ಪ್ರಧಾನಿ ಮೋದಿ ಲಡಾಖ್ ಗೆ ಧೀಢಿರ್ ಭೇಟಿ

ಭಾರತ-ಚೀನಾ ಗಡಿ ಬಿಕ್ಕಟ್ಟು ಸಂಘರ್ಷದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಲಡಾಖ್ ನ ಲೇಹ್ ಗೆ ಭೇಟಿ ನೀಡಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆಯೇ ಲಡಾಕ್ ಗೆ ತಲುಪಿದ್ದು, ಸೇನಾ ನಾಯಕರ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಜೊತೆಗೆ ಗಡಿಯಲ್ಲಿನ ಭದ್ರತೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.ಜೂನ್ ೧೫ ರ ರಾತ್ರಿ ಭಾರತ-ಚೀನಾ ನಡುವಿನ ಗಡಿ ಬಿಕ್ಕಟ್ಟಿನ ಬಳಿಕ ಇಂದು ಲಡಾಖ್ ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಬೇಕಿತ್ತು ಆದರೆ ರಾಜನಾಥ್ ಸಿಂಗ್ ಬದಲು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಭೇಟಿ ನೀಡಿದ್ದಾರೆ. ಇದರ ಬೆನ್ನಲ್ಲೇ ನಡೆದ ದಿಢೀರ್ ಬೆಳವಣಿಗೆಯಲ್ಲಿ ಪ್ರಧಾನಿ ಮೋದಿ ಸಹ ಲಡಾಖ್ ನ ಲೇಹ್ ಗೆ ಭೇಟಿ ನೀಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಉತ್ತರ ಪ್ರದೇಶದಲ್ಲಿ ಪೊಲೀಸರ ಮೇಲೆ ಗುಂಡಿನ ಮಳೆ

Fri Jul 3 , 2020
ಉತ್ತರ ಪ್ರದೇಶದ ಕಾನ್ಪುರದಲ್ಲಿ ಪೊಲೀಸರ ಮೇಲೆ ಗುಂಡಿನ ಮಳೆಗರೆದು ಡಿಎಸ್‌ಪಿ ಸಹಿತ ಎಂಟು ಪೊಲೀಸರ ಸಾವಿಗೆ ಕಾರಣವಾಗಿದ್ದು, ೬೦ಕ್ಕೂ ಹೆಚ್ಚು ಕೊಲೆ ಮತ್ತು ದರೋಡೆ ಪ್ರಕರಣಗಳ ಆರೋಪಿ ವಿಕಾಸ್ ದುಬೆ ವಿಕಾಸ್ ದುಬೆ ವಿರುದ್ಧ ರಾಹುಲ್ ತಿವಾರಿ ಎಂಬವರು ಕೊಲೆ ಯತ್ನದ ಪ್ರಕರಣ ದಾಖಲಿಸಿದ್ದರು. ಶುಕ್ರವಾರ ಮಧ್ಯರಾತ್ರಿ ೧ ಗಂಟೆ ಸುಮಾರಿಗೆ ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ತೆರಳಿದ್ದ ವೇಳೆಯಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಿ ಪೊಲಿಸರನ್ನು ಕೊಲೆಗೈಯಲಾಗಿದೆ. ಇನ್ನು ಯಾರು […]

Advertisement

Wordpress Social Share Plugin powered by Ultimatelysocial