ನಿರಂತರ ಮಳೆಯಿಂದ ಕುಸಿದು ಬಿದ್ದಿರುವ ಮನೆಗಳು

ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮನೆಗಳು ಕುಸಿದು ಬಿದ್ದಿರುವ ಘಟನೆ ದೇವದುರ್ಗ ತಾಲ್ಲೂಕಿನ ಬುಂಕಲದೊಡ್ಡಿ ಗ್ರಾಮದಲ್ಲಿ ನಡೆದಿದೆ. ಬೀಮಶೇಪ್ಪ ಉಳಕಳ್ಳಿ ಎಂಬುವರರ ಮನೆ ಕುಸಿದು ಬಿದ್ದಿದ್ದು,ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹಳೆಯ ಮನೆಯಾಗಿರುವುದರಿಂದ ನಿರಂತರ ಮಳೆಗೆ ಈ ಅನಾಹುತ ಸಂಭವಿಸಿದೆ ಎಂದು ತಿಳಿದು ಬಂದಿದ್ದು ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಕುಸಿದು ಬಿದ್ದಿರುವ ಮನೆಗಳನ್ನು ಪರಿಶೀಲನೆ ಮಾಡಬೇಕಿದೆ. ಇಂದಿಗೂ ಬಹುತೇಕ ಹಳೆಯದಾದ ಮನೆಗಳಲ್ಲಿ ವಾಸ ಮಾಡುತ್ತಿರುವ ಕುಟುಂಬಗಳು ಇಂತಹ ಮಳೆ ಗಾಳಿಗೆ ಮನೆಗಳು ಕುಸಿದು ಬೀಳುತ್ತಿರುವುದರಿಂದ ಕುಟುಂಬಗಳು ಬೀದಿಗೆ ಬರುವಂತಾಗಿದೆ. ಮಳೆ ಹಾನಿಯಿಂದ ಸಂಕಷ್ಟಕ್ಕೆ ಒಳಗಾದ ಕುಟುಂಬಗಳಿಗೆ  ಸರ್ಕಾರ ಮತ್ತು ಸ್ಥಳೀಯ ಆಡಳಿತ ಸೂಕ್ತ ಪರಿಹಾರ ಕಲ್ಪಿಸಬೇಕೆಂದು ಸ್ಥಳೀಯರ ಆಗ್ರಹವಾಗಿದೆ.

 

Please follow and like us:

Leave a Reply

Your email address will not be published. Required fields are marked *

Next Post

ಕೋಲಾರದಲ್ಲಿ ಕೊರೊನಾ ತಾಂಡವ

Sat Jul 18 , 2020
ಕೋಲಾರದಲ್ಲಿ ದಿನೇ ದಿನೇ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ರೋಗಿಗಳಿಗೆ ಬೆಡ್ ಗಳು ಕೊರತೆಯಾಗಬಾರದೆಂದು, ಜಿಲ್ಲಾಡಳಿತ ರ‍್ಕಾರಿ ಜಿಲ್ಲಾ ಆಸ್ಪತ್ರೆಯನ್ನು ಸಂಪರ‍್ಣವಾಗಿ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲಾಗಿದೆ.ಇದಕ್ಕೂ ಮುಂಚೆ ಜಿಲ್ಲೆಯ ಪ್ರತಿಷ್ಠಿತ ಆಸ್ಪತ್ರೆಯಾದ ಆರ್.ಎಲ್.ಜಾಲಪ್ಪ ಆಸ್ಪತ್ರೆಯು ಕೋವಿಡ್ ರೋಗಿಗಳಿಗೆ ಬೆಡ್ ನೀಡಲು ಒಪ್ಪಿತ್ತು, ಆದರೆ ಈಗ ಆಸ್ಪತ್ರೆಯ ಆಡಳಿತ ಮಂಡಳಿ ಜಿಲ್ಲಾಡಳಿತ ಜೊತೆ ಸಹಕರಿಸದ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ರ‍್ಕಾರಿ ಆಸ್ಪತ್ರೆಯನ್ನ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. Please […]

Advertisement

Wordpress Social Share Plugin powered by Ultimatelysocial