ದೇಶದ ದಿಕ್ಕು ತಪ್ಪಿಸುತ್ತಿದ್ದಾರೆ ರಾಹುಲ್

ನವದೆಹಲಿ: ಉದ್ದೇಶಪೂರ್ವಕ ಸಾಲ ಬಾಕಿದಾರರ ೬೮,೦೦೦ ಕೋಟಿ ರೂ. ಸಾಲ ರೈಟ್ ಆಫ್ ಮಾಡಿದ ಎನ್‌ಡಿಎ ಸರ್ಕಾರದ ನಿರ್ಧಾರ ಪ್ರಶ್ನಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡಿದ್ದಾರೆ.
“ಸಾಲದ ರೈಟ್ ಆಫ್ ಎಂದರೆ ಸಾಲ ಮನ್ನಾ ಅಲ್ಲ, ವಾಪಸು ಬಾರದ ಸಾಲಗಳನ್ನು ಲೆಕ್ಕದ ಪುಸ್ತಕಗಳಿಂದ ಮಾತ್ರ ಹೊರಗಿಡಲಾಗಿದೆ. ಈ ಮಧ್ಯೆ ಬಾಕಿದಾರರಿಂದ ಸಾಲ ವಸೂಲಿ ಪ್ರಕ್ರಿಯೆ ಮುಂದುವರಿಯುತ್ತಿರುತ್ತದೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಯುಪಿಎ ಸರ್ಕಾರ ತನ್ನ ಆಡಳಿತದ ಕೊನೆಯ ನಾಲ್ಕು ವರ್ಷಗಳಲ್ಲಿ ವಾಣಿಜ್ಯ ಬ್ಯಾಂಕುಗಳ ೧,೪೫,೨೨೬ ಕೋಟಿ ರೂ. ಸಾಲಗಳನ್ನು ರೈಟ್ ಆಫ್ ಮಾಡಿತ್ತು. ಇದನ್ನು ಮರೆಮಾಚಿ ರಾಹುಲ್ ಗಾಂಧಿ ಉದ್ದೇಶಪೂರ್ವಕವಾಗಿ ದೇಶದ ಜನರ ದಾರಿ ತಪ್ಪಿಸುತ್ತಿದ್ದಾರೆ” ಎಂದು ಸಚಿವೆ ನಿರ್ಮಲಾ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಚಿವೆ, “ಯಾವುದೇ ಸಾಲಗಳನ್ನು ಮನ್ನಾ ಮಾಡಲಾಗಿಲ್ಲ. ಆದರೂ ಕಾಂಗ್ರೆಸ್ ಇಲ್ಲದ ವಿಷಯಗಳನ್ನು ವೈಭವೀಕರಿಸುತ್ತಿದೆ. ೨೦೦೯-೧೦ ಮತ್ತು ೨೦೧೩-೧೪ ರ ಮಧ್ಯೆ ಶೆಡ್ಯೂಲ್ಡ್ ವಾಣಿಜ್ಯ ಬ್ಯಾಂಕುಗಳ ೧,೪೫,೨೨೬ ಕೋಟಿ ರೂ. ಸಾಲಗಳನ್ನು ರೈಟ್ ಆಫ್ ಮಾಡಲಾಗಿತ್ತು. ರೈಟ್ ಆಫ್ ಎಂದರೇನೆಂಬುದನ್ನು ರಾಹುಲ್ ಗಾಂಧಿಯವರು ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರಿಂದ ಕೇಳಿ ಅರಿತುಕೊಂಡಿದ್ದರೆ ಚೆನ್ನಾಗಿತ್ತು.” ಎಂದು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಸರತಿ ಸಾಲಿನಲ್ಲಿ ನಿಲ್ಲುವುದು ತಪ್ಪು

Wed Apr 29 , 2020
ನ್ಯೂಯಾರ್ಕ್: ದೇಶದಲ್ಲಿ ಆರ್ಥಿಕವಾಗಿ ದುರ್ಬಲರಾಗಿರುವ ಜನರಿಗೆ ಆಧಾರ್ ಕಾರ್ಡ್ ಮೂಲಕ ನೇರ ಹಣ ವರ್ಗಾವಣೆ ಮಾಡುವ ಇಂಡಿಯಾ ಸ್ಟ್ಯಾಕ್ ಅಥವಾ ಇಂಟರೋಪಿರೇಬಲ್ ಸಾಫ್ಟ್ವೇರ್ ಕೊರೊನಾ ಭೀತಿಯ ನಡುವೆ ಜನರು ಧೀರ್ಘ ಸಮಯ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಡೆದಿದೆ ಎಂದು ಮೈ ಗವರ್ನಮೆಂಟ್ ಮತ್ತು ಡಿಜಿಟಲ್ಇಂಡಿಯಾ ಫೌಂಡೇಶನ್ ಸಂಸ್ಥಾಪಕ ಅರವಿಂದ್ ಗುಪ್ತಾ ತಿಳಿಸಿದ್ದಾರೆ. ಸದ್ಯ ಲಭ್ಯವಿರುವ ಅಂಕಿಅAಶಗಳ ಪ್ರಕಾರ, ಏಪ್ರಿಲ್ ೨೨ ರ ಹೊತ್ತಿಗೆ, ೩೩೦ ದಶಲಕ್ಷಕ್ಕೂ ಹೆಚ್ಚು ಭಾರತೀಯರಿಗೆ ಸರ್ಕಾರ […]

Advertisement

Wordpress Social Share Plugin powered by Ultimatelysocial