ಪ್ರಜಾಪ್ರಭುತ್ವದಲ್ಲಿ ವಿಪಕ್ಷಗಳು ಇರಬೇಕು

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ರಾಜ್ಯಸರ್ಕಾರ ಒಪ್ಪಿಗೆ ನೀಡಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪದಗ್ರಹಣದ ದಿನಾಂಕವನ್ನು ಪಕ್ಷದ ಹಿರಿಯರಲ್ಲಿ ಚರ್ಚಿಸಿ ಘೋಷಣೆ ಮಾಡುವುದಾಗಿ ಹೇಳಿದ್ದಾರೆ. ಪದಗ್ರಹಣ ಕಾರ್ಯಕ್ರಮದ ಕುರಿತಂತೆ ಮುಖ್ಯಮಂತ್ರಿಗಳು ಮಾತನಾಡಿರೋದು ಮಾಧ್ಯಮಗಳಲ್ಲಿ ನೋಡಿದ್ದೇನೆ. ಮುಖ್ಯಮಂತ್ರಿಗಳ ಹೇಳಿಕೆಯನ್ನು ನಾನು ಸ್ವಾಗತ ಮಾಡಿದ್ದೇನೆ. ನಿನ್ನೆ ಮುಖ್ಯಮಂತ್ರಿ ಬಿಎಸ್ ವೈ ಜೊತೆಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ದೇಶದಲ್ಲಿ ವಿರೋಧ ಪಕ್ಷಗಳು ಕೂಡ ಇರಬೇಕು. ಕಾರ್ಯಕ್ರಮ ಮಾಡೇ ಮಾಡ್ತೀವಿ ಆದ್ರೆ 14ರಂದು ಕಾರ್ಯಕ್ರಮ ಮಾಡಲು ಆಗಲ್ಲ. ಸೀನಿಯರ್ ಲೀಡರ್ಸ್ ಜೊತೆ ಚರ್ಚಿಸಬೇಕು ಗೈಡ್ ಲೈನ್ಸ್ ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮ ಮಾಡಬೇಕು. ಸಿಎಂ ಅನುಮತಿ ಕೊಟ್ಟಿದ್ದಾರೆ ಅಂತ ನನಗೆ ಅಮೇರಿಕಾ, ಆಸ್ಟ್ರೇಲಿಯಾದಿಂದ ಕರೆ ಬಂದಿತ್ತು. ಇದು ನನ್ನ ಕಾರ್ಯಕ್ರಮ ಅಲ್ಲ, ಕಾರ್ಯಕರ್ತರ ಕಾರ್ಯಕ್ರಮ ನನಗೆ ಆಷಾಡ ಅವೆಲ್ಲ ಇಲ್ಲ. ಜನಕ್ಕೆ ಅನುಕೂಲವಾಗುವಂತ ಬೇರೆ ದಿನಾಂಕ ಘೋಷಣೆ ಮಾಡುತ್ತೇನೆ ಎಂದು ಹೇಳಿದರು.

 

 

Please follow and like us:

Leave a Reply

Your email address will not be published. Required fields are marked *

Next Post

ಬಿಪಿಎಲ್ ಪಡಿತರ ಚೀಟಿಯನ್ನು ಹಿಂತಿರುಗಿಸಬೇಕು

Fri Jun 12 , 2020
ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಸರ್ಕಾರಿ ಅಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರುಗಳು  ಒಂದು ತಿಂಗಳೊಳಗಾಗಿ ಹಿಂದಿರುಗಿಸಬೇಕು, ಇಲ್ಲದಿದ್ದರೆ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಬಗ್ಗೆ ಮಾಹಿತಿ ಅಥವಾ ದೂರು ಸ್ವೀಕೃತವಾದರೆ ಅಂತಹ ಸರ್ಕಾರಿ ಅಕಾರಿ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ಹೂಡುವುದಲ್ಲದೇ ಅದರ ಜೊತೆಗೆ ಸರ್ಕಾರಕ್ಕೆ ಅವರಿಂದ ಉಂಟಾಗಿರುವ ನಷ್ಟವನ್ನು ವಸೂಲು ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದು ರಾಜ್ಯ ಸರ್ಕಾರದ […]

Advertisement

Wordpress Social Share Plugin powered by Ultimatelysocial