ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳನ್ನು ಪಾಸ್ ಮಾಡಿ  

ಆನ್‍ಲೈನ್ ತರಗತಿಗಳು ಬೇಡ ಎಂದು ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ನಾಗರಾಜ್ ವಿಧಾನಸೌಧದ ಎದುರು ಇಂದು ವಿನೂತನ ಚಳವಳಿ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಂಧ್ರ, ತೆಲಂಗಾಣ ಮುಂತಾದ ರಾಜ್ಯಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ರದ್ದು ಮಾಡಲಾಗಿದೆ. ಹಾಗಾಗಿ ಸೋಂಕು ನಿವಾರಣೆಯಾಗುವವರೆಗೂ ಶಾಲೆಗಳು ಆರಂಭವಾಗುವುದಾಗಲಿ, ಪರೀಕ್ಷೆ ನಡೆಸುವುದನ್ನಾಗಲಿ ಮಾಡಬಾರದು ಅದಲ್ಲದೇ ಫಾರ್ಮಸಿ, ಎಂಜಿನಿಯರಿಂಗ್, ಡಿಪ್ಲೊಮಾ ಸೇರಿದಂತೆ ಎಲ್ಲ ಪದವಿ ಪರೀಕ್ಷೆಗಳನ್ನು ಸಂಪೂರ್ಣ ರದ್ದುಗೊಳಿಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕು. ವಿದ್ಯಾರ್ಥಿಗಳಿಗೆ ಸೋಂಕು ವ್ಯಾಪಿಸಿದರೆ ಕುಟುಂಬಗಳು ಪರಿತಪಿಸಬೇಕಾಗುತ್ತದೆ. ಹೀಗಾಗಿ ಸರ್ಕಾರ ಸೋಂಕು ನಿವಾರಣೆಯತ್ತ ಹೆಚ್ಚಿನ ಗಮನ ಹರಿಸಲಿ ಎಂದು ಹೇಳಿದರು.

 

 

Please follow and like us:

Leave a Reply

Your email address will not be published. Required fields are marked *

Next Post

ಡಿಕೆ ಶಿ ಪದಗ್ರಹಣ ಸಮಾರಂಭಕ್ಕೆ ಸಿಎಂ ಗ್ರೀನ್ ಸಿಗ್ನಲ್

Thu Jun 11 , 2020
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪದಗ್ರಹಣ ಕಾರ್ಯಕ್ರಮಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಅನುಮತಿ ನೀಡಿದ್ದು, ಡಿ.ಕೆ.ಶಿವಕುಮಾರ್ ಅವರು ಯಾವಾಗ ಬೇಕಾದರೂ ಕಾರ್ಯಕ್ರಮ ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಡಿ.ಕೆ.ಶಿವಕುಮಾಆರ್ ಜೊತೆ ಮಾತನಾಡಿ ಕಾರ್ಯಕ್ರಮ ಮಾಡಿಕೊಳ್ಳಲು ಅನುಮತಿ ನೀಡಿದ್ದಾಗಿ ಹೇಳಿದರು. ಜೂನ್ 14 ರಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕರಿಸಲು ಕಾರ್ಯಕ್ರಮ ನಿಗದಿಯಾಗಿತ್ತು. ಕಾರ್ಯಕ್ರಮಕ್ಕೆ ಅನುಮತಿ ಕೋರಿ ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು. ಲಾಕ್ ಡೌನ್ ಮಾರ್ಗಸೂಚಿ ಹಿನ್ನೆಲೆಯಲ್ಲಿ […]

Advertisement

Wordpress Social Share Plugin powered by Ultimatelysocial