ನ್ಯಾಯಬೆಲೆ ಅಂಗಡಿಗೆ ಸಚಿವ ಗೋಪಾಲಯ್ಯ ಭೇಟಿ

ದೊಡ್ಡಬಳ್ಳಾಪುರ:  ಬೆಂಗಳೂರು ಗ್ರಾಮಾಂತರ  ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಸೋಂಪುರ ಹೋಬಳಿಯ ವಿವಿಧ ಗ್ರಾಮಗಳ ನ್ಯಾಯಬೆಲೆ ಅಂಗಡಿಗಳಿಗೆ ಇಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಗೋಪಾಲಯ್ಯ ಭೇಟಿ ನೀಡಿ, ಪಡಿತರ ವಿತರಣೆಯನ್ನು ಪರಿಶೀಲಿಸಿದರು. ಸೋಂಪುರ ಹೋಬಳಿಯ ಹೊನ್ನೇನಹಳ್ಳಿ, ಬಿಲ್ಲಿನಕೋಟೆ ಹಾಗೂ ಶಿವಗಂಗೆ ಗ್ರಾಮದಲ್ಲಿರುವ ನ್ಯಾಯ ಬೆಲೆ ಅಂಗಡಿಗಳಿಗೆ ಭೇಟಿ ನೀಡಿದರು. ಸಮರ್ಪಕ ಪಡಿತರ ವಿತರಣೆ ಜೊತೆಗೆ ವಲಸೆ ಬಂದಿರುವ ಕಾರ್ಮಿಕರಿಗೆ ಪಡಿತರ ಚೀಟಿ ಇಲ್ಲದಿದ್ದರೂ ಸಹ ಅವರ ಆಧಾರ್ ಕಾರ್ಡ್ ನ ವಿವರ ಪಡೆದು ಪಡಿತರ ವಿತರಿಸಬೇಕು.  ನ್ಯಾಯ ಬೆಲೆ ಅಂಗಡಿ ಮಾಲೀಕರು ವಿತರಿಸಲು ಶಿಸ್ತು ಕ್ರಮವಹಿಸಬೇಕು ಎಂದು ತಿಳಿಸಿದರು.

ಸಾರ್ವಜನಿಕರಿಂದ ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ದ ದೂರು ಹಿನ್ನಲೆ, ಭೇಟಿ ನೀಡಲಾಗುತ್ತಿದ್ದು, ತೂಕ ಮತ್ತು ಗುಣಮಟ್ಟ ಕಾಯ್ದುಕೊಳ್ಳುವ ಮೂಲಕ ಬಡವರಿಗೆ ನ್ಯಾಯ ಬೆಲೆ ಅಂಗಡಿ ಮಾಲೀಕರಿಗೆ ನೆರವಾಗಬೇಕು. ನ್ಯಾಯ ಬೆಲೆ ಅಂಗಡಿಗಳ ಮಾಲೀಕರು ಅಕ್ರಮದಲ್ಲಿ ಭಾಗಿಯಾಗಿರುವುದು ಕಂಡುಬಂದಲ್ಲಿ ಯಾವುದೇ ಮುಲಾಜಿಗೊಳಗಾಗದೆ  ಸಂಬಂಧಪಟ್ಟವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ರಾಜ್ಯದ ಕಟ್ಟೆಕಡೆಯ ವ್ಯಕ್ತಿಯ ಹಸಿವು ನಿಗಿಸಲು ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಎಲ್ಲಾ ಆರ್ಹ ವ್ಯಕ್ತ್ತಿಗಳಿಗೆ ಪಡಿತರ ವ್ಯವಸ್ಥೆ ಕಲ್ಪಿಸಲು ಕ್ರಮವಹಿಸಲಾಗುತ್ತಿದ್ದು, ಪ್ರತಿಯೊಬ್ಬರಿಗೂ 2 ಕೆಜಿ ಕಡಲೆಕಾಳು ಹಾಗೂ ರಾಗಿ ವಿತರಣೆ ಮಾಡುವ ಚಿಂತನೆ ಸರ್ಕಾರ ಹೊಂದಿದ್ದು, ಜೂನ್ ತಿಂಗಳಿಂದ ನೂತನ ಯೋಜನೆ ಜಾರಿಯಾಗಲಿದೆ ಎಂದು ಸಚಿವರು ತಿಳಿಸಿದರು.  ನಂತರ ಶಿವಗಂಗೆಯ ದೇವಸ್ಥಾನಕ್ಕೆ ಪ್ರಯಾಣಿಸಿದ ಸಚಿವರು, ಕೊರೊನಾ ಹಿನ್ನಲೆ, ದೇವಸ್ಥಾನದೊಳಗೆ ತೆರಳದೇ, ಬಾಗಿಲಿನಲ್ಲೇ ದೇವರಿಗೆ ಕರ್ಪೂರ ಬೆಳಗಿ ಪ್ರಾರ್ಥನೆ ಸಲ್ಲಿಸಿದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕರಾದ ಸುಬ್ರಹ್ಮಣ್ಯ, ನೆಲಮಂಗಲ ತಾಲ್ಲೂಕು ತಹಶೀಲ್ದಾರ್ ಶ್ರೀನಿವಾಸಯ್ಯ ಹಾಗೂ ಇತರರು ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ಮೇ ೨೮ರಂದು ಸಂಸದೀಯ ಗಣ್ಯರ ಸಭೆ

Wed May 27 , 2020
ಮೇ ೨೮ರಂದು ಬೆಳಿಗ್ಗೆ ೧೦.೩೦ಕ್ಕೆ ವಿಧಾನ ಸೌಧದಲ್ಲಿ ಸಂಸದೀಯ ಗಣ್ಯರ ಸಭೆ ನಡೆಯಲಿದೆ. ಪಕ್ಷಾಂತರ ನಿಷೇಧ ಕಾಯಿದೆಗೆ ಸಂಬAಧಿಸಿದAತೆ ಭಾರತ ಸಂವಿಧಾನದ ಹತ್ತನೇ ಅನುಸೂಚಿಯಲ್ಲಿ ಪೀಠಾಸೀನ ಅಧಿಕಾರಿಗಳಿಗೆ ಲಭ್ಯವಿರುವ ಅಧಿಕಾರಿಗಳು ಹಾಗೂ ಅದರ ಅಡಿಯಲ್ಲಿ ರಚಿಸಲಾದ ನಿಯಮಗಳ ಮರು ಪರಿಶೀಲನೆ ಕುರಿತಂತೆ ಅಭಿಪ್ರಾಯ ಪಡೆಯಲು ಈ ಸಭೆ ಆಯೋಜಿಸಲಾಗಿದೆ.  ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, […]

Advertisement

Wordpress Social Share Plugin powered by Ultimatelysocial