ಬಿಜೆಪಿ ವಿರುದ್ಧ ಸಿದ್ಧರಾಮಯ್ಯ ಟೀಕೆ

ರಾಜ್ಯದಲ್ಲಿ ಕೋವಿಡ್ ೧೯ ಸಾಮುದಾಯಿಕವಾಗಿ ಹರಡಿದ್ದರೂ ಸರಿಯಾಗಿ ಸೋಂಕು ಪರೀಕ್ಷೆ ನಡೆಸದೇ ಜನರ ಸಾವಿಗೆ ಕಾರಣವಾಗಿರುವ ಬಿಜೆಪಿ ಸರ್ಕಾರವನ್ನು ಕೊಲೆಗಡುಕ ಸರ್ಕಾರ ಎಂದರೆ ತಪ್ಪಾಗುತ್ತದೆಯೇ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸರ್ಕಾರ ಹೆಚ್ಚು ಪರೀಕ್ಷೆ ನಡೆಸಿದರೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತದೆ. ಸೋಂಕಿತರ ಸಂಖ್ಯೆಗನುಗುಣವಾಗಿ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕಾಗುತ್ತದೆ ಎನ್ನುವ ಕಾರಣಕ್ಕೆ ಸರ್ಕಾರ ಸಮರ್ಪಕವಾಗಿ ಹೆಚ್ಚು ಪರೀಕ್ಷೆ ನಡೆಸದೇ ಜನರ ಸಾವಿಗೆ ಕಾರಣವಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಕೇವಲ ೫೯ ಕೋವಿಡ್ ಪರೀಕ್ಷಾ ಕೇಂದ್ರಗಳಿದ್ದು, ಅವುಗಳ ದಿನದ ಪರೀಕ್ಷಾ ಸಾಮರ್ಥ್ಯ ೩೧,೧೧೬ ಮಾತ್ರ. ರಾಜ್ಯದಲ್ಲಿ ಪ್ರತಿದಿನ ಕೇವಲ ೧೩, ೯೧೦ ಪರೀಕ್ಷೆ ನಡೆಸಲಾಗುತ್ತಿದೆ. ಅಂದರೆ ಒಟ್ಟು ಸಾಮರ್ಥ್ಯದ ಶೇ.೪೪.೭ರಷ್ಟು ಮಾತ್ರ ಬಳಕೆಯಾಗುತ್ತಿದೆ. ಇದು ರಾಜ್ಯ ಸರ್ಕಾರದ ಅಯೋಗ್ಯತೆಗೆ ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ತೃಣಮೂಲ ಕಾಂಗ್ರೆಸ್ ಸರಕಾರ ಕಿತ್ತೊಗೆಯಲು ಸಿದ್ಧ

Tue Jul 7 , 2020
ಟಿಎಂಸಿ ಆಡಳಿತವಿರುವ ಪಶ್ಚಿಮ ಬಂಗಾಲದಲ್ಲಿ ರಾಜಕಾರಣದ ಅಪರಾಧೀಕರಣ ಹಾಗೂ ಭ್ರಷ್ಟಾಚಾರ ಎಲ್ಲೆ ಮೀರಿವೆ. ಇಂಥ ದುರುಳ ಸರಕಾರವನ್ನು ಕಿತ್ತೂಗೆಯುವ ಕಾಲ ಬಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಾಗ್ಧಾಳಿ ನಡೆಸಿದ್ದಾರೆ. ಜನ ಸಂಘದ ಅಧ್ಯಕ್ಷ ಶ್ಯಾಮ ಪ್ರಸಾದ್ ಮುಖರ್ಜಿಯವರ ಜನ್ಮ ದಿನಾಚರಣೆ ನಿಮಿತ್ತ ಕೋಲ್ಕತಾದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು. ಜವಾಹರಲಾಲ್ ನೆಹರೂ ಅವರ ಅನುಕೂಲ ಸಿಂಧು ರಾಜಕಾರಣವನ್ನು ಆರಂಭದಿAದಲೇ ವಿರೋಧಿಸುತ್ತಾ ಬಂದಿದ್ದ […]

Advertisement

Wordpress Social Share Plugin powered by Ultimatelysocial