ಪ್ರಧಾನಿ ನರೇಂದ್ರ ಮೋದಿಯವರು ನಾಳೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ನಾಳೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಮಹತ್ವದ ಸಂಗತಿ ಎಂದರೆ ಈ ವಿಮಾನ ನಿಲ್ದಾಣ ಸ್ಥಾಪನೆಗೆ ಶ್ರಮಿಸಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಹುಟ್ಟುಹಬ್ಬದ ದಿನದಂದೇ ಈ ವಿಮಾನ ನಿಲ್ದಾಣಕ್ಕೆ ಚಾಲನೆ ಸಿಗುತ್ತಿದೆ.

ನಾಳೆ ಬೆಳಿಗ್ಗೆ 11-35 ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ನರೇಂದ್ರ ಮೋದಿಯವರು 11-45 ರಿಂದ 11-55 ರವರೆಗೆ ಟರ್ಮಿನಲ್ ಬಿಲ್ಡಿಂಗ್ ವೀಕ್ಷಿಸಲಿದ್ದಾರೆ. 12 ರಿಂದ 1-15 ರ ವರೆಗೆ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿರುವ ನರೇಂದ್ರ ಮೋದಿಯವರು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಮಧ್ಯಾಹ್ನ 1-30 ಕ್ಕೆ ಶಿವಮೊಗ್ಗದಿಂದ ಹೊರಟು ಬೆಳಗಾವಿ ವಿಮಾನ ನಿಲ್ದಾಣಕ್ಕೆ 2-20ರ ವೇಳೆಗೆ ಬಂದಿಳಿಯುವ ನರೇಂದ್ರ ಮೋದಿಯವರು ಅಲ್ಲಿಂದ ಕಾರ್ಯಕ್ರಮದ ಸ್ಥಳಕ್ಕೆ ಹೆಲಿಕ್ಯಾಪ್ಟರ್ ಮೂಲಕ ತೆರಳಲಿದ್ದಾರೆ. ನಂತರ 2-50ರಿಂದ 3-15 ರ ವರೆಗೆ ರೋಡ್ ಶೋನಲ್ಲಿ ಭಾಗವಹಿಸುವ ಅವರು, ಸಮಾವೇಶ ನಡೆಯುವ ಸ್ಥಳಕ್ಕೆ ತೆರಳಲಿದ್ದಾರೆ.

ಇದೇ ಸಂದರ್ಭದಲ್ಲಿ ಪಿಎಂ ಕಿಸಾನ್ 13ನೇ ಕಂತಿನ ಹಣವನ್ನು ಮೋದಿಯವರು ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದ ಮುಗಿದ ಬಳಿಕ ಸಂಜೆ 5-10ಕ್ಕೆ ವಿಶೇಷ ವಿಮಾನದ ಮೂಲಕ ದೆಹಲಿಗೆ ಪ್ರಯಾಣಿಸಲಿದ್ದಾರೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕನ್ಯಾ ರಾಶಿ ಭವಿಷ್ಯ.

Sun Feb 26 , 2023
  ನಿಮ್ಮ ಭಾವನೆಗಳನ್ನು ನಿಯಂತ್ರಿಸಲು ನಿಮಗೆ ಕಷ್ಟವಾಗಬಹುದು – ನಿಮ್ಮ ಅಸಾಮಾನ್ಯ ವರ್ತನೆ ನಿಮ್ಮ ಸುತ್ತಲಿನ ಜನರನ್ನು ಗೊಂದಲದಲ್ಲಿ ಕೆಡವಬಹುದು ಮತ್ತು ನಿಮ್ಮನ್ನು ನಿರಾಸೆಗೊಳಿಸಬಹುದು. ವ್ಯಾಪಾರಿಗಳಿಗೆ ಇಂದು ವ್ಯಾಪಾರದಲ್ಲಿ ಹಾನಿ ಉಂಟಾಗಬಹುದು ಮತ್ತು ತಮ್ಮ ವ್ಯಾಪಾರವನ್ನು ಉತ್ತಮಗೊಳಿಸಲು ನೀವು ಹಣವನ್ನು ಖಾರುಚು ಮಾಡಬೇಕಾಗುತ್ತದೆ. ನಿಮ್ಮ ಮಗುವಿನಂಥ ಮತ್ತು ಮುಗ್ಧ ವರ್ತನೆ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಲ್ಲಿ ಒಂದು ಪ್ರಮುಖ ಪಾತ್ರ ವಹಿಸುತ್ತದೆ. ಇಂದು ಪ್ರಣಯದ ಯಾವುದೇ ಆಸೆಯಿಲ್ಲ ಉಚಿತ ಸಮಯದಲ್ಲಿ ಇಂದು […]

Advertisement

Wordpress Social Share Plugin powered by Ultimatelysocial