ದೇಶಾದ್ಯಂತ ಕೊರೊನಾ ಅಟ್ಟಹಾಸ

ದೇಶಾದ್ಯಂತ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ದೇಶದಲ್ಲಿ ಒಂದು ದಿನದಲ್ಲಿ 24,248 ಮಂದಿಗೆ ಮಾರಕ ಸೋಂಕು ಪತ್ತೆಯಾಗಿದೆ, ಕಳೆದ 24 ಗಂಟೆಯಲ್ಲಿ  425 ಮಂದಿ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಮಹಾಮಾರಿ ಸೋಂಕಿಗೆ 19,693 ಸಾವನ್ನಪ್ಪಿದ್ದಾರೆ. ಇದೀಗ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,97,413ಕ್ಕೆ ಏರಿಕೆಯಾಗಿದೆ. ಈ ಪೈಕಿ 4,24,433 ಮಂದಿ ಸೋಂಕಿತರು ಸಂಪೂರ್ಣವಾಗಿ ಚಿಕಿತ್ಸೆ ಪಡೆದು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. 2,53,287 ಮಂದಿ ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂದು ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿ ನೀಡಿದೆ.

Please follow and like us:

Leave a Reply

Your email address will not be published. Required fields are marked *

Next Post

ಕೊರೊನಾ ಮಹಾಮಾರಿಗೆ ಇಬ್ಬರು ಬಲಿ

Mon Jul 6 , 2020
 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾ ಮಹಾಮಾರಿಗೆ ಇಬ್ಬರು ಬಲಿಯಾಗಿದ್ದಾರೆ. ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಂಗಳೂರು ಹೊರವಲಯದ ಸಂತೋಷ್ ನಗರ ನಿವಾಸಿ ಮತ್ತು ಉಳ್ಳಾಲ ನಿವಾಸಿ ಇಬ್ಬರಿಗೂ ಕೊರೊನಾ ವೈರಸ್ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು,ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ.ಜಿಲ್ಲೆಯಲ್ಲಿ ಒಟ್ಟು 24 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ನಿನ್ನೆ ಒಂದೇ ದಿನ ಜಿಲ್ಲೆಯಲ್ಲಿ 147 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು. […]

Advertisement

Wordpress Social Share Plugin powered by Ultimatelysocial