ಪೋಲಿಸರಲ್ಲು ಹೆಚ್ಚಿದ ಆತಂಕ

ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಕೇವಲ ಪೋಲಿಸರಷ್ಟೇ ಅಲ್ಲ, ಅಪರಾಧ ಮಾಡಿ ಜೈಲು ಸೇರಿರುವ ಕೈದಿಗಳಿಗೂ ಮಹಾಮಾರಿಯಾಗಿ ವ್ಯಾಪಿಸಿದೆ.ಕಳೆದ ಒಂದು ವಾರದ ಹಿಂದಷ್ಟೇ ಪರಪ್ಪನ ಅಗ್ರಹಾರ ಜೈಲಿನಲ್ಲೂ ಕೊರೋನಾ ವ್ಯಾಪಿಸಿತ್ತು. ಈಗ ಮತ್ತೆ . ಜೈಲಿನ ವಿಶೇಷ ಸೆಲ್ ನಲ್ಲಿ ಕ್ವಾರಂಟೈನ್ ನಲ್ಲಿದ್ದ ಮೂವತ್ತು ಮಂದಿಗೆ ಕೊರೋನಾ ಪಾಸಿಟಿವ್ ಬಂದಿದೆ.ಇತ್ತೀಚೆಗೆ ಜೈಲು ಸೇರಿದ್ದ ಸುಮಾರು ೪೦೦ ವಿಚಾರಣಾಧೀನ ಕೈದಿಗಳ ಪೈಕಿ ೧೫೦ ಮಂದಿಗೆ ರ‍್ಯಾಂಡಮ್ ಟೆಸ್ಟ್ ಮಾಡಿದ್ದ ವೇಳೆ ೩೦ಮಂದಿಗೆ ಕೊರೋನಾ ಇರುವುದು ಖಚಿತವಾಗಿದೆ. ಇದೀಗ ಸೋಂಕಿತ ಕೈದಿಗಳನ್ನು ಪ್ರತ್ಯೇಕ ಐಸೋಲೇಟೆಡ್ ಆಸ್ಪತ್ರೆಗೆ ಸಾಗಿಸಲಾಗಿದ್ದು ಅವರಿದ್ದ ಜೈಲಿನ ಭಾಗಗಳನ್ನು ಸ್ಯಾನಿಟ್ರೇಷನ್ ಮಾಡಲಾಗುತ್ತಿದೆ.ಇನ್ನು ಕಳೆದ ವಾರವೂ ಪರಪ್ಪನ ಅಗ್ರಹಾರ ಜೈಲಿನ ೨೦ ವಿಚಾರಣಾಧೀನ ಕೈದಿಗಳಿಗೆ ಕೊರೋನಾ ಇರುವುದು ಪತ್ತೆಯಾಗಿತ್ತು. ಇದೀಗ ಮತ್ತೆ ಮೂವತ್ತು ಕೈದಿಗಳಿಗೆ ಸೋಂಕು ತಗುಲಿರುವುದು ಜೈಲಿನ ಅಧಿಕಾರಿಗಳಲ್ಲಿ ಆತಂಕ ಮೂಡಿ ಸಿದೆ.

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯ ಸರ್ಕಾರಕ್ಕೆ ಮಾಜಿ ಪ್ರಧಾನಿ ದೇವೆಗೌಡ ಸಲಹೆ

Mon Jul 13 , 2020
ಕೋವಿಡ್ ಸೋಂಕು ರಾಜ್ಯದಲ್ಲಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಮಾಡುವಂತೆ ಮಾಜಿ ಪ್ರಧಾನಿ ದೇವೆಗೌಡ ಅವರು ಸರ್ಕಾರವನ್ನ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಹೆಚ್ಚಳವಾಗುತ್ತಿದ್ದು ಆರೋಗ್ಯದ ಹಿತದೃಷ್ಠಿಯಿಂದ ಲಾಕ್ ಡೌನ್ ಮಾಡುವುದು ಉತ್ತಮ ಎಂದು ದೇವೆಗೌಡ ಅವರು ಅಭಿಪ್ರಾಯವನ್ನ ವ್ಯಕ್ತಪಟಿಸಿದ್ರು. ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ ತೀರ ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೋರಬನ್ನಿ ಆರೋಗ್ಯದ ಮೇಲೆ ಗಮನವಿರಲಿ ಅಂತ ಕಿವಿಮಾತು ಹೇಳಿದ್ರು…… ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನ ಘೋಷಿಸಿದ್ರು ಅದು […]

Advertisement

Wordpress Social Share Plugin powered by Ultimatelysocial