ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ

ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ಘೋಷಣೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಆರ್. ಶಂಕರ್ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ. ಅವರಿಗೆ ಧನ್ಯವಾದ ಹೇಳುತ್ತೇನೆ. ಹಾಗೆಯೇ ರಾಜ್ಯಾಧ್ಯಕ್ಷರು, ಬಿಜೆಪಿ ವರಿಷ್ಠರು, ಹೈಕಮಾಂಡ್ ಗೆ ನಾನು ಅಭಿನಂದನೆ ಸಲ್ಲಿಸ್ತೇನೆ ಎಂದು ಮಾಜಿ ಸಚಿವ ಆರ್. ಶಂಕರ್ ಹೇಳಿದರು. ಹಾಗೆಯೇ ಎಂಟಿಬಿ ನಾಗರಾಜ್‌, ಆರ್‌. ಶಂಕರ್‌, ಸುನಿಲ್‌ ವಲ್ಯಾಪುರೆ ಮತ್ತು ಪ್ರತಾಪ್ ಸಿಂಹ ನಾಯಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಆದರೆ ರಾಜ್ಯ ಕೋರ್ ಕಮಿಟಿ ಶಿಫಾರಸ್ಸು ಮಾಡಿದ್ದ ಹೆಚ್ ವಿಶ್ವನಾಥ್ ಅವರಿಗೆ ಟಿಕೆಟ್ ಕೈಪ್ಪಿದೆ. ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದ ಪ್ರತಾಪ್ ಸಿಂಹ ನಾಯಕ್ ಅವರನ್ನು ಅಚ್ಚರಿಯ ಆಯ್ಕೆಯಾಗಿ ಪರಿಗಣಿಸಿದೆ.

 

 

 

Please follow and like us:

Leave a Reply

Your email address will not be published. Required fields are marked *

Next Post

ಚೀನಾಗೆ ಮೊದಲ ಪೆಟ್ಟು

Thu Jun 18 , 2020
20 ಭಾರತೀಯ ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ಕಾನ್ಪುರ್-ದೀನ್ ದಯಾಳ್ ಉಪಾಧ್ಯಾಯ ವಿಭಾಗದಲ್ಲಿ ಸಿಗ್ನಲಿಂಗ್ ಮತ್ತು ದೂರಸಂಪರ್ಕ ಕಲ್ಪಿಸುವ ಯೋಜನೆಯನ್ನು ಬೀಜಿಂಗ್ ನ್ಯಾಷನಲ್ ರೈಲ್ವೆ ರಿಸರ್ಚ್ ಅಂಡ್ ಡಿಸೈನ್ ಇನ್ಸಿಟ್ಯೂಷನ್ ಆಫ್ ಸಿಗ್ನಲ್ ಅಂಡ್ ಕಮ್ಯೂನಿಕೇಷನ್ ಗ್ರೂಪ್ ಕಂಪನಿಗೆ ಜೂನ್ 2016ರಲ್ಲಿ ವಿಶ್ವಬ್ಯಾಂಕ್ ನಿಂದ 471 ಕೋಟಿ ರೂಗಳನ್ನು ಸಾಲ ಪಡೆದು ಗುತ್ತಿಗೆ ನೀಡಲಾಗಿತ್ತು. ನಾಲ್ಕು ವರ್ಷದಲ್ಲಿ ಕೇವಲ […]

Advertisement

Wordpress Social Share Plugin powered by Ultimatelysocial