ಬೆಂಗಳೂರಿನ ಅಭಿವೃದ್ಧಿಯಲ್ಲಿ ಜನರ ಪಾಲ್ಗೊಳ್ಳುವಿಕೆ ಅಗತ್ಯ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೃಹತ್ ಬೆಂಗಳೂರಿನ ಅಭಿವೃದ್ಧಿಯಲ್ಲಿ ಜನರ ಪಾಲ್ಗೊಳ್ಳುವಿಕೆ ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮುಖ್ಯಮಂತ್ರಿ ನಗರೋತ್ಥಾನ ಯೋಜನೆಯಡಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಶಿವನಗರ 1ಮತ್ತು 8ನೇ ಮುಖ್ಯರಸ್ತೆ ಕೂಡುವ  ಸ್ಥಳದಲ್ಲಿ 71.98 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಇಂಟಿಗ್ರೇಟೆಡ್ ಮೇಲ್ಸೇತುವೆಯನ್ನು ಉದ್ಘಾಟಿಸಿ ಬಳಿಕ ಮಾತನಾಡಿ ಸಿಎಂ ಜನರಿಂದ ಸಲಹೆ ಸೂಚನೆಗಳನ್ನು ಪಡೆಯಲು ಯೋಜನೆ ರೂಪಿಸಲಾಗುತ್ತಿದೆಬೆಂಗಳೂರಿನ ಎಲ್ಲಾ ಸೇವೆಗಳನ್ನು ಒಂದೇ ಸೂರಿನಡಿ ಮೊಬೈಲ್ನಲ್ಲಿ ಲಭ್ಯವಾಗುವಂತೆ ಮಾಲಾಗುತ್ತಿದ್ದು, ಆಧುನಿಕ ತಂತ್ರಜ್ಞಾನದ ಬಳಕೆಯಿಂದ  ಶೀಘ್ರದಲ್ಲಿಯೇ ಎಲ್ಲಾ 28 ಕ್ಷೇತ್ರಗಳಲ್ಲಿ ಪ್ರಾರಂಭ ಮಾಡಲಾಗುವುದು ಎಂದು ತಿಳಿಸಿದರು. ಅತಿ ಹೆಚ್ಚು ಜನದಟ್ಟಣೆ ಇರುವ ಶಿವನಗರ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಹನದಟ್ಟನೆ ಕಡಿಮೆ ಮಾಡಲು ಇಂಟಿಗ್ರೇಟೆಡ್ ಮೇಲ್ಸೇತುವೆ ಬಹಳ ಸಹಕಾರಿಯಾಗಿದೆ. ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಡಾವಣೆಯನ್ನು ಒಟ್ಟುಗೂಡಿಸಿರುವ ಕೆಲಸ ಅಭಿನಂದನೀಯ.   ತುಮಕೂರುಮೈಸೂರು ಹೆದ್ದಾರಿ ಹೈ ಡೆನ್ಸಿಟಿ ಕಾರಿಡಾರ್ ಆಗಿದ್ದು, ವೆಸ್ಟ್ ಆಫ್ ಕರ್ಡ್ ರೋಡ್ ಬಳಿ ವಾಹನ ದಟ್ಟಣೆ ಜಾಸ್ತಿ ಇರುತ್ತದೆಸೋಪ್ ಫ್ಯಾಕ್ಟರಿ ಯಿಂದ ಮೈಸೂರು ರೋಡ್ ತನಕ ತಡೆರಹಿತ ರಸ್ತೆ ನಿರ್ಮಾಣ ಮಾಡಲು  ಬಸವೇಶ್ವರ ನಗರ ಲಿಂಕ್ ಮಾಡುವ ಮಹತ್ವದ ಕಾಮಗಾರಿಯನ್ನು ಶೀಘ್ರದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದರು.

Please follow and like us:

Leave a Reply

Your email address will not be published. Required fields are marked *

Next Post

ಸಂಶೋಧನೆ ಮತ್ತು ನಾವಿನ್ಯತಾ ಕೇಂದ್ರ ಪ್ರಾರಂಭ..!

Mon Oct 4 , 2021
ಟಾಟಾ ಟೆಕ್ನಾಲಜೀಸ್ ಅಧ್ಯಕ್ಷ ಆನಂದ್ ಬಢೆ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.ರಾಜ್ಯ ಸರ್ಕಾರದೊಂದಿಗೆ ಮಾಡಿಕೊಂಡ ಒಪ್ಪಂದದಂತೆ ರಾಜ್ಯದಲ್ಲಿ 150 ಸರ್ಕಾರಿ ಐಟಿಐ ಗಳ ಉನ್ನತೀಕರಣವನ್ನು ಟಾಟಾ ಟೆಕ್ನಾಲಜೀಸ್ ಸಂಸ್ಥೆ ಇತರ ಕಾರ್ಪೊರೇಟ್ ಸಂಸ್ಥೆಗಳ ಸಹಯೋಗದೊಂದಿಗೆ ಕೈಗೆತ್ತಿಕೊಂಡಿದ್ದು, ಮೂಲಸೌಕರ್ಯ ಉನ್ನತೀಕರಣ ಬಹುತೇಕ ಪೂರ್ಣಗೊಂಡಿದೆ. ಜೊತೆಗೆ ಐಟಿಐ ಬೋಧಕ ಸಿಬ್ಬಂದಿಗೂ ತರಬೇತಿ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.ಮುಖ್ಯಮಂತ್ರಿಯವರು ಐಟಿಐಗಳ ಒಟ್ಟಾರೆ ಅಭಿವೃದ್ಧಿಗೆ, […]

Advertisement

Wordpress Social Share Plugin powered by Ultimatelysocial