ಬಿಎಂಟಿಸಿ ಪ್ರಯಾಣ ನಿಷೇಧ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಹೋಂ ಕ್ವಾರಂಟೈನ್ ನಲ್ಲಿರುವ ಮತ್ತು ಸಾಂಸ್ಥಿಕ‌ ಕ್ವಾರಂಟೈನ್ ನಲ್ಲಿರುವವರು ಬಸ್ ಗಳಲ್ಲಿ ಪ್ರಯಾಣಿಸುವುದನ್ನು ನಿಷೇಧಿಸಿದೆ. ಕೊರೊನಾ ಸಾಂಕ್ರಾಮಿಕ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಗೃಹ ಮತ್ತು ಸಾಂಸ್ಥಿಕ‌ ಕ್ವಾರಂಟೈನ್ ನಲ್ಲಿರುವ ಸಾರ್ವಜನಿಕರು ಬಿಎಂಟಿಸಿಯ ಬಸ್ ಗಳಲ್ಲಿ ಪ್ರಯಾಣಿಸುವುದು ಹಾಗೂ ಬಸ್ ನಿಲ್ದಾಣಗಳಲ್ಲಿ ಓಡಾಡುವುದನ್ನು ನಿಷೇಧಿಸಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಪ್ರಯಾಣಿಕರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಆದ್ದರಿಂದ ಪ್ರಯಾಣಿಕರಿಗೆ ಸಂಸ್ಥೆಯ ವತಿಯಿಂದ ಪ್ರತ್ಯೇಕ ಸಾರಿಗೆ ಸೌಲಭ್ಯವನ್ನು ಒದಗಿಸಲಾಗಿದೆ. ಸಾಂಸ್ಥಿಕ‌ ಕ್ವಾರಂಟೈನ್ ಗೆ ಒಳಗಾಗುವ ಪ್ರಯಾಣಿಕರು ವಿಮಾನ ನಿಲ್ದಾಣದಿಂದ ನಗರದಲ್ಲಿನ ಅವರ ವಾಸಸ್ಥಳ ವರೆಗೆ ವಾಯುವಜ್ರ ಸಾರಿಗೆಗಳಲ್ಲಿ ಪ್ರಯಾಣಿಸಲು ಅನುಮತಿಸಿದೆ ಎಂದು ಬಿಎಂಟಿಸಿ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

 

 

 

Please follow and like us:

Leave a Reply

Your email address will not be published. Required fields are marked *

Next Post

ಜಿಲ್ಲಾಡಳಿತ ಭವನ ಸೀಲ್‌ಡೌನ್

Fri Jul 3 , 2020
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನವನ್ನು ಒಂದು ದಿನದ ಮಟ್ಟಿಗೆ ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದೆ. ಜಿಲ್ಲಾಡಳಿತ ಭವನದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲಾ ಅಧಿಕಾರಿ, ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾಡಳಿತ ಭವನದಲ್ಲಿ ಎಲ್ಲಾ ಕಚೇರಿಗಳ ಒಳಾಂಗಣ ಮತ್ತು ಹೊರಾಂಗಣ ಸ್ಯಾನಿಟೈಸ್ ಮಾಡಲಾಗಿದೆ.ಸಂಪೂರ್ಣ ಸೀಲ್‌ಡೌನ್ ಮಾಡಿರುವ ಅವಧಿಯಲ್ಲಿ ಯಾವುದೇ ಅಧಿಕಾರಿ, ಸಿಬ್ಬಂದಿ ವರ್ಗದವರು ಕಛೇರಿ ಆವರಣದಲ್ಲಿ ಹಾಜರಾಗುವಂತಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಎಲ್ಲಾ ಅಧಿಕಾರಿ, ಸಿಬ್ಬಂದಿ ವರ್ಗದವರು ತಮ್ಮ ಮನೆಯಿಂದಲೇ […]

Advertisement

Wordpress Social Share Plugin powered by Ultimatelysocial