ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಧರಣಿ

ಅಂತಾರಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಕಡಿಮೆ ಇದ್ದರೂ, ಬ್ಯಾರಲ್‌ಗೆ ೧೩೦ ರೂ ಡಾಲರ್ ಇದ್ದರೂ, ಇಲ್ಲಿ ಪೆಟ್ರೋಲ್ ಡೀಸೆಲ್ ದರ ಏರಿಕೆ ಮಾಡಿದ್ದಾರೆ. ನನ್ನ ಪ್ರಕಾರ ಪೆಟ್ರೋಲ್‌ಗೆ ೨೫ ರೂ ಮಾಡಬೇಕಾಗಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಸತತ ತೈಲ ದರ ಏರಿಕೆ ಮಾಡುತ್ತಿರುವ ಕೇಂದ್ರ ಸರಕಾರದ ನೀತಿಯನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ಇಂದು ಸೈಕಲ್ ಸವಾರಿ ಮಾಡಿದರು. ಇದಕ್ಕೂ ಮೊದಲು ಮಾತನಾಡಿದ ಅವರು, ಕೇಂದ್ರದಲ್ಲಿ ಮನಮೋಹನ್ ಸಿಂಗ್ ಸರ್ಕಾರ ಇದ್ದಾಗ ಸಬ್ಸಿಡಿ ಕೊಟ್ಟಿತ್ತು. ಈಗ ಈ ಸರ್ಕಾರ ಯಾವುದೂ ಕೊಟ್ಟಿಲ್ಲ. ಸಾಮಾನ್ಯ ಜನರ ಮೇಲೆ ದುಬಾರಿ ಬೆಲೆ ಹಾಕ್ತಿದೆ. ರೈತರಿಗೆ ಹಾಗೂ ಕೈಗಾರಿಕೆಗಳಿಗೆ ದುಬಾರಿಯಾಗಿದೆ. ಕೊರೊನಾ ಸೋಂಕು ಇದ್ದರೂ ಕಳೆದ ೧೦ ದಿನಗಳಿಂದ ೧೧ ರೂ ಹೆಚ್ಚಿಸಿದ್ದಾರೆ. ನರೇಂದ್ರ ಮೋದಿ ಸರ್ಕಾರ ಬಡವರ ಮೇಲೆ ಬರೆ ಹಾಕಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರದ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಕೊರೊನಾÀÄ ನಿರ್ವಹಣೆಯಲ್ಲಿ ಸರ್ಕಾರ ವಿಫಲ ಆಗಿರುವುದರ ಬಗ್ಗೆಯೂ ಪ್ರತಿಭಟನೆ ಮಾಡ್ತೀವಿ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಸರ್ಕಾರಕ್ಕೆ ಈಗ ಎಚ್ಚರವಾಗಿದೆ - ಹೆಚ್.ಕೆ.ಕುಮಾರಸ್ವಾಮಿ

Mon Jun 29 , 2020
ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ ರಾಜ್ಯದಲ್ಲಿ ಕೋವಿಡ್-೧೯ ಸೋಂಕು ವ್ಯಾಪಕವಾಗಿ ಹರಡಿದ ನಂತರ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಕೆ.ಕುಮಾರಸ್ವಾಮಿ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಎರಡು ತಿಂಗಳು ತಡವಾಗಿಯಾದರೂ ಎಚ್ಚೆತ್ತುಕೊಂಡಿದೆ. ರಾಜ್ಯ ಸರ್ಕಾರದ ಬೇಜವಾಬ್ದಾರಿತನದ ನೀತಿಯಿಂದ ರಾಜ್ಯದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಕೊರೊನಾ ಹೆಚ್ಚಳವಾಗಿದೆ. ಇದಕ್ಕೆ ರಾಜ್ಯ ಸರ್ಕಾರವೇ ಹೊಣೆಯೇ ಹೊರತು, ಜನಸಾಮಾನ್ಯರಲ್ಲ ಎಂದು ಆರೋಪಿಸಿದರು. ರಾಜ್ಯ ಸರ್ಕಾರ […]

Advertisement

Wordpress Social Share Plugin powered by Ultimatelysocial