ನಮ್ಮ ಪಕ್ಷದ ಅಭ್ಯರ್ಥಿ ವಿಚಾರವಾಗಿ ಮಾತನಾಡಲು ಸಿದ್ದರಾಮಯ್ಯ ಯಾವ ದೊಣ್ಣೆ ನಾಯಕ.?; ಹೆಚ್‌ ಡಿಕೆ

 

ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಜೆಡಿಎಸ್ ಟಿಕೆಟ್ ನೀಡಿ ವಿಚಾರವಾಗಿ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತೆ ತಿರುಗೇಟು ನೀಡಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿ ವಿಚಾರವಾಗಿ ಮಾತನಾಡಲು ಸಿದ್ದರಾಮಯ್ಯ ಯಾವ ದೊಣ್ಣೆ ನಾಯಕಎಂದು ಸಿದ್ದರಾಮಯ್ಯನವರ ವಿರುದ್ಧ ಹೆಚ್‌ ಡಿಕೆ  ಕಿಡಿಕಾರಿದ್ದಾರೆ. ಯಾವ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಯನ್ನು ನಿಲ್ಲಿಸಬೇಕು ಎಂಬುದು ನಮ್ಮ ಪಕ್ಷದ ವಿಚಾರ. ಅದರ ಬಗ್ಗೆ ಸಿದ್ದರಾಮಯ್ಯನವರನ್ನು ಕೇಳಿ ನಾವು ನಿರ್ಧರಿಸಬೇಕಿಲ್ಲ. ನಮ್ಮ ಪಕ್ಷದ ಬಗ್ಗೆ, ನಮ್ಮ ಅಭ್ಯರ್ಥಿಗಳ ಬಗ್ಗೆ ಮಾತನಾಡಲು ಅವರು ಯಾರು? ಎಂದು ಪ್ರಶ್ನಿಸಿದರು.

ಚುನಾವಣೆಯಲ್ಲಿ ಗೆಲ್ಲುವ ನಿಟ್ಟಿನಲ್ಲಿ ಯಾವ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎಂಬುದನ್ನು ಜೆಡಿಎಸ್ ಮುಖಂಡರ ಜೊತೆ ಚರ್ಚಿಸಿ ಲೆಕ್ಕಚಾರದ ಮೇಲೆ ಅಭ್ಯರ್ಥಿ ಕಣಕ್ಕಿಳಿಸಿದ್ದೇವೆ. ನಮ್ಮ ಪಕ್ಷದ ಯಾರನ್ನು ಅಭ್ಯರ್ಥಿ ಮಾಡಬೇಕು ಎಂದು ಸಿದ್ದರಾಮಯ್ಯನವರ ಅಭಿಪ್ರಾಯ, ಅವರ ಪರ್ಮಿಷನ್ ಕೇಳುವ ಅಗತ್ಯವಿಲ್ಲ. ನಮ್ಮ ಪಕ್ಷದಲ್ಲಿ ಯಾರನ್ನು ಕಣಕ್ಕಿಳಿಸಬೇಕು ಎಂದು ಹೇಳಲು ಸಿದ್ದರಾಮಯ್ಯ ಜೆಡಿಎಸ್ ಮುಖಂಡರಾ? ನಮ್ಮ ಅಭ್ಯರ್ಥಿಗಳ ಬಗ್ಗೆ ಸಿದ್ದರಾಮಯ್ಯನವರ ಹೇಳಿಕೆಗಳೇ ಅಪ್ರಸ್ತುತ ಎಂದು ವಾಗ್ದಾಳಿ ನಡೆಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸಿರುವುದು ರಾಜಕೀಯ ತಂತ್ರ-DKS

Thu Oct 7 , 2021
ಉಪಚುನಾವಣೆಯಲ್ಲಿ ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸಿರುವುದು, ಅವರ ರಾಜಕೀಯ ತಂತ್ರಗಾರಿಕೆ. ಅನುಭವಕ್ಕೆ ತಕ್ಕಂತೆ ಅವರು ತಂತ್ರಗಾರಿಕೆ ಮಾಡುತ್ತಾರೆ. ನಮ್ಮ ಪಕ್ಷದ ಸೂಚನೆ ಮೇರೆಗೆ ಸಮ್ಮಿಶ್ರ ಸರ್ಕಾರದಲ್ಲಿ ನಾನು ನನ್ನ ಕರ್ತವ್ಯ ಮಾಡಿದ್ದೆ. ಅದರ ಫಲ ಆ ಭಗವಂತ ನೋಡಿಕೊಳ್ಳಲಿ.ನಾವೇ ಅವರನ್ನ ಸಿಎಂ ಮಾಡಬೇಕು ಅಂತಾ ಹೋಗಿದ್ದು ನಿಜ. ಕೊನೆ ಘಳಿಗೆವರೆಗೂ ಬೆಂಬಲವಾಗಿ ನಿಂತಿದ್ದೆವು. ಮುಂದೆ ರಾಜ್ಯ ಹಾಗೂ ರಾಷ್ಟ್ರಕ್ಕೆ ಒಳ್ಳೆಯದಾಗಲು ಎಲ್ಲ ರೀತಿಯ ಕೆಲಸ ಮಾಡುತ್ತೇವೆ ಎಂದ್ರು ಡಿ.ಕೆ.ಶಿ.ಬಿಜೆಪಿ ಸರಕಾರ […]

Advertisement

Wordpress Social Share Plugin powered by Ultimatelysocial