ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರದ ಕೊರತೆಯಿಲ್ಲ

ದೇಶದಲ್ಲಿ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ. ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಿ, ಅಗತ್ಯ ಪ್ರಮಾಣದಷ್ಟು ರಸಗೊಬ್ಬರವನ್ನು ಈಗಾಗಲೇ ರಾಜ್ಯಗಳಿಗೆ ಪೂರೈಸಿ, ದಾಸ್ತಾನು ಮಾಡಲಾಗಿದೆ ಎಂದು ಅವರು ಹೇಳಿದರು. ಹೊಸದಿಲ್ಲಿಯಲ್ಲಿ ತಮ್ಮನ್ನು ಭೇಟಿ ಮಾಡಿದ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಕೇಂದ್ರ ಸಚಿವರು ಈ ಭರವಸೆ ನೀಡಿದರು. ರಾಜ್ಯದಲ್ಲಿ ಬೇಡಿಕೆಗೆ ತಕ್ಕಂತೆ ಅಗತ್ಯ ರಸಗೊಬ್ಬರ ಪೂರೈಕೆಗೆ ಭರವಸೆ ನೀಡಿದರು. ರಸಗೊಬ್ಬರ ಸಚಿವಾಲಯ ನಿರಂತರವಾಗಿ ರಸಗೊಬ್ಬರ ಲಭ್ಯತೆಯ ಬಗ್ಗೆ ತೀವ್ರ ನಿಗಾ ಇರಿಸಿದೆ ಮತ್ತು ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರಿಂದ ಯೂರಿಯಾ ಪೂರೈಕೆಗೆ ಬೇಡಿಕೆ ಎದುರಾದರೆ ಅದನ್ನು ಪೂರೈಸಲು ಬದ್ಧವಿದೆ ಎಂದರು. ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ರೈತರಿಗೆ ಸಕಾಲದಲ್ಲಿ ಕೈಗೆಟಕುವ ದರದಲ್ಲಿ ಸೂಕ್ತ ಪ್ರಮಾಣದ ರಸಗೊಬ್ಬರ ಪೂರೈಕೆಯನ್ನು ಖಾತ್ರಿಪಡಿಸಲು ಬದ್ಧವಾಗಿದೆ ಎಂದು ಅವರು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಗೃಹ ಕಚೇರಿ ಕೃಷ್ಣಾದಲ್ಲಿ ಕೇಂದ್ರ ತಂಡದ ಜೊತೆ ಬಿ ಎಸ್ ವೈ

Tue Jul 7 , 2020
ಕೋವಿಡ್ – 19 ಕ್ಕೆ ಸಂಬಂಧಿಸಿದಂತೆ ಕೇಂದ್ರ ತಂಡದ ಜೊತೆ ಸಿಎಂ ಯಡಿಯೂರಪ್ಪ ಚರ್ಚೆ. ಕೊರೊನಾ ಮಾಹಿತಿ ಪಡೆಯಲು ಸೆಂಟ್ರಲ್ ಟೀಂ ಬರುವ ಸಂದರ್ಭದಲ್ಲಿ ಸಚಿವರಿಗೆ ಹಾಜರಿರಲು ಸಿಎಂ ಸೂಚನೆ ನೀಡಿದ್ದಾರೆ. ಡಿಸಿಎಂ ಅಶ್ವಥ ನಾರಾಯಣ, ಸಚಿವರಾದ ಡಾ.ಕೆ.ಸುಧಾಕರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರ್ ಅಶೋಕ್, ಸುರೇಶ್ ಕುಮಾರ್ ಮತ್ತು ಸಿಎಸ್ ವಿಜಯ್ ಭಾಸ್ಕರ್, ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳಿಗೂ ಸಿಎಂ ಗೃಹ ಕಚೇರಿ ಕೃಷ್ಣಾಗೆ ಹಾಜರಿರಲು ಸೂಚನೆ […]

Advertisement

Wordpress Social Share Plugin powered by Ultimatelysocial