ಬೆಂಗಳೂರಿನಲ್ಲಿ ಭೀಕರ ಅಪಘಾತ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದ ಕಾರು

 

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹೆಚ್ಚಾಗಿರುವ ಕಾರಣ ಸರ್ಕಾರ ಈಗಾಗಲೇ ನೈಟ್ ಕರ್ಫ್ಯೂ ವಿಧಿಸಿದೆ. ಈ ನಡುವೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ನೋವಾ ಕ್ರಿಸ್ಟಾ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿರುವ ಘಟನೆ ಮಂತ್ರಿ ಮಾಲ್ ಬಳಿ ನಡೆದಿದೆ.

ಇನ್ನೋವಾ ಕ್ರಿಸ್ಟಾ ಕಾರಿನಲ್ಲಿ ಓವರ್ ಸ್ಪೀಡ್ ಆಗಿ ಬಂದ ಚಾಲಕ ಡಿವೈಡರ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರ್ ನಲ್ಲಿದ್ದ ಎರಡು ಏರ್ ಬ್ಯಾಗ್‍ಗಳು ಓಪನ್ ಆಗಿದೆ.

ಅಲ್ಲದೇ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಸೇರಿ ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಇದೀಗ ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಹೈಗ್ರೌಂಡ್ಸ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮತ್ತು ಈ ಸಂಬಂಧ ಹೈ ಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತನಿಖೆ ವೇಳೆ ಕಾರಿನಲ್ಲಿ ಮದ್ಯ ಬಾಟಲಿ ಪತ್ತೆಯಾಗಿದ್ದು, ಮದ್ಯ ಸೇವಿಸಿ ಕಾರು ಚಾಲನೆ ಮಾಡಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಇಬ್ಬರನ್ನೂ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು, ಮೆಡಿಕಲ್ ಟೆಸ್ಟ್ ಮಾಡಿಸುತ್ತಿದ್ದಾರೆ. ಈ ವೇಳೆ ಮದ್ಯ ಸೇವನೆ ಮಾಡಿರುವುದು ಕಂಡು ಬಂದರೆ ಡ್ರಿಂಕ್ ಆಯಂಡ್ ಡ್ರೈವ್ ಕೇಸ್ ಅಡಿ ಪ್ರಕರಣ ದಾಖಲಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:
Please follow and like us:

Leave a Reply

Your email address will not be published. Required fields are marked *

Next Post

ಮನೆಯ ಮುಂದೆ ಆಟವಾಡುತ್ತಿದ್ದ ಮಗುವಿನಮೇಲೆ ಕಾಮುಕನ ಹಲ್ಲೆ

Thu Jan 27 , 2022
    ಭುವನೇಶ್ವರ್ : ಐದು ವರ್ಷದ ಪುಟ್ಟ ಬಾಲಕಿಯನ್ನ ಚಾಲಕ ಅತ್ಯಾಚಾರ ಮಾಡಿದ ಘಟನೆ ಒಡಿಶಾದ ಪುರಿ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಕುಟುಂಬಕ್ಕೆ ಪರಿಚಯವಿದ್ದ ವ್ಯಕ್ತಿಯೊಬ್ಬ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ, ಬಾಲಕಿಯನ್ನು ಮನೆಯ ಟೆರೇಸ್‍ಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಮನೆಗೆ ಬಂದ ಬಾಲಕಿಯ ಅಮ್ಮ ಮಗಳ ಕಿರುಚಾಟವನ್ನು ಕೇಳಿ ಟೆರೇಸ್ ಗೆ ಹೋಗಿ ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಆದರೆ ಅಲ್ಲಿಂದ ಆರೋಪಿ ತಪ್ಪಿಸಿಕೊಂಡಿದ್ದಾನೆ. ಬಾಲಕಿ ಪ್ರಸ್ತುತ ಕಟಕ್‍ನ ಎಸ್‍ಸಿಬಿ […]

Advertisement

Wordpress Social Share Plugin powered by Ultimatelysocial