ಪಡಿತರ ಚೀಟಿದಾರರಿಗೆ ಬಿಗ್ ರಿಲೀಫ್

ಕೇಂದ್ರ ಸರ್ಕಾರದ ನಿರ್ಧಾರದಿಂದ ಪಡಿತರ ಚೀಟಿದಾರರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ದೇಶಾದ್ಯಂತ ಹೊಸ ನಿಯಮ ಜಾರಿಯಾಗ್ತಿದೆ. ಈ ಮೂಲಕ ಪಡಿತರ ಚೀಟಿಯಿಂದ ಆಹಾರ ಧಾನ್ಯ ಪಡೆಯುವವರಿಗೆ ಸಿಹಿ ಸುದ್ದಿ ಸಿಕ್ಕಿದೆ.

ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಲಾಗಿದ್ದು, ಇದರ ನಂತರ ಎಲ್ಲಾ ಅಂಗಡಿಗಳಲ್ಲಿ ಆನ್‌ಲೈನ್ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್(ಪಿಒಎಸ್) ಸಾಧನಗಳನ್ನು ಕಡ್ಡಾಯಗೊಳಿಸಲಾಗಿದೆ.

ರಾಷ್ಟ್ರೀಯ ಆಹಾರ ಭದ್ರತಾ ಕಾನೂನಿನ ಅಡಿಯಲ್ಲಿ ಪಡಿತರ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್ ಮಾಪಕಗಳೊಂದಿಗೆ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್(ಇಪಿಒಎಸ್) ಸಾಧನಗಳನ್ನು ಲಿಂಕ್ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ, ಇದರಿಂದಾಗಿ ಫಲಾನುಭವಿಗಳು ಪೂರ್ಣ ಪ್ರಮಾಣದ ಆಹಾರ ಧಾನ್ಯಗಳನ್ನು ಪಡೆಯಬಹುದು. ಇದಕ್ಕಾಗಿ ಕಾನೂನು ನಿಯಮಗಳನ್ನು ತಿದ್ದುಪಡಿ ಮಾಡಿದೆ.

ನ್ಯಾಯಬೆಲೆ ಅಂಗಡಿಗಳನ್ನು ಆನ್‌ಲೈನ್ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್(ಪಿಒಎಸ್) ಸಾಧನಗಳೊಂದಿಗೆ ಲಿಂಕ್ ಮಾಡಲಾಗಿದೆ. ಈಗ ಪಡಿತರ ತೂಕದಲ್ಲಿ ದೋಷಕ್ಕೆ ಅವಕಾಶವಿಲ್ಲ. ಸಾರ್ವಜನಿಕ ವಿತರಣಾ ವ್ಯವಸ್ಥೆಯ(ಪಿಡಿಎಸ್) ಫಲಾನುಭವಿಗಳಿಗೆ ಯಾವುದೇ ಸಂದರ್ಭದಲ್ಲಿ ಕಡಿಮೆ ಪಡಿತರ ಸಿಗದಂತೆ ನೋಡಿಕೊಳ್ಳಲು, ಹೈಬ್ರಿಡ್ ಮಾದರಿಯ ಪಾಯಿಂಟ್ ಆಫ್ ಸೇಲ್ ಯಂತ್ರಗಳನ್ನು ಪಡಿತರ ವಿತರಕರಿಗೆ ನೀಡಲಾಗಿದೆ. ನೆಟ್‌ವರ್ಕ್ ಇಲ್ಲದಿದ್ದರೆ ಈ ಯಂತ್ರಗಳು ಆಫ್‌ಲೈನ್ ಮತ್ತು ಆನ್‌ಲೈನ್ ಮೋಡ್‌ನಲ್ಲಿ ಕಾರ್ಯನಿರ್ವಹಿಸುತ್ತವೆ. ಇದೀಗ ಫಲಾನುಭವಿಗಳು ತಮ್ಮ ಡಿಜಿಟಲ್ ಪಡಿತರ ಚೀಟಿಯನ್ನು ಬಳಸಿಕೊಂಡು ದೇಶದ ಯಾವುದೇ ನ್ಯಾಯಬೆಲೆ ಅಂಗಡಿಯಿಂದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಸರಕುಗಳನ್ನು ಖರೀದಿಸಲು ಸಾಧ್ಯವಾಗುತ್ತದೆ ಎಂದು ಹೇಳಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಿಕ್ಷಕರ ನಿದ್ದೆಗೆಡಿಸಿದ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ.

Mon Feb 27 , 2023
ಕೊರಟಗೆರೆ: ನೂತನ ಬಿಇಒ ಅಧಿಕಾರ ಸ್ವೀಕಾರ ಮಾಡಿದ ಕೆಲವೇ ದಿನಗಳಲ್ಲಿ ಶಿಕ್ಷಕರು ಶಾಲೆಗೆ ಬರುವ ಮುಂಚೆಯೇ ಶಾಲೆಯ ಮುಂದೆ ಹಾಜರಾಗುವ ಮೂಲಕ ಶಿಕ್ಷಕ ಸಮೂಹಕ್ಕೆ ಬ್ಲಾಕ್ ಶಿಕ್ಷಣಾಧಿಕಾರಿ ನಟರಾಜು ಸಿ.ವಿ ಶಾಕ್ ನೀಡಿದ್ದಾರೆ.ಕೊರಟಗೆರೆ ತಾಲೂಕಿನಲ್ಲಿ ಇತ್ತೀಚಿಗೆ ನೂತನವಾಗಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನಟರಾಜ್ ಹಲವು ಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡುವ ಮೂಲಕ ಶಿಕ್ಷಕರಿಗೆ ಅಚ್ಚರಿ ಮೂಡಿಸಿದ್ದಾರೆ.ಇಷ್ಟ ಬಂದಾಗ ಶಾಲೆಗೆ ಬರುವುದು, ಅವಶ್ಯಕತೆ ಬಿದ್ದರೆ ನಿಗದಿತ ಸಮಯಕ್ಕಿಂತ ಮುಂಚಿತವಾಗಿ […]

Advertisement

Wordpress Social Share Plugin powered by Ultimatelysocial