ಪ್ರಧಾನಿಗೆ ರಾಹುಲ್‌ ಗಾಂಧಿ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರು ಪ್ರಶ್ನಿಸಿದ್ದಾರೆ. ದೇಶದ ಭದ್ರತೆ ಮತ್ತು ಸುರಕ್ಷತೆಯ ಬಗ್ಗೆ ಮಾತನಾಡುವುದು ಯಾವಾಗ ಎಂದು ಪ್ರಶ್ನಿಸಿದ್ದಾರೆ.ದೇಶದ ಭೂ ಪ್ರದೇಶವನ್ನು ಚೀನಾ ಆಕ್ರಮಿಸಿಕೊಂಡಿದೆ ಎಂದು ಆರೋಪಿಸುತ್ತಿರುವ ರಾಹುಲ್ ಗಾಂಧಿ, ಲಡಾಖ್ ನ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಚೀನಾದೊಂದಿಗಿನ ವಿವಾದ ಬಗ್ಗೆ ಕೆಲ ಪ್ರಶ್ನೆಗಳನ್ನು ಮುಂದಿಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಂದ ಉತ್ತರವನ್ನು ಬಯಸಿದ್ದಾರೆ. ಪ್ರಧಾನಿ ಅವರು ಪ್ರತಿ ತಿಂಗಳು ನಡೆಸುವ ಮನ್ ಕಿ ಬಾತ್  ಆಕಾಶವಾಣಿ ಕಾರ್ಯಕ್ರಮದ ಭಾನುವಾರದ ಸರಣಿ ಪ್ರಸಾರವಾಗುವುದಕ್ಕೂ ಸ್ವಲ್ಪ ಸಮಯ ಮುನ್ನ ರಾಹುಲ್‌ ದೇಶದ ಭದ್ರತೆ ಮತ್ತು ಸುರಕ್ಷತೆಯ ಬಗ್ಗೆ ಮಾತನಾಡುವುದು ಯಾವಾಗ ಎಂದು ಈ ಕುರಿತು ಟ್ವೀಟ್‌ ಮಾಡಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಮೂರು ದಿನಗಳ ಕಾಲ ಭಾರಿ ಮಳೆ

Sun Jun 28 , 2020
ರಾಜ್ಯದ ಕರಾವಳಿ ಭಾಗದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ಸೂಚನೆಯ ಪ್ರಕಾರ, ಜಿಲ್ಲೆಗೆ 100 ಮಿ.ಮೀ ನಿಂದ 115 ಮಿ.ಮೀ ಮಳೆಯಾಗುವ ಸಾಧ್ಯತೆಯಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು. ನದಿಗಳು ಅಥವಾ ಸಮುದ್ರಕ್ಕೆ ಹೋಗದಂತೆ ನಾಗರಿಕರು ಕಾಳಜಿ ವಹಿಸಬೇಕು. ಅಪಾಯಕಾರಿ ವಿದ್ಯುತ್ ಕಂಬಗಳು, ಕಟ್ಟಡಗಳು ಮತ್ತು ಮರಗಳಿಂದ ದೂರವಿರಬೇಕು, […]

Advertisement

Wordpress Social Share Plugin powered by Ultimatelysocial