ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಜರ್ ಸಿಂಪಡಣೆ

ಕೊವಿಡ್-19 ರೋಗದ ಹಿನ್ನೆಲೆಯಲ್ಲಿ ಜೂ.18ರಂದು ನಿಗದಿಯಾಗಿರುವ ಬಾಕಿ ಉಳಿದಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗಾಗಿ ಜಿಲ್ಲಾಡಳಿತ ಸರ್ವ ಸಿದ್ದತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕೊಪ್ಪಳ ಜಿಲ್ಲೆಯ ಎಲ್ಲಾ 18 ಪರೀಕ್ಷಾ ಕೇಂದ್ರಗಳಿಗೆ ನಗರಸಭೆ ಪಟ್ಟಣ ಪಂಚಾಯ್ತಿ ಪುರಸಭೆ ಗ್ರಾಮ ಪಂಚಾಯ್ತಿಗಳ ಮೂಲಕ ಸ್ಯಾನಿಟೈಜರ್ ಸಿಂಪಡಣೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 13892 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇವರಲ್ಲಿ 792 ವಿದ್ಯಾರ್ಥಿಗಳು ಹೊರಜಿಲ್ಲೆಯಲ್ಲಿ ಓದುತ್ತಿದ್ದು ಆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ. ಹೊರ ಜಿಲ್ಲೆಯಲ್ಲಿ ಓದುವ ವಿದ್ಯಾರ್ಥಿಗಳು ಸೇರಿ ಕೊಪ್ಪಳ ಜಿಲ್ಲೆಯಲ್ಲಿರುವ ವಿದ್ಯಾರ್ಥಿಗಳ ಸುರಕ್ಷತಾ ಮುನ್ನೆಚ್ಚರಿಕೆ ವಹಿಸಲಾಗಿದೆ.

 

Please follow and like us:

Leave a Reply

Your email address will not be published. Required fields are marked *

Next Post

ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಪರದಾಟ

Wed Jun 17 , 2020
ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಡಯಾಲಿಸಿಸ್ ಕೇಂದ್ರದಲ್ಲಿ ಅಗತ್ಯ ಪರಿಕರಗಳ ಸ್ಟಾಕ್ ಖಾಲಿಯಾಗಿದ್ದರಿಂದ ಬುಧವಾರ ಡಯಾಲಿಸಿಸ್ ರೋಗಿಗಳು ಪರದಾಡುವಂತಾಗಿದೆ. ಪ್ರತಿದಿನ ಸುಮಾರು ೨೭ ಜನ ಇಲ್ಲಿ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದಾರೆ. ಆದರೆ, ಬೆಳಗ್ಗೆಯೇ ಡಯಾಲಿಸಿಸ್ ಮಾಡಿಸಿಕೊಳ್ಳಲು ಆಗಮಿಸಿದವರಿಗೆ ಅಗತ್ಯ ಪರಿಕರಗಳಾದ ಹೆಪಾರಿನ್ ಇಂಜೆಕ್ಷನ್ ಮತ್ತಿತರ ಪರಿಕರ ಖಾಲಿಯಾಗಿವೆ. ಸರಬರಾಜು ಆಗಿಲ್ಲ ಎನ್ನುವ ಉತ್ತರ ಬರುತ್ತಲೇ ಆತಂಕಕ್ಕೊಳಗಾಗಿದ್ದಾರೆ. ಜತೆಗೆ ವಾರದಲ್ಲಿ ಮೂರು ದಿನ ಮಾಡಬೇಕಾದ ಡಯಾಲಿಸಿಸ್ ಅನ್ನು ವಾರಕ್ಕೆ ಒಂದು ಅಥವಾ ಎರಡು ಸಲಕ್ಕೆ ಇಳಿಕೆ […]

Advertisement

Wordpress Social Share Plugin powered by Ultimatelysocial