ಫೀವರ್ ಕ್ಲಿನಿಕ್ ಗಳಲ್ಲಿ ಉಚಿತ ಕೋವಿಡ್ ಟೆಸ್ಟ್

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳ ನಿಯಂತ್ರಣಕ್ಕಾಗಿ ಬಿಬಿಎಂಪಿ ಹೊಸ ಪ್ರಯತ್ನಕ್ಕೆ ಮುಂದಾಗಿದೆ. ಬಿಬಿಎಂಪಿ ವ್ಯಾಪ್ತಿಯಡಿ ಬರುವ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಫೀವರ್ ಕ್ಲಿನಿಕ್ ತೆರೆಯಲಾಗಿದೆ. ಕ್ಲಿನಿಕ್ ಗಳಲ್ಲಿ ಉಚಿತ ಕೊವಿಡ್ ಪರೀಕ್ಷಾ ಮಾಡಲಾಗುತ್ತದೆ ಎಂದು ಮೇಯರ್ ಗೌತಮ್ ಕುಮಾರ್ ತಿಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಐಎಲ್‌ಐ ಹಾಗೂ ಎಸ್‌ಎಆರ್‌ಐ ಕಾಯಿಲೆಯಿಂದ ಬಳಲುತ್ತಿರುವವರಿಗೆ ಹಾಗೂ ಕೆಮ್ಮು, ಜ್ವರ, ಶೀತ, ನೆಗಡಿಯಿಂದ ಬಳಲುತ್ತಿವವರಿಗೆ ಉಚಿತ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆ ಮಾಡಲಾಗುವುದು ಎಂದು ಬಿಬಿಎಂಪಿ ತಿಳಿಸಿದೆ. ಹಾಗೂ ಖಾಸಗಿ ಆಸ್ಪತ್ರೆಗಳಲ್ಲೂ ಜ್ವರ ಅಥವಾ ಎಸ್‌ಎಆರ್‌ಐ ರೋಗಿಗಳಿಗೆ ಹೊರರೋಗಿ ಸೇವೆಗಳನ್ನು ವೆಚ್ಚ ಭರಿಸಿ ಪಡೆಯಬಹುದು. ಖಾಸಗಿ ಆಸ್ಪತ್ರೆ ಸ್ಯಾಂಪಲ್ ಸಂಗ್ರಹಕ್ಕೆ 350 ರೂಪಾಯಿ ನಿಗದಿ ಮಾಡಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಜುಲೈನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ

Thu Jul 9 , 2020
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಜುಲೈ ೨೦ರ ವೇಳೆಗೆ ಬರಲಿದೆ ಅಂತ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಅನೇಕ ವಿದ್ಯಾರ್ಥಿಗಳು ಸುರೇಶ್ ಕುಮಾರ್ ಅವರಿಗೆ ಕರೆ ಮಾಡಿ ದ್ವಿತೀಯ ಪಿಯುಸಿ ಫಲಿತಾಂಶ ಬರುತ್ತದೆಯೇ ಎಂದು ಕೇಳುತ್ತಿದ್ದಾರೆ. ಹೀಗಾಗಿ ಈಗಾಗಲೇ ತಿಳಿಸಿರುವಂತೆ ಫಲಿತಾಂಶ ಜುಲೈ ೨೦ರ ಸುಮಾರಿಗೆ ಬರಲಿದೆ ಎಂದು ಮತ್ತೊಮ್ಮೆ ಸ್ಪಷ್ಟಪಡಿಸುತ್ತಿದ್ದೇನೆ ಎಂದು ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ. Please follow and like us:

Advertisement

Wordpress Social Share Plugin powered by Ultimatelysocial