ಬೆಂಗಳೂರಿನಲ್ಲಿ ʻವಂದೇ ಭಾರತ್ ಎಕ್ಸ್‌ಪ್ರೆಸ್‌ʼ ಮೇಲೆ ಕಲ್ಲು ತೂರಾಟ, ಕಿಟಕಿ ಗಾಜಿಗೆ ಹಾನಿ

ಬೆಂಗಳೂರು: ಬೆಂಗಳೂರಿನಲ್ಲಿ ಹೈಸ್ಪೀಡ್ ರೈಲಿಗೆ ಕೆಲವರು ಕಲ್ಲು ತೂರಾಟ ನಡೆಸಿದ ಪರಿಣಾಮ ವಂದೇ ಭಾರತ್ ಎಕ್ಸ್‌ಪ್ರೆಸ್‌(Vande Bharat Express)ನ ಗಾಜುಗಳಿಗೆ ಹಾನಿಯಾಗಿದೆ ಎಂದು ನೈಋತ್ಯ ರೈಲ್ವೆ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.

ರೈಲು ಮೈಸೂರಿನಿಂದ ತಮಿಳುನಾಡಿನ ರಾಜಧಾನಿ ಚೆನ್ನೈಗೆ ತೆರಳುತ್ತಿದ್ದ ವೇಳೆ ಕಲ್ಲು ಎಸೆಯಲಾಗಿದೆ.ಘಟನೆಯಿಂದ ಯಾರಿಗೂ ಗಾಯಗಳಾಗಿಲ್ಲ. ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ ಎಂದು ರೈಲ್ವೆ ತಿಳಿಸಿದೆ.

‘ರೈಲು ಸಂಖ್ಯೆ 20608 ಮೈಸೂರು-ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಕೋಚ್‌ನ ಎರಡು ಕಿಟಕಿಗಳು ಹಾನಿಗೊಳಗಾಗಿವೆ. ಕೃಷ್ಣರಾಜಪುರಂ ಮತ್ತು ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣಗಳ ನಡುವೆ ಈ ಘಟನೆ ಸಂಭವಿಸಿದೆ’ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಮೇಲೆ ಜನರು ಕಲ್ಲು ತೂರಾಟ ನಡೆಸುತ್ತಿರುವ ಘಟನೆಗಳು ಇತ್ತೀಚೆಗೆ ವರದಿಯಾಗುತ್ತಿವೆ. ರೈಲ್ವೇ ಸಂರಕ್ಷಣಾ ಪಡೆ ಜನವರಿಯಲ್ಲಿ ರೈಲುಗಳ ಮೇಲೆ ಕಲ್ಲು ತೂರಾಟದ 21 ಪ್ರಕರಣಗಳನ್ನು ಮತ್ತು ಫೆಬ್ರವರಿಯಲ್ಲಿ 13 ಪ್ರಕರಣಗಳನ್ನು ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದಲ್ಲಿ ದಾಖಲಿಸಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಧನು ರಾಶಿ ಭವಿಷ್ಯ.

Sun Feb 26 , 2023
  ನಿಮ್ಮ ಶಕ್ತಿಯನ್ನು ಸ್ವಯಂ ಸುಧಾರಣೆ ಯೋಜನೆಗಳಲ್ಲಿ ಹಾಗೂ ನಿಮ್ಮನ್ನು ಉತ್ತಮವಾಗಿಸುವ ಯೋಜನೆಗಳಲ್ಲಿ ಹಾಕಿ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ಮನೆಯಲ್ಲಿ ಧರ್ಮಕಾರ್ಯಗಳನ್ನು ನಡೆಸಲಾಗುವುದು. ನೀವು ಸಂತೋಷ ನೀಡುವ ಮೂಲಕ ಮತ್ತು ಹಿಂದಿನ ತಪ್ಪುಗಳನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಸಮರ್ಥಗೊಳಿಸಲಿದ್ದೀರಿ. ನಿಮ್ಮಿ ಪ್ರೇಮಿ ನಿಮಗೆ ಸಾಕಷ್ಟು ಸಮಯ ನೀಡುತ್ತಿಲ್ಲ, ಈ ದೂರು ಇಂದು ನೀವು […]

Advertisement

Wordpress Social Share Plugin powered by Ultimatelysocial