ಚಾಮರಾಜನಗರ 450 ಹಾಸಿಗೆಯ ಸರ್ಕಾರಿ ಆಸ್ಪತ್ರೆಯನ್ನ ರಾಷ್ಟ್ರಪತಿಯಿಂದ ಉದ್ಘಾಟನೆ

ಚಾಮರಾಜನಗರನಗರದ ಹೊರವಲಯದ ಯಡಬೆಟ್ಟದಲ್ಲಿ ಬಳಿ ನಿರ್ಮಿಸಿರುವ 450 ಹಾಸಿಗೆಯ ಸರ್ಕಾರಿ ಆಸ್ಪತ್ರೆಯನ್ನ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇಂದು ಉದ್ಘಾಟಿಸಿದರು. ಇದಕ್ಕೂ ಮುನ್ನ ರಾಷ್ಟ್ರಪತಿಗಳು ಬಿಳಿಗಿರಿರಂಗನಬೆಟ್ಟದ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರುಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ರಾಷ್ಟ್ರಪತಿಗೆ‌‌ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ‌.ಸೋಮಶೇಖರ್ ಹಾಜರಿದ್ದರು.

ಭಾರತೀಯ ವೈದ್ಯಕೀಯ ಮಂಡಳಿಯ ಮಾರ್ಗಸೂಚಿಗಳ ಅನ್ವಯ ರಾಜ್ಯ ಸರ್ಕಾರವು 2018-19ನೇ ಸಾಲಿನಲ್ಲಿ 450 ಹಾಸಿಗೆಗಳ ಹೊಸ ಆಸ್ಪತ್ರೆಯನ್ನು ನಿರ್ಮಿಸಲು ಅನುಮೋದನೆ ನೀಡಿತ್ತು. 450 ಹಾಸಿಗೆಗಳ ಬಹುಮಹಡಿ (ನಾಲ್ಕು ಅಂತಸ್ತು) ಬೋಧನಾ ಆಸ್ಪತ್ರೆ 30,728 .ಮಿ. ವಿಸ್ತೀರ್ಣ ಹೊಂದಿದ್ದು, ಇದನ್ನು 166.5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಹೊಸ ಬೋಧನಾ ಆಸ್ಪತ್ರೆಯಲ್ಲಿ 9 ಆಧುನಿಕ ಆಪರೇಷನ್ ಥಿಯೇಟರ್ಗಳು, ಸುಸಜ್ಜಿತ 50 ಹಾಸಿಗೆ ಐಸಿಯು ವಾರ್ಡ್ಗಳು, 20 ಕೆ.ಎಲ್ ದ್ರವ ಆಮ್ಲಜನಕ ಸಂಗ್ರಹ ಟ್ಯಾಂಕ್, 2,000 ಎಲ್ಪಿಎಂ ಸಾಮರ್ಥ್ಯದ ಆಮ್ಲಜನಕ ಜನರೇಟರ್ಗಳು, ಕೇಂದ್ರಿತ ವೈದ್ಯಕೀಯ ಗ್ಯಾಸ್ ಪೈಪ್ಲೈನ್ ವ್ಯವಸ್ಥೆ, ಹೊರರೋಗಿಗಳು (ಒಪಿಡಿ) ಮತ್ತು ಒಳರೋಗಿಗಳು (ಐಪಿಡಿ) ವಿಭಾಗಗಳಲ್ಲದೆ 30 ಹಾಸಿಗೆಗಳ ತುರ್ತು ವಿಭಾಗ ಕೂಡ ಇವೆ.

ಇನ್ನು ಈ ಆಸ್ಪತ್ರೆಯಲ್ಲಿ  ನೆಲ ಮಹಡಿಯಲ್ಲಿ ಸಾಮಾನ್ಯ ಔಷಧ, ಚರ್ಮ, ಮನೋವೈದ್ಯಶಾಸ್ತ್ರ, ಕ್ಷಯರೋಗ ಮತ್ತು ಎದೆ, ದಂತ ವೈದ್ಯಶಾಸ್ತ್ರ, ಸಾಮಾನ್ಯ ಶಸ್ತ್ರಚಿಕಿತ್ಸೆ, ಮೂಳೆ, ರೇಡಿಯಾಲಜಿ, ಇಎನ್ಟಿ, ನೇತ್ರ ಚಿಕಿತ್ಸೆ ಮತ್ತು ತುರ್ತು ಚಿಕಿತ್ಸೆ ವಲಯಗಳು ಇರಲಿವೆ. ಮೊದಲ ಮಹಡಿಯಲ್ಲಿ ವಿಶೇಷ ಅರೆ ವಿಶೇಷ ಮತ್ತು ಸಾಮಾನ್ಯ ವಾರ್ಡ್ಗಳು, ರಕ್ತಕೇಂದ್ರ, ಮುಖ್ಯಸ್ಥರ ಕೊಠಡಿ, ಆಸ್ಪತ್ರೆ ಕಚೇರಿ ಮತ್ತು ಕೇಂದ್ರ ಔಷಧಾಲಯಗಳಿವೆ.

ಎರಡನೇ ಮಹಡಿಯಲ್ಲಿ ಸಮಾಲೋಚನೆ ಕೊಠಡಿ, ಔಷಧಾಲಯ, ಸಾಮಾನ್ಯವಾರ್ಡ್, ವಿಶೇಷ ವಾರ್ಡ್, ಹಿರಿಯ ಮತ್ತು ಕಿರಿಯ ವೈದ್ಯರ ವಿಶ್ರಾಂತಿ ಕೊಠಡಿಗಳು ಇವೆ. ಮೂರನೇ ಮಹಡಿಯು ಉಪನ್ಯಾಸ ಸಭಾಂಗಣ, ಗ್ರಂಥಾಲಯ, ರೋಗಾಣು ಮುಕ್ತ ಸಂಗ್ರಹ ಕೊಠಡಿ, ಅಭ್ಯಾಸ ಕೊಠಡಿ, ಔಷಧಾಲಯ, ವಸ್ತ್ರಗಳ ಕೊಠಡಿ, ಸಾಮಾನ್ಯವಾರ್ಡ್, ಅರೆ ವಿಶೇಷ ವಾರ್ಡ್, ವಿಶೇಷ ವಾರ್ಡ್, ವೈದ್ಯರ ವಿಶ್ರಾಂತಿ ಕೊಠಡಿಗಳು ಇವೆ. ನಾಲ್ಕನೇ ಮಹಡಿಯಲ್ಲಿ ಐಸಿಯು, ವಿಐಪಿ ವಾರ್ಡ್, ಸಿದ್ಧತಾ ಕೊಠಡಿ, ಪೂರ್ವಆಪರೇಟಿವ್ ರೂಂ, ಉಪನ್ಯಾಸ ಕೊಠಡಿ, ಡೆಮೊಕೊಠಡಿ, ಕೇಂದ್ರಿತ ಸಂಗ್ರಹಕೊಠಡಿ, ಸರ್ವರ್ ರೂಂ, ವೈದ್ಯರು ಮತ್ತು ನರ್ಸ್ ವಿಶ್ರಾಂತಿ ಕೊಠಡಿಗಳಿವೆ

Please follow and like us:

Leave a Reply

Your email address will not be published. Required fields are marked *

Next Post

HDK ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು RSS ಅನ್ನು ಟೀಕಿಸುವುದು ತಪ್ಪು;ಆರ್‌ ಅಶೋಕ್

Thu Oct 7 , 2021
ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮತ್ತು ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಆರ್ ಎಸ್ ಎಸ್ ಅನ್ನು ಟೀಕಿಸುವುದು ತಪ್ಪು. ಎಲ್ಲವನ್ನು ತಿಳಿದುಕೊಂಡು ಮಾತನಾಡಬೇಕು, ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಆರ್‌ ಎಸ್‌ ಎಸ್‌ ಒಂದು ದೇಶಭಕ್ತ ಸಂಘಟನೆ. ಸೇವೆಯೆ ಅದರ ಮೂಲಮಂತ್ರ. ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ಬಂಧಿತರಾದವರು ಶೇಕಡ 80 ರಷ್ಟು ಜನ ಆರ್‌ ಎಸ್‌ ಎಸ್‌ ಗೆ ಸೇರಿದವರು. […]

Advertisement

Wordpress Social Share Plugin powered by Ultimatelysocial