ದೇಶದಲ್ಲಿ ಕೊರೊನಾ ವೈರಸ್ ರಣಕೇಕೆ ಕಾಕುತ್ತಿದ್ದು,ಒಂದೇ ದಿನದಲ್ಲಿ 500 ಮಂದಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 23,174ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 28,701 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,78,254ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ ಈವರೆಗೂ 5,53,471 ಲಕ್ಷ ಜನರು ವೈರಸ್ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನು ಉಳಿದ 3,01,609 ಮಂದಿ ಕೋವಿಡ್ ಕೇಂದ್ರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮತ್ತು ಒಂದೇ ದಿನದಲ್ಲಿ 18,850 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಕಿ ಅಂಶಗಳಿಂದ ತಿಳಿದುಬಂದಿದೆ.
ದೇಶದಲ್ಲಿ ಕೊರೊನಾ ವೈರಸ್ ರಣಕೇಕೆ
Please follow and like us: