ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಸುರೇಶ್‌ಕುಮಾರ್

ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಸಚಿವರಾದ ಎಸ್.ಸುರೇಶ್‍ ಕುಮಾರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ವಿವಿಧ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ  ಕೊರೊನಾ ವೈರಸ್ ಸೋಂಕು ಹರಡದಂತೆ ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಂಡಿರುವ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಲು ನಿನ್ನೆ ಭೇಟಿ ನೀಡಿದ್ದರು. ಶಿಕ್ಷಣ ಸಚಿವರು ಮೊದಲಿಗೆ ನೆಲಮಂಗಲದ ತಾಲ್ಲೂಕಿನ ತ್ಯಾಮಗೊಂಡ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ, ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದನ್ನು ವೀಕ್ಷಿಸಿ, ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ,  ನಂತರ ನೆಲಮಂಗಲದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೂ ಭೇಟಿ ನೀಡಿದರು.

 

Please follow and like us:

Leave a Reply

Your email address will not be published. Required fields are marked *

Next Post

ಶಾಸಕರು,ಸಂಸದರೊಂದಿಗಿನ ಸಭೆ ರದ್ದು

Sun Jul 5 , 2020
ಬಿಜೆಪಿ ಪಕ್ಷದ ಶಾಸಕರು ಹಾಗೂ ಸಂಸದರೊಂದಿಗೆ ಜುಲೈ 6ರಂದು ನಡೆಯಬೇಕಿದ್ದ ಸಭೆಯೊಂದನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇದ್ದಕ್ಕಿದ್ದಂತೆಯೇ ರದ್ದುಪಡಿಸಿದ್ದಾರೆಂದು ಮೂಲಲಗಳು ತಿಳಿಸಿವೆ. ಬೆಂಗಳೂರಿನಲ್ಲಿ ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವಲ್ಲೇ ಮುಖ್ಯಮಂತ್ರಿಗಳು ಇದ್ದಕ್ಕಿದ್ದಂತೆ ಸಭೆ ರದ್ದುಪಡಿಸಿರುವುದು ಎಲ್ಲರಲ್ಲೂ ಆಶ್ಚರ್ಯವನ್ನುಂಟು ಮಾಡಿದೆ. ಸಭೆ ರದ್ದುಪಡಿಸಿರುವ ಕುರಿತು ಮುಖ್ಯಮಂತ್ರಿಗಳ ಕಚೇರಿ ಯಾವುದೇ ರೀತಿಯ ಕಾರಣಗಳನ್ನೂ ನೀಡಿಲ್ಲ. ಮೂಲಗಳ ಪ್ರಕಾರ ಮುಖ್ಯಮಂತ್ರಿಗಳು ಸ್ವತಃ ಪಕ್ಷದ ಸಂಸದರು ಹಾಗೂ ಶಾಸಕರೊಂದಿಗೆ ಸಭೆ ನಡೆಸಲು […]

Advertisement

Wordpress Social Share Plugin powered by Ultimatelysocial