ಬಿಹಾರದಲ್ಲಿ ಎನ್‌ಕೌಂಟರ್ -ನಾಲ್ವರು ನಕ್ಸಲರ ಹತ್ಯೆ

ಬಿಹಾರದ ಪಶ್ಚಿಮದ ಚಂಪಾರಣ್ ಜಿಲ್ಲೆಯಲ್ಲಿ ಪೋಲಿಸರು ನಡೆಸಿದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರ ಹತ್ಯೆಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗುತ್ತಿದೆ. ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು, ೩ ಸೆಲ್ಫ್ ಲೋಡಿಂಗ್ ರೈಫಲ್ಸ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಗಹ ಎಂಬ ಪ್ರದೇಶದಲ್ಲಿ ನಕ್ಸಲರು ಬೀಡು ಬಿಟ್ಟಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಸ್ಥಳಕ್ಕೆ ತೆರಳಿದ್ದ ಸಶಸ್ತ್ರ ಸೀಮಾ ಬಲ ಹಾಗೂ ವಿಶೇಷ ಕಾರ್ಯಾಚರಣಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.

ಕಾರ್ಯಾಚರಣೆಯಲ್ಲಿ ಇದೀಗ ನಾಲ್ವರು ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಪಶ್ಚಿಮ ಚಂಪಾರಣ್ ಜಿಲ್ಲೆಯ ಪೊಲೀಸರು ಮಾಹಿತಿ ನೀಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದು ಒತ್ತಾಯ

Fri Jul 10 , 2020
ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮುಖ್ಯ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಿಗೆ ಉತ್ತರ ಪತ್ರಿಕೆಗಳ ದೃಢೀಕೃತ ಪ್ರತಿ ನೀಡಲು ನಿರಾಕರಿಸುತ್ತಿರುವ ಕರ್ನಾಟಕ ಲೋಕಸೇವಾ ಆಯೋಗದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಮೌಲ್ಯಮಾಪನ ಆಗಿರುವ ಉತ್ತರ ಪತ್ರಿಕೆ ಪ್ರತಿ ಪಡೆದುಕೊಳ್ಳುವುದು ಅಭ್ಯರ್ಥಿಗಳ ಹಕ್ಕು ಎಂದು ಹೇಳಿದ್ದಾರೆ. ಮಾಹಿತಿ ಹಕ್ಕು ಕಾಯ್ದೆಯನ್ನೂ ಕೆಪಿಎಸ್‌ಸಿ ಸಮರ್ಪಕವಾಗಿ ಅನುಷ್ಠಾನ ಮಾಡುತ್ತಿಲ್ಲ […]

Advertisement

Wordpress Social Share Plugin powered by Ultimatelysocial