ನಕಲಿ ಬೀಜ ಮಾರಾಟಗಾರರ ವಿರುದ್ಧ ಕ್ರಿಮಿನಲ್ ಕೇಸ್ ..!

ನಕಲಿ ಬೀಜಗಳನ್ನು ಮಾರಾಟ ಮಾಡುವುದು ರೈತರ ಬದುಕನ್ನು ಸಾಯಿಸುವಂತಹ ಅಪರಾಧವಾಗಿದೆ. ಇಂತಹ ನಕಲಿ ಬೀಜ ಮಾರಾಟಗಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಹಾವೇರಿ ಜಿಲ್ಲಾ ಕೃಷಿ ಅಧಿಕಾರಿಗಳ ತಂಡ ಸುಮಾರು 6ಕೋಟಿ ರೂಪಾಯಿ.ಮೌಲ್ಯದ ಅಕ್ರಮ ನಕಲಿ ಬಿಡಿ ಬೀಜಗಳ ದಾಸ್ತಾನು ವಶಪಡಿಸಿಕೊಂಡಿದೆ. ಕಳಪೆ ನಕಲಿ ಬೀಜ ಮಾರಾಟ ಮಾಡುವವರು ಬದುಕಿದ್ದಂತಹ ರೈತರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ‌.ಇಂತಹ ಕೃತ್ಯವನ್ನು ಯಾರು ಸಹಿಸುವುದಿಲ್ಲ. ನಕಲಿ ಕಳಪೆ ಅಕ್ರಮ ಬೀಜವಾಗಲಿ ಗೊಬ್ಬರವಾಗಲಿ ಮಾರಾಟ ಮಾಡುವವರು ಎಷ್ಟೇ ಪ್ರಭಾವಿಗಳಾದರೂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತೇವೆ.ಹಾವೇರಿಯಲ್ಲಿ ಪತ್ತೆಯಾದ ನಕಲಿ ಬಿಡಿ ಬೀಜಗಳ ದಾಸ್ತಾನು ವಶ ಪ್ರಕರಣವನ್ನು ನ್ಯಾಯಾಲಯದ ವಶಕ್ಕೆ ವಹಿಸಲಾಗುವುದು ಎಂದು ಹೇಳಿದರು.

 

Please follow and like us:

Leave a Reply

Your email address will not be published. Required fields are marked *

Next Post

ಆರೋಪಿಗಳನ್ನು ಆಸ್ಪತ್ರೆಯಲ್ಲಿಟ್ಟಿದ್ದರೂ ಟೀಕೆ ಬರುತ್ತಿದ್ದವು: ಬೊಮ್ಮಾಯಿ

Fri Apr 24 , 2020
ಪಾದರಾಯನಪುರ ಆರೋಪಿಗಳನ್ನು ರಾಮನಗರಕ್ಕೆ ಸ್ಥಳಾಂತರ ಮಾಡಿದ್ದರಲ್ಲಿ ತಪ್ಪಾಗಿಲ್ಲ, ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊರೋನಾ ಹೋರಾಟದಲ್ಲಿ ಬೇರೆ ಬೇರೆ ಆಯಾಮಗಳು ಬರುತ್ತವೆ,‌ ಸಂದರ್ಭಕ್ಕೆ ತಕ್ಕಂತೆ ಸರ್ಕಾರ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಪಾದರಾಯನಪುರ ಆರೋಪಿಗಳನ್ನು ಬೆಂಗಳೂರಿನ‌ ಹಜ್ ಭವನಕ್ಕೆ ಶಿಫ್ಟ್ ಮಾಡಿದ್ದೇವೆ. ಜೈಲು ಸಿಬ್ಬಂದಿಗೂ ಪರೀಕ್ಷೆ ಮಾಡಿ ಕ್ವಾರಂಟೈನ್‌ಗೂ ಒಳಪಡಿಸುತ್ತೇವೆ. ಇಲ್ಲೂ ಪೊಲೀಸರಿಗೆ ತಪಾಸಣೆ ಮಾಡಿ ಅಗತ್ಯಬಿದ್ದರೆ ಕ್ವಾರಂಟೈನ್ ಮಾಡ್ತೇವೆ. ಏನೇ ಮಾಡಿದರೂ ಆಪಾದನೆ ಬಂದೇ […]

Advertisement

Wordpress Social Share Plugin powered by Ultimatelysocial