ನಿಗೂಢವಾಗಿ ನಾಪತ್ತೆಯಾದ ಬಸ್ ಮಾಲೀಕನಿಗೆ 4 ದಿನಗಳಿಂದ ಹುಡುಕಾಟ|Shimoga|

 ಶುಕ್ರವಾರದಿಂದ ನಾಪತ್ತೆಯಾಗಿರುವ ಸಾಗರದ ಪ್ರಕಾಶ್ ಟ್ರಾವೆಲ್ಸ್ ಬಸ್ ಸಂಸ್ಥೆಯ ಮಾಲೀಕ ಪ್ರಕಾಶ್ ಅವರಿಗಾಗಿ ಹುಡುಕಾಟ ಮುಂದುವರೆದಿದೆ.

ಹೊಸನಗರ ತಾಲೂಕಿನ ಪಟಗುಪ್ಪ ಸೇತುವೆ ಬಳಿ ಅವರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಇದುವರೆಗೂ ಪತ್ತೆಯಾಗಿಲ್ಲ.

ಘಟನಾ ಸ್ಥಳಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ ನೀಡಿ, ಈಗಾಗಲೇ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಚರ್ಚೆ ನಡೆಸಿದ್ದು, ಪ್ರಕಾಶ್ ಅವರ ಪತ್ತೆಗಾಗಿ ಎಲ್ಲ ಪ್ರಯತ್ನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಬಸ್ ಮಾಲೀಕರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಚಾಲಕರು, ನಿರ್ವಾಹಕರು, ಸಿಬ್ಬಂದಿ ಸೇರಿ 250ಕ್ಕೂ ಅಧಿಕ ಮಂದಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ನಿಗೂಢವಾಗಿ ನಾಪತ್ತೆಯಾಗಿರುವ ಬಸ್ ಮಾಲೀಕರ ಹುಡುಕಿಕೊಡಬೇಕೆಂದು ಒತ್ತಾಯಿಸಿದ್ದಾರೆ. ಪ್ರಕಾಶ್ ಅವರ ನಾಪತ್ತೆ ಹಿಂದೆ ಕಾಣದ ವ್ಯಕ್ತಿಗಳ ಕೈವಾಡ ಇರುವ ಶಂಕೆ ಇದ್ದು, ತನಿಖೆ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಪಟಗುಪ್ಪ ಸೇತುವೆ ಶರಾವತಿ ಹಿನ್ನೀರಿಗೆ ಅಡ್ಡಲಾಗಿ ಕಟ್ಟಲಾಗಿದೆ. ಈ ಸ್ಥಳದಲ್ಲಿ ಪ್ರಕಾಶ್ ಅವರ ಕಾರು ಪತ್ತೆಯಾಗಿದೆ. ಅವರಿಗಾಗಿ ಹುಡುಕಾಟ ಮುಂದುವರೆದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಾಡಿ ಫಿಟ್ ಆಗಿಸಲು -ಟಿಪ್ಸ್

Mon Jan 24 , 2022
ಪ್ರತಿದಿನ 60 ಸೆಕೆ೦ಡ್‌ ಗಳ ಕಾಲ (3 ಸೆಟ್ಸ್ ಗಳ೦ತೆ) ಪ್ಲಾ೦ಕ್ ವ್ಯಾಯಮ ಮಾಡುವುದರಿ೦ದ ದೇಹದ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ,ಬೆನ್ನು ನೋವು ನಿವಾರಣೆಯಾಗುತ್ತದೆ ದೇಹದ ಫ್ಲೆಕ್ಸಿಬಿಲಿಟಿ ಹಾಗೂ ಕೋರ್‌ ಸ್ಟ್ರೆ೦ತ್‌ ಹೆಚ್ಚಿಸುತ್ತದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial