́ದ್ವಿತೀಯ PUC’ ಪರೀಕ್ಷೆ: ‘ಮರು ಮೌಲ್ಯಮಾಪನದಲ್ಲಿ ‘ಒಂದು ಅಂಕ ಹೆಚ್ಚು’ ಬಂದರೂ ಪರಿಗಣನೆ : ಸಚಿವ ಬಿ.ಸಿ ನಾಗೇಶ್ ಹೇಳಿಕೆ

 

 

ಬೆಂಗಳೂರು : ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ( Karnataka Second Pu Main Exam 2023 ) ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ‘ಒಂದು ಅಂಕ’ ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿ ದೆ.

ಈ ಕುರಿತಂತೆ ಮಾಹಿತಿ ನೀಡಿರುವಂತ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಬಿ.ಸಿ ನಾಗೇಶ್ ( Minister BC Nagesh ) ಅವರು, 2023ರ ಮಾರ್ಚ್‌ನಲ್ಲಿ ನಡೆಯುವ ‘ವಾರ್ಷಿಕ ಪರೀಕ್ಷೆ’ಯಿಂದ ಈ ಹೊಸ ನಿಯಮ ಅನ್ವಯವಾಗಲಿದೆ. ಹಾಲಿ ಇರುವ ನಿಯಮದ ಪ್ರಕಾರ, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗೆ ಪತ್ರಿಕೆಯ ಒಟ್ಟು ಅಂಕದ ಶೇ.6ರಷ್ಟು ಅಂಕ ಅಥವಾ ಅದಕ್ಕಿಂತ ಹೆಚ್ಚು ಅಂಕಗಳು ಬಂದಲ್ಲಿ ಮಾತ್ರ ಪರಿಗಣಿಸಲಾಗುತ್ತಿತ್ತು. ಶೇ.6ಕ್ಕಿಂತ ಕಡಿಮೆ ಅಂಕಗಳು ಬಂದಲ್ಲಿ ಪರಿಗಣಿಸುತ್ತಿರಲಿಲ್ಲ ಎಂದಿದ್ದಾರೆ.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಂದು ಅಂಕವು ಮುಖ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ‘ಒಂದು ಅಂಕ’ವನ್ನೂ ಪರಿಗಣಿಸುವ ‘ವಿದ್ಯಾರ್ಥಿ ಸ್ನೇಹಿ’ ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ಶೀಘ್ರದಲ್ಲೇ ‘ಕರ್ನಾಟಕ ಪದವಿಪೂರ್ವ ಶಿಕ್ಷಣ ರಾಜ್ಯ ಮಟ್ಟದ ಪಬ್ಲಿಕ್ ಪರೀಕ್ಷೆ ನಿಯಮಗಳು-1997’ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇಂದಿನಿಂದ ಫೆ.24 ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದೆ : ಫೆ.17 ರಂದು ರಾಜ್ಯ ಬಜೆಟ್ ಮಂಡನೆ

Fri Feb 10 , 2023
    ಬೆಂಗಳೂರು : ಇಂದಿನಿಂದ ಫೆಬ್ರವರಿ 24ರವರೆಗೆ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣದ ಮೇಲೆ ಸೋಮವಾರದಿಂದ ಚರ್ಚೆಗಳು ನಡೆಯಲಿವೆ. ಫೆಬ್ರವರಿ 17ರಂದು ಬಜೆಟ್ ಮಂಡನೆಯಾಗಲಿದ್ದು, ಇದೇ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ.   ರಾಜ್ಯದಲ್ಲಿ ಬಜೆಟ್ ಅಧಿವೇಶನ ಶುರುವಾಗಲಿದೆ. ಈ ಹಿನ್ನೆಲೆ ಮಾತನಾಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ,ಎಲ್ಲರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.ಇದು ಈ ವಿಧಾನಸಭೆಯ 15ನೆಯ ಮತ್ತು ಕೊನೆಯ […]

Advertisement

Wordpress Social Share Plugin powered by Ultimatelysocial