ಪರಿಸರದ ಮೇಲಿನ ಕಾಳಜಿ ಕಡಿಮೆಯಾಗುತ್ತಿದೆ

 ಬೀದರ್ : ಇಂದು ಮನುಷ್ಯ ಭೌತಿಕ ಸುಖದತ್ತ ಸಾಗುತ್ತಿರುವುದು ಹಾಗೂ ಪರಿಸರದ ಮೇಲಿನ ಕಾಳಜಿ ಕಡಿಮೆ ಆಗುತ್ತಿರುವ ಪರಿಣಾಮ ಅರಣ್ಯ, ಹಸಿರು ಪ್ರದೇಶ ಕುಸಿಯುತ್ತಿದೆ ಎಂದು ಶಾಸಕ ಈಶ್ವರ ಖಂಡ್ರೆ  ಆತಂಕ ವ್ಯಕ್ತ ಪಡಿಸಿದರು.  ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಪ್ರಾದೇಶಿಕ ಮತ್ತು ಸಾಮಾಜಿಕ ಅರಣ್ಯ ವಲಯ ಭಾಲ್ಕಿ ವತಿಯಿಂದ ಗುರುವಾರ ಆಯೋಜಿಸಿದ್ದ ರೈತರು, ಸಾರ್ವಜನಿಕರಿಗೆ ಸಸಿ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಭಲ್ಕಿ ತಾಲೂಕಿನಲ್ಲಿ ಈ ಬಾರಿ ಸುಮಾರು 1.5 ಲಕ್ಷ ಸಸಿ ನೆಡುವ ಗುರಿ ಹೊಂದಲಾಗಿದೆ . ಪರಿಸರ ರಕ್ಷಿಸಿದರೇ ಮಾತ್ರ ನಮ್ಮತನ, ಮುಂದಿನ ಉಳಿವು ಸಾಧ್ಯ ಎನ್ನುವುದು ಎಲ್ಲರೂ ಅರಿತು ಹೆಚ್ಚೆಚ್ಚು ಗಿಡಗಳನ್ನು ಪೋಷಿಸುವುದರ ಜತೆಗೆ ಮಕ್ಕಳಲ್ಲಿ ಪರಿಸರದ ಅಗತ್ಯತೆ ಬಗ್ಗೆ ತಿಳಿ ಹೇಳುವ ಕೆಲಸ ಆಗಬೇಕಿದೆ ಎಂದು ಖಂಡ್ರೆ ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಅಫಘಾತ: ಯುವಕ ಯುವತಿಗೆ ಗಂಭೀರ ಗಾಯ

Thu Jun 4 , 2020
ಮಂಗಳೂರು: ನಿಲ್ಲಿಸಿದ್ದ ಲಾರಿಯೊಂದಕ್ಕೆ   ಚಾಲಕನ ನಿಯಂತ್ರಣ ತಪ್ಪಿ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಯುವತಿ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕೋಟೆಕಾರ್ ಬೀರಿಯಲ್ಲಿ ನಡೆದಿದೆ. ನಗರದ ರಸ್ತೆಯ ಅಂಚಿನಲ್ಲಿ ಲಾರಿ ನಿಂತಿತ್ತು.ಆಗ ಲಾರಿಯನ್ನು ಗಮನಿಸದ ಬೈಕ್ ಸವಾರ ನಿಯಂತ್ರಣ ಕಳೆದುಕೊಂಡು ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾನೆ. ಘಟನೆಯಲ್ಲಿ ಬೈಕ್ ಮುಂಭಾಗ ನಜ್ಜುಗುಜ್ಜಾಗಿದ್ದು ಇಬ್ಬರೂ ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ತಕ್ಷಣವೇ ಸ್ಥಳೀಯರು ಇಬ್ಬರನ್ನೂ […]

Advertisement

Wordpress Social Share Plugin powered by Ultimatelysocial