ಬಿಬಿಎಂಪಿ ಸಿಬ್ಬಂದಿಗಳಿಗೆ ಕೊರೊನಾ ಒಟ್ಟು ೧೫ ಮಂದಿಗೆ ಸೋಂಕು ದೃಢ

ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಗುರುವಾರ ನಗರದಲ್ಲಿ ೮೮೯ ಪ್ರಕರಣ ದಾಖಲಾಗಿದೆ. ಬಿಬಿಎಂಪಿಯ ೧೫ ಸಿಬ್ಬಂದಿಗಳಿಗೂ ಸೋಂಕು ತಗುಲಿದೆ. ಪೊಲೀಸ್ ಹಾಗೂ ಆರೋಗ್ಯ ಇಲಾಖೆಯ ಕೆಲ ಸಿಬ್ಬಂದಿಗೆ ಸೋಂಕು ದೃಢಪಟ್ಟಿದ್ದು, ಈಗ ಬಿಬಿಎಂಪಿ ಸಿಬ್ಬಂದಿಗೂ ಮಾರಕ ಸೋಂಕು ತಗುಲಿರುವುದು ವರದಿಯಾಗಿದೆ. ಮರ‍್ಚ್ ತಿಂಗಳಿನಿಂದ ಬಿಬಿಎಂಪಿ ಸಿಬ್ಬಂದಿಗಳು ಕೊರೊನಾ ವೈರಸ್ ಸೋಂಕಿನ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಬಿಬಿಎಂಪಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿದಂತೆ ಒಟ್ಟು ೧೫ ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಸಿಐಟಿಯು ಪದಾಧಿಕಾರಿಗಳಿಂದ ಪ್ರತಿಭಟನೆ

Fri Jul 3 , 2020
ಸಿಐಟಿಯು ಪದಾಧಿಕಾರಿಗಳಿಂದ ಮಧುಗಿರಿ ತಾಲ್ಲೂಕು ಪಂಚಾಯಿತಿ ಸಭಾಂಗಣದ ಮುಂದೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಕೋವಿಡ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ ಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ದೇಶವ್ಯಾಪಿಯಿಂದ  ಕರೆದಿದ್ದ ಪ್ರತಿಭಟನೆಗೆ ಮಧುಗಿರಿ ಪದಾಧಿಕಾರಿಗಳು ಬೆಂಬಲ ಸೂಚಿಸಿದರು. ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷೆ ಕಮಲ, ತಾಲ್ಲೂಕು ಅಧ್ಯಕ್ಷೆ  ಪಾರ್ವತಮ್ಮ , ಸಂಚಾಲಕಿ ಸುಕನ್ಯಾ, ಭಾರತಿ ಇನ್ನೂ ಹಲವರು ಭಾಗಿಯಾಗಿದ್ದರು. Please follow […]

Advertisement

Wordpress Social Share Plugin powered by Ultimatelysocial