15,386 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 2,83,407 ಮಂದಿ ಸೋಂಕಿನಿಂದ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Please follow and like us:

Leave a Reply

Your email address will not be published. Required fields are marked *

Next Post

ತಹಶೀಲ್ದಾರ್ ಹತ್ಯೆ ಖಂಡಿಸಿ

Sat Jul 11 , 2020
ತಹಶೀಲ್ದಾರ್ ಚಂದ್ರಮೌಳೇಶ್ವರ ಕೊಲೆ ಪ್ರಕರಣ, ಕರ್ನಾಟಕ ರಾಜ್ಯ ನೌಕರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ತಹಶೀಲ್ದಾರ್ ಚಂದ್ರಮೌಳೇಶ್ವರ ಮೇಲೆ ಪೊಲೀಸರ ಸಮ್ಮುಖದಲ್ಲೆ ನಿವೃತ್ತ ಶಿಕ್ಷಕ ವೆಂಕಟಾಚಲಪತಿ ಅವರು ಚಾಕುವಿನಿಂದ ಗಾಯಗೊಳಿಸಿದ್ದು, ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಈ ದುರ್ಘಟನೆಯನ್ನು ಖಂಡಿಸಿ ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಕರ್ನಾಟಕ ರಾಜ್ಯ ನೌಕರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ, ಅಧಿಕಾರಿಗಳಿಗೆ ಎಲ್ಲ ರೀತಿಯ ರಕ್ಷಣೆ ನೀಡಬೇಕು ಮತ್ತು ಆರೋಪಿಯನ್ನು […]

Advertisement

Wordpress Social Share Plugin powered by Ultimatelysocial