ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಕ

ಕೊರೊನಾ ಭೀತಿಯಿಂದಾಗಿ ಚುನಾವಣೆ ನಡೆಸುವುದು ಕಷ್ಟವಾಗಿರುವುದರಿಂದ ರಾಜ್ಯದ ಎಲ್ಲಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊರೊನಾ ಇರುವುದರಿಂದ ಸಕಾಲದಲ್ಲಿ ಚುನಾವಣೆ ನಡೆಸಲು ಸಾಧ್ಯವಾಗುತ್ತಿಲ್ಲ. ಪಂಚಾಯಿತಿಗಳ ಅವಧಿ ಪೂರ್ಣಗೊಂಡಿರುವುದರಿಂದ ಆಡಳಿತಾಧಿಕಾರಿ ನೇಮಿಸಲು ಸರಕಾರ ನಿರ್ಧರಿಸಿದೆ. ಜತೆಗೆ ಮುಂದಿನ 2ರಿಂದ 3 ತಿಂಗಳಲ್ಲಿ ಚುನಾವಣೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳುವಂತೆಯೂ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. 6 ತಿಂಗಳ ಒಳಗೆ ಚುನಾವಣೆ
ನಡೆಸಲಾಗುತ್ತದೆ ಎಂದು ಸಂಪುಟ ಸಭೆಯ ವಿವರ ನೀಡಿದ ಕಾನೂನು ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿಗಳಿಗೆ ಈಗಾಗಲೇ ಚುನಾವಣೆ ನಡೆಯಬೇಕಿತ್ತು. ಆದರೆ, ಸರ್ಕಾರ ಈ ವರೆಗೆ ಚುನಾವಣೆ ನಡೆಸಲು ಮುಂದಾಗಿಲ್ಲ. ಹೀಗಾಗಿ ವಿರೋಧ ಪಕ್ಷಗಳು ಕಳೆದ ಹಲವು ದಿನಗಳಿಂದ ಚುನಾವಣೆಗೆ ಆಗ್ರಹಿಸುತ್ತಿದ್ದಾರೆ. ಹೀಗಾಗಿ ಶೀಘ್ರದಲ್ಲಿ ಚುನಾವಣೆ ನಡೆಯಲಿದೆ. ಆದರೆ, ಚುನಾವಣೆ ನಡೆಯುವವರೆಗೆ ಜಿಲ್ಲಾಧಿಕಾರಿ ಮಟ್ಟದಲ್ಲಿ ಪ್ರತಿಯೊಂದು ಪಂಚಾಯತಿಗಳಿಗೂ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ಮಾಹಿತಿ ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವುದು ಅಪರಾಧ

Fri Jun 12 , 2020
ಬಾಲ ಕಾರ್ಮಿಕ ಪದ್ಧತಿಯಂತಹ ಸಮಾಜ ವಿರೋಧಿ ಆಚರಣೆ ಕುರಿತು ಇರುವ ಕಾನೂನುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಸಾರ್ವಜನಿಕರು ಹಾಗೂ ಅಧಿಕಾರಿಗಳು ಒಗ್ಗೂಡಿ ಕಾರ್ಯನಿರ್ವಹಿಸಬೇಕು. 14 ವರ್ಷದೊಳಗಿನ ಯಾವುದೇ ಮಕ್ಕಳನ್ನು, ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ […]

Advertisement

Wordpress Social Share Plugin powered by Ultimatelysocial