ಬಂಗಾರಪೇಟೆ ಒಂದು ವಾರ ಲಾಕ್ ಡೌನ್

ಒಂದು ವಾರಗಳ ಕಾಲ ಪಟ್ಟಣವನ್ನ ಕಂಪ್ಲೀಟ್ ಲಾಕ್‌ಡೌನ್ ಮಾಡಲು ತೀರ್ಮಾನಿಸಲಾಗಿದೆ ಎಂದು ಶಾಸಕ ಎಸ್ ಎನ್ ನಾರಾಯಣ ಸ್ವಾಮಿ ಹೇಳಿದ್ದಾರೆ. ಬಂಗಾರಪೇಟೆಯಲ್ಲಿ ಮತನಾಡಿದ ಅವರು, ತಾಲೂಕಿನಲ್ಲಿ ಈಗಾಗಲೇ ಕೊರೊನಾ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿದೆ, ಇದುವರೆಗೂ ತಾಲೂಕಿನಲ್ಲಿ ೪ ಕೋವಿಡ್ ಸೋಕಿನ ವ್ಯಕ್ತಿಗಳು ಸಾವಿಗೀಡಾಗಿದ್ದಾರೆ. ಇನ್ನೂ ಅಲವು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ, ಉಳಿದ ಪ್ರಕರಣಗಳ ವರದಿ ಬರಬೇಕಿದೆ. ತಾಲೂಕಿನ ಆಡಳಿತ ಮಂಡಳಿ ಇದನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದು, ಇದಕ್ಕೆ ಸಾರ್ವಜನಿಕರು ಸಹಕಾರವನ್ನು ಕೊಡಬೇಕು, ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು, ಮಾಸ್ಕ್ ಧÀರಿಸಿಬೇಕು. ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡದೆ. ಮಹಾಮಾರಿ ಕೊರೊನಾ ವಿರುದ್ಧ ಹೋರಾಡಬೇಕಿದೆ, ಅನಾವಶ್ಯಕವಾಗಿ ಓಡಾಡಬಾರದು, ಮನೆಯಲ್ಲೇ ಇದ್ದು ಪ್ರತಿಯೊಬ್ಬರು ಸಹಕರಿಸಬೇಕು ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಚಿಕಿತ್ಸೆ ಸಿಗದೆ ಬಿಬಿಎಂಪಿ ಪೌರಕಾರ್ಮಿಕ  ಮಹಿಳೆ  ಸಾವು

Thu Jul 16 , 2020
ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಮುಂದುವರೆದಿದ್ದು, ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ಕೊರೊನಾ ಸೋಂಕಿತ ಬಿಬಿಎಂಪಿ ಪೌರಕಾರ್ಮಿಕ ಮಹಿಳೆ ಸಾವನ್ನಪ್ಪಿದ್ದಾರೆ. ಬಿಬಿಎಂಪಿಯ 30 ವರ್ಷದ ಪೌರಕಾರ್ಮಿಕ ಮಹಿಳೆ  ಕೊರೊನಾ ಸೋಂಕಿನ ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿ ಸುಮಾರು 5 ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಅಲೆದಾಡಿದ್ದರು. ಆದರೆ ಚಿಕಿತ್ಸೆ ಸಿಗದೇ ಇಂದು ಮೃತಪಟ್ಟಿದ್ದಾರೆ.ಚಿಕಿತ್ಸೆ ಸಿಗದೇ ಪೌರಕಾರ್ಮಿಕ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡದ ಆಸ್ಪತ್ರೆ ವಿರುದ್ಧ ಮೃತ ಮಹಿಳೆಯ ಕುಟುಂಬಸ್ಥರು ಆಸ್ಪತ್ರೆ ಎದುರು […]

Advertisement

Wordpress Social Share Plugin powered by Ultimatelysocial