ಪೊಲೀಸ್ ಭವನದ ಸಿಬ್ಬಂದಿಗೆ ಕೊರೊನಾ

ರಾಮನಗರ ಜಿಲ್ಲಾ ಪೊಲೀಸ್ ಭವನದ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ದೃಡಪಟ್ಟಿದೆ. ಕೋಡಿಹಳ್ಳಿ ಠಾಣೆಯ ಸಬ್ ಇನ್ಸ್ ಪೆಕ್ಟರ್ ಅವರಿಗೆ ಕೊರೊನಾ ವೈರಸ್ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಹಿರಿಯಅಧಿಕಾರಿಗಳ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಜಿಲ್ಲಾ ಪೊಲೀಸ್ ಭವನದ ಸಿಬ್ಬಂದಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಚೇರಿಯನ್ನು ಸ್ಯಾನಿಟೈಸ್ ಮಾಡುವ ಉದ್ದೇಶದಿಂದ ಎರಡು ದಿನಗಳ ಕಾಲ ಕಚೇರಿಯನ್ನು ಮುಚ್ಚಲಾಗಿದೆ. ಎಂದು ರಾಮನಗರ ಎಸ್ಪಿ ಅನೂಪ್ ಶೆಟ್ಟಿ ಅವರು ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುದ್ದಾರೆ. ಸಾರ್ವಜನಿಕರು ಸಹಕರಿಸಿ ಎಂದು ಮನವಿ ಮಾಡಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಒಟ್ಟು 6 ಮಂದಿ ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲಿದ್ದು, ಐವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಎಸ್ಪಿ ಅನೂಪ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಸಂಕಷ್ಟದಲ್ಲಿರುವ ಖಾಸಗಿ ಶಾಲಾ ಶಿಕ್ಷಕರಿಗೆ ಸಿಹಿಸುದ್ದಿ

Tue Jul 7 , 2020
ರಾಜ್ಯದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಕೊರೊನಾ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಖಾಸಗಿ ಶಾಲಾ ಶಿಕ್ಷಕರಿಗೆ ನೆರವು ನೀಡುವ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾತನಾಡಿದ್ದಾರೆ.  ಸಾರ್ವಜನಿಕ ಶಿಕ್ಷಣ ಇಲಾಖೆಯ ಖಾಸಗಿ ಅನುದಾನ ರಹಿತ ಶಾಲೆಗಳ ಶಿಕ್ಷಕರ ನೆರವಿಗೆ ಇಲಾಖೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರಿಗೆ ಒಂದು ಅಥವಾ ಎರಡು ದಿನದ ವೇತನ ನೀಡುವಂತೆ ಧಾವಿಸಬೇಕೆಂದು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಶ್ರೀ ಎಸ್. ಸುರೇಶ್ […]

Advertisement

Wordpress Social Share Plugin powered by Ultimatelysocial