ಬಿಜೆಪಿ ಈಗ ಎಲ್ಲಾ ವರ್ಗದವರ ಪಕ್ಷ; ಸಿಎಂ ಬಸವರಾಜ್‌ ಬೊಮ್ಮಾಯಿ

ಉತ್ತಮ ಆಡಳಿತ ನೀಡಿ ಮತ್ತೊಮ್ಮೆ ಬಿಜೆಪಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವುದೇ ನನ್ನ ಗುರಿ  ಮುಖ್ಯಮಂತ್ರಿಬಸವರಾಜ ಬೊಮ್ಮಾಯಿಭಾರತೀಯ ಜನತಾಪಕ್ಷ ಈಗ ಕರ್ನಾಟಕದಲ್ಲಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಅದು ಸಮಾಜದ ಎಲ್ಲ ವರ್ಗದವರಿಗೂ ತಲುಪಿ ಅವರ ಬೆಂಬಲವನ್ನು ಗಳಿಸಿರುವ ಪಕ್ಷವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನವದೆಹಲಿಯಲ್ಲಿ ನಡೆದ ಇಂಡಿಯಾ ಟು ಡೇ ಕಾನ್ಕಲೇವ್ ನಲ್ಲಿ  ಮಾತನಾಡಿದ  ಸಿಎಂ ಬೊಮ್ಮಾಯಿ ಅವರು  ಉತ್ತರ ಕರ್ನಾಟಕ ಭಾಗದಿಂದ ಹಲವಾರು ಜನಲಿಂಗಾಯತ ಸಮುದಾಯದವರು ಭಾರತೀಯ ಜನತಾ ಪಕ್ಷದಿಂದ ಶಾಸಕರು ಮತ್ತು ಸಂಸದರಾಗಿದ್ದಾರೆಆದರೆ ಒಂದು ಸರ್ಕಾರ ಅಧಿಕಾರಕ್ಕೆ ಬರಬೇಕೆಂದರೆ ಎಸ್ಸಿ, ಎಸ್ಟಿ, ಒಕ್ಕಲಿಗ, ಹಿಂದುಳಿದ ವರ್ಗದವರ ಬೆಂಬಲ ಬೇಕು. ವರ್ಗದವರು ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಿದ್ದಾರೆ. ಹೀಗಾಗಿ ಬಿಜೆಪಿ ಈಗ ಕರ್ನಾಟಕದಲ್ಲಿ ಸಮಾಜದ ಎಲ್ಲ ವರ್ಗದವರ ಪಕ್ಷವಾಗಿದೆ ಎಂದು ಹೇಳಿದರು.

ಇನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು, ಅವರು ಮುಂದಿನ ಜನಾಂಗಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಅವರೊಬ್ಬ ಪ್ರಬಲ ನಾಯಕ ಎಂದು ಹೇಳಿದರು.

ನೀಟ್ ಪರೀಕ್ಷೆಗೆ ತಮಿಳುನಾಡು ವಿರೋಧ ಮಾಡುತ್ತಿರುವುದು ಸರಿಯಲ್ಲ ಎಂದು ಬೊಮ್ಮಾಯಿ ಹೇಳಿದರು.‌ ನನ್ನ ನೇತೃತ್ವದಲ್ಲಿ ಚುನಾವಣೆ  2023 ಚುನಾವಣೆ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ ನನ್ನ ನೇತೃತ್ವಲ್ಲಿ ನಡೆಯಲಿದೆ. ಎಷ್ಟು ಅವಧಿಗೆ ಮುಖ್ಯಮಂತ್ರಿಯಾಗಿರುತ್ತೇನೆ ಎಂಬುದು ಮುಖ್ಯವಲ್ಲ.   ಅವಧಿಯಲ್ಲಿ ಏನು ಮಾಡುತ್ತೇನೆ ಎಂಬುದು ಮುಖ್ಯ. ಸಿಕ್ಕಿರುವ ಅವಧಿಯಲ್ಲಿ ಉತ್ತಮ ಆಡಳಿತ ನೀಡುವುದರ ಜೊತೆಗೆ ಮತ್ತೊಂದುಅವಧಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇನೆ ಎಂದು ಸಿಎಂ ಬೊಮ್ಮಾಯಿವಿಶ್ವಾಸ ವ್ಯಕ್ತಪಡಿಸಿದರು. ‌

 

Please follow and like us:

Leave a Reply

Your email address will not be published. Required fields are marked *

Next Post

ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು; ಡಿಕೆ ಶಿವಕುಮಾರ್ ಅವರು ʼಅಪ್ಪಟ ಸುಳ್ಳುʼಗಾರ; ಹೆಚ್‌ ಡಿಕೆ

Sat Oct 9 , 2021
ತಾವು ನಿಧನರಾಗುವುದಕ್ಕೆ ಹದಿನೈದು ದಿನ ಮೊದಲು ಎಂ.ಸಿ.ಮನಗೂಳಿ ಅವರು ತಮ್ಮ ಮನೆಗೆ ಬಂದು ಮಕ್ಕಳನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ಕೇಳಿದ್ದರು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿದ್ದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್‌ ಡಿ ಕುಮಾರಸ್ವಾಮಿ ಅವರು , ಡಿಕೆ ಶಿವಕುಮಾರ್ ಅಪ್ಪಟ ಸುಳ್ಳು ಹೇಳುತ್ತಿದ್ದಾರೆಂದು ಟೀಕಿಸಿದ್ದಾರೆ.  ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು. ವ್ಯಕ್ತಿ ಇಲ್ಲವಾದ ಮೇಲೆ ಅವರ ವಿಚಾರದಲ್ಲಿ […]

Advertisement

Wordpress Social Share Plugin powered by Ultimatelysocial