ಬಾಳು ಕೊಡ್ತೀನಿ, ನೀನೇ ನನ್ನ ಜೀವ ಎಂದು ಅರ್ಧದಲ್ಲೇ ಕೈ ಕೊಟ್ಟ ಕಿರಾತಕ: ಗಂಡನಿಗಾಗಿ ಧರಣಿ ಕುಳಿತ ಶಿಕ್ಷಕಿ

ರಾಯಚೂರು: ಪ್ರೀತಿ ಕುರುಡು ಅಂತಾರೆ ನಿಜ. ಆದರೆ, ಪ್ರೀತಿಯ ಮಾಯೆಯಲ್ಲಿ ಬಿದ್ದು ಏನನ್ನು ಯೋಚಿಸದೇ ಕಣ್ಣಿದ್ದು ಕುರುಡರಾದರೆ ಏನಾಗಬಹುದು ಎಂಬುದಕ್ಕೆ ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ನಡೆದ ಈ ಒಂದು ಘಟನೆ ತಾಜಾ ಉದಾಹರಣೆಯಾಗಿದೆ.

ಪ್ರೀತಿಸಿ ಮದುವೆಯಾದ ಗಂಡನಿಗಾಗಿ ಪ್ರೌಢಶಾಲಾ ಶಿಕ್ಷಕಿಯೊಬ್ಬಳು ಇದೀಗ ಧರಣಿ ಕುಳಿತಿದ್ದಾಳೆ. ಗಂಡನಿಲ್ಲದೇ ನಾನು ಇಲ್ಲಿಂದ ಹೋಗುವುದಿಲ್ಲ ಎಂದು ಗಂಡನಿಗಾಗಿ ಗಂಡನ ಮನೆಯ ಮುಂದೆಯೇ ಶಿಕ್ಷಕಿ ಪ್ರತಿಭಟನೆಗೆ ಕುಳಿತಿದ್ದಾಳೆ.

ಶಿಕ್ಷಕಿಯ ಹೆಸರು ಶಾಂತಾಬಾಯಿ. ಇವರು ಪ್ರತಾಪ್​ ಎಂಬಾತನನ್ನು ಪ್ರೀತಿಸಿ 2017ರ ಅಕ್ಟೋಬರ್​ನಲ್ಲಿ ಮದುವೆಯಾಗಿದ್ದರು. ಆದರೆ, ಪ್ರತಾಪ್ ಶಾಂತಾಬಾಯಿಯ ಜತೆ ಮದ್ವೆಯಾಗಿರುವ ವಿಚಾರವನ್ನು ಮುಚ್ಚಿಟ್ಟು, ಮನೆಯವರ ಒತ್ತಾಯಕ್ಕೆ ಮಣಿದು ಶಾಂತಾಬಾಯಿಗೆ ಕೈಕೊಟ್ಟು 2018ರಲ್ಲಿ ಇನ್ನೊಬ್ಬಳ ಜತೆ ಮದ್ವೆಯಾಗಿದ್ದಾನೆ.

ಸಂತ್ರಸ್ತೆ ಶಾಂತಾಬಾಯಿಗೆ ಈ ಮೊದಲೇ ಮದ್ವೆಯಾಗಿತ್ತು. ಆದರೆ, ಗಂಡನಿಗೆ ಡಿವೋರ್ಸ್ ಕೊಟ್ಟಿದ್ದರು. ಈ ಎಲ್ಲಾ ವಿಷಯವನ್ನು ತಿಳಿದೇ ಶಾಂತಾಬಾಯಿಯನ್ನ ಪ್ರತಾಪ್​, ಪ್ರೀತಿಸಿ ಮದ್ವೆಯಾಗಿದ್ದ. ಇದೀಗ ಅಂತರ್ಜಾತಿ ವಿವಾಹ ಕಾರಣ ನೀಡಿ, ಶಾಂತಾಬಾಯಿಗೆ ಮೋಸ ಮಾಡಿ ಮತ್ತೊಂದು ಮದ್ವೆಯಾಗಿದ್ದಾನೆ.

ಪ್ರೀತಿಸಿ ಮದ್ವೆಯಾಗಿ ತಂದೆ-ತಾಯಿಯ ಒತ್ತಾಯಕ್ಕೆ ಮಣಿದು ಇದೀಗಪ್ರತಾಪ್​ ಮತ್ತೊಂದು ಮದ್ವೆಯಾಗಿದ್ದಾನೆ. ಬಾಳು ಕೊಡ್ತೀನಿ, ನೀನೇ ಜೀವ ಎಂದು ಇದೀಗ ಶಾಂತಾಬಾಯಿಯನ್ನು ಅರ್ಧದಲ್ಲೇ ಕೈ ಬಿಟ್ಟು ಮೋಸ ಮಾಡಿದ್ದಾನೆ. ಇದೀಗ ಮೋಸ ಮಾಡಿರುವ ಪ್ರತಾಪ್ ಹಾಗೂ ಕುಟುಂಬಸ್ಥರ ವಿರುದ್ಧ ದೇವದುರ್ಗ ಠಾಣೆಯಲ್ಲಿ ಅನ್ಯಾಯಕ್ಕೊಳಗಾದ ಶಿಕ್ಷಕಿ ಶಾಂತಾಬಾಯಿಯಿಂದ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತನ್ನ ನಿರ್ಮಾಪಕ-ಪತಿ ಸಿದ್ಧಾರ್ಥ್ ರಾಯ್ ಕಪೂರ್ ಜೊತೆ ಕೆಲಸ ಮಾಡದಿರಲು ಏಕೆ ನಿರ್ಧರಿಸಿದೆ ಎಂದು ಬಹಿರಂಗಪಡಿಸಿದ್ದ,ವಿದ್ಯಾ ಬಾಲನ್!

Sat Mar 19 , 2022
ತನ್ನ ನಿರ್ಮಾಪಕ-ಪತಿ ಸಿದ್ಧಾರ್ಥ್ ರಾಯ್ ಕಪೂರ್ ಜೊತೆ ಕೆಲಸ ಮಾಡದಿರಲು ಏಕೆ ನಿರ್ಧರಿಸಿದೆ ಎಂದು ವಿದ್ಯಾ ಬಾಲನ್ ಬಹಿರಂಗಪಡಿಸಿದ್ದಾರೆ 15 ವರ್ಷಗಳಿಗೂ ಹೆಚ್ಚು ಕಾಲದ ವೃತ್ತಿಜೀವನದಲ್ಲಿ, ವಿದ್ಯಾ ಬಾಲನ್ ಅನೇಕ ಯಶಸ್ವಿ ಚಲನಚಿತ್ರಗಳಲ್ಲಿ ನಟಿಸಿದ್ದಾರೆ ಮತ್ತು ಹಿಂದಿ ಚಲನಚಿತ್ರೋದ್ಯಮದಲ್ಲಿ ಬೇಡಿಕೆಯಿರುವ ನಟಿಯರಲ್ಲಿ ಒಬ್ಬರಾಗಿ ತಮ್ಮನ್ನು ತಾವು ಸ್ಥಾಪಿಸಿಕೊಂಡಿದ್ದಾರೆ. ಮನರಂಜನಾ ಪೋರ್ಟಲ್‌ಗೆ ನೀಡಿದ ಇತ್ತೀಚಿನ ಸಂದರ್ಶನದಲ್ಲಿ, ಘಂಚಕ್ಕರ್ ಅನ್ನು ಒಟ್ಟಿಗೆ ಮಾಡಿದ ನಂತರ ತನ್ನ ನಿರ್ಮಾಪಕ-ಪತಿ ಸಿದ್ಧಾರ್ಥ್ ರಾಯ್ ಕಪೂರ್ ಅವರೊಂದಿಗೆ […]

Advertisement

Wordpress Social Share Plugin powered by Ultimatelysocial