ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ ಎಲ್ಲರಿಗೂ ಆಹಾರ ಧಾನ್ಯ

ಪಡಿತರ ಹಂಚದೆ ಗ್ರಾಹಕರಿಗೆ ಮೋಸ ಮಾಡಿದವರಿದ್ದರೆ ಅವರಿಗೆ ಮುಂದಿನ ತಿಂಗಳಿನ ಆಹಾರಧಾನ್ಯ ನೀಡುವುದಿಲ್ಲ ಎಂದು ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಪಡಿತರ ಆಹಾರ ವಿತರಣೆ ಸರಿಯಾಗಿ ಆಗುತ್ತಿದೆಯೋ ಇಲ್ಲವೋ ಗಮನಿಸಲು ಅಧಿಕಾರಿಗಳ 8-10 ತಂಡಗಳನ್ನು ಮಾಡಿ ಪರಿಶೀಲಿಸಲು ಸೂಚಿಸಲಾಗಿದೆ. ದಿನಸಿ ಅಂಗಡಿಗಳಲ್ಲಿ ಆಹಾರ ಧಾನ್ಯಗಳ ದರ ಫಲಕ ಹಾಕಬೇಕು. ದುಬಾರಿ ದರಕ್ಕೆ ಮಾರಾಟ ಆಗದಂತೆ ಕ್ರಮ ವಹಿಸಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ ಎಲ್ಲರಿಗೂ ಆಹಾರ ಧಾನ್ಯ ಪೂರೈಸಲು ಹಾಗೂ ಈ ಬಗ್ಗೆ ನ್ಯಾಯಬೆಲೆ ಅಂಗಡಿಗಳ ಎದುರು ಮಾಹಿತಿ ಫಲಕ ಹಾಕಲು ಸಹ ಆದೇಶಿಸಲಾಗಿದೆ ಎಂದು ಸಚಿವ ಗೋಪಾಲಯ್ಯ ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಬಾಲಿವುಡ್ ಜನಪ್ರಿಯ ನಟ ಇರ್ಫಾನ್ ಖಾನ್ ಇನ್ನಿಲ್ಲ

Wed Apr 29 , 2020
ಮುಂಬೈ: ಕ್ಯಾನ್ಸರ್ನಿಂದ ಬಳಲುತ್ತಿದ್ದ ಬಾಲಿವುಡ್ ಜನಪ್ರಿಯ ನಟ ಇರ್ಫಾನ್ ಖಾನ್ ಕೊನೆಯುಸಿರೆಳೆದಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳತ್ತಿದ್ದ ಇವರನ್ನು ಮುಂಬೈನ ಕೋಕಿಲಾಬೆನ್ ಧೀರೂಬಾಯಿ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ತಮ್ಮ 54ನೇ ವಯಸ್ಸಿನಲ್ಲಿ ಸಾವನ್ನಪ್ಪಿದ್ದಾರೆ. ಬಾಲಿವುಡ್ ನಟ ಇರ್ಫಾನ್ ಖಾನ್ ವಿಧಿವಶ ಹಿನ್ನೆಲೆ  ಕೇಜ್ರಿವಾಲ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇರ್ಫಾನ್ ಖಾನ್ ನಿಧನಕ್ಕೆ ಸಂತಾಪ ಸೂಚಿಸಿದ್ದು, ಅವರ ನಿಧನ ನಮಗೆ […]

Advertisement

Wordpress Social Share Plugin powered by Ultimatelysocial