ಬೆಂಗಳೂರಿನ ಮುರಳಿ ಕೊರಳಿಗೆ 18 ಚಿನ್ನದ ಪದಕ:

ಬೆಳಗಾವಿ:ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 22ನೇ ಘಟಿಕೋತ್ಸವದಲ್ಲಿ ಮೂವರು ಸಾಧಕರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪದವಿ ಹಾಗೂ 700ಕ್ಕೂ ಅಧಿಕ ಸಂಶೋಧನಾ ವಿದ್ಯಾರ್ಥಿಗಳಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು.’ಬೆಳಗಾಂ ಫೆರೋಕಾಸ್ಟ್ ಇಂಡಿಯಾ’ದ ವ್ಯವಸ್ಥಾಪಕ ನಿರ್ದೇಶಕ ಸಚಿನ ಸಬ್ನೀಸ್ ಹಾಗೂ ‘ವ್ಯಾಬ್ಕೋ ಇಂಡಿಯಾ ಲಿಮಿಟೆಡ್’ನ ಚೇರ್ಮನ್ ಲಕ್ಷ್ಮೀ ನಾರಾಯಣ ಅವರಿಗೆ ರಾಜ್ಯಪಾಲ ಥಾವರ್​ಚಂದ್ ಗೆಹಲೋತ್ ಡಾಕ್ಟರ್ ಆಫ್ ಸೈನ್ಸ್ ಗೌರವ ಪದವಿ ಪ್ರದಾನ ಮಾಡಿದರು.ಇದೇ ಸಂದರ್ಭದಲ್ಲಿ ‘ಟೊಯೋಟಾ ಕಿಲೋಸ್ಕರ್ ಮೋಟಾರ್’ನ ಉಪಾಧ್ಯಕ್ಷರಾಗಿದ್ದ ದಿ.ವಿಕ್ರಮ ಕಿಲೋಸ್ಕರ್ ಅವರಿಗೂ ಡಾಕ್ಟರ್ ಆಫ್ ಸೈನ್ಸ್ ಗೌರವ ಪದವಿ ಪ್ರಕಟಿಸಲಾಯಿತು.ಚಿನ್ನದ ಹುಡುಗ: ಬೆಂಗಳೂರಿನ ಎಸ್.ಮುರಳಿ 18 ಚಿನ್ನದ ಪದಕ ಪಡೆಯುವ ಮೂಲಕ ವಿಟಿಯು ಇತಿಹಾಸದಲ್ಲೇ ಮೊದಲಿಗರಾದರು. ಕುರಂಜಿ ವೆಂಕಟರಮನಗೌಡ ಕಾಲೇಜ್ ಆಫ್ ಇಂಜಿನಿಯರಿಂಗ್​ನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಎಸ್.ಕೃತಿ 8 ಚಿನ್ನದ ಪದಕ, ಬೆಂಗಳೂರು ಎ.ಸಿ.ಎಸ್. ಕಾಲೇಜ್ ಆಫ್ ಇಂಜಿನಿಯರಿಂಗ್ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಎಸ್.ಸ್ವಾತಿ 7 ಚಿನ್ನದ ಪದಕ ಮುಡಿಗೇರಿಸಿಕೊಂಡರು.ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ಎಸ್.ವಿ.ಸುಶ್ಮಿತಾ 6 ಚಿನ್ನದ ಪದಕ, ಬಿ.ಎನ್.ಎಂ. ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ಆಂಡ್ ಇಂಜಿನಿಯರಿಂಗ್ ವಿಭಾಗದ ಪೂಜಾ ಬಾಸ್ಕೇರ 6, ಬೆಂಗಳೂರಿನ ಆರ್​ಎನ್​ಎಸ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಲೆಕ್ಟ್ರಾನಿಕ್ಸ್ ಆಂಡ್ ಇನ್​ಸ್ಟ್ರುಮೆಂಟೇಷನ್ ವಿಭಾಗದ ಎಂ.ಅಭಿಲಾಷ್ 4, ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇನ್ಪಮೇಷನ್ ಸೈನ್ಸ್ ಆಂಡ್ ಇಂಜಿನಿಯರಿಂಗ್ ವಿಭಾಗದ ಯುವಿಕಾ ರಮೇಶ್​ಬಾಬು 4, ಆರ್​ಎನ್ ಎಸ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಬಿಎ ವಿಭಾಗದ ಜೆ.ಹರ್ಷವರ್ಧಿನಿ 4, ಬಿಎಂಎಸ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯು.ಕೆ.ಅರ್ಜುನ್ 3 ಹಾಗೂ ದಾವಣಗೆರೆ ಯುಬಿಟಿಡಿ ಕಾಲೇಜ್ ಆಫ್ ಇಂಜಿನಿಯರಿಂಗ್​ನ ಎಂ.ಟೆಕ್ ವಿಭಾಗದ ಜಿ.ಆರ್.ಸಂಗೀತಾ 2 ಸೇರಿ ವಿವಿಧ ವಿಭಾಗಗಳಲ್ಲಿ ಉತ್ಕೃಷ್ಟ ಅಂಕಸಾಧನೆ ಮಾಡಿದ 10 ವಿದ್ಯಾರ್ಥಿಗಳು ಚಿನ್ನದ ಪದಕ ಪಡೆದರು.ಘಟಿಕೋತ್ಸವದಲ್ಲಿ ಒಟ್ಟು 53,415 ವಿದ್ಯಾರ್ಥಿಗಳಿಗೆ ಬಿಇ ಹಾಗೂ ಬಿ.ಟೆಕ್ ಪದವಿ, 1045 ಬಿಇ ಆರ್ಕಿಟೆಕ್ಟರ್ ಪದವಿ, 9 ಬಿ.ಪ್ಲಾಯನ್ ಪದವಿ, 4279 ಎಂಬಿಎ ಪದವಿ, 2032 ಎಂಸಿಎ, 1366 ಎಂ.ಟೆಕ್ ಪದವಿ, 82 ಎಂ.ಆರ್ಕಿಟೆಕ್ಚರ್ ಪದವಿ, 1 ಪಿಜಿ ಡಿಪ್ಲೊಮಾ ಪದವಿ, 2 ಎಂಎಸ್ಸಿ ಇಂಜಿನಿಯರಿಂಗ್ ಪದವಿ, ನಾಲ್ವರು ವಿದ್ಯಾರ್ಥಿಗಳಿಗೆ ಡಬಲ್ ಡಿಗ್ರಿ ಪದವಿ ಹಾಗೂ 700ಕ್ಕೂ ಅಧಿಕ ಸಂಶೋಧನಾ ವಿದ್ಯಾರ್ಥಿಗಳಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು. ಆಲ್​ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಷನ್ ಚೇರ್ಮನ್ ಪ್ರೊ.ಟಿ.ಜಿ.ಸೀತಾರಾಮ ಹಾಗೂ ವಿಟಿಯು ಕುಲಪತಿ ಎಸ್.ವಿದ್ಯಾಶಂಕರ ಸೇರಿ ವಿಶ್ವವಿದ್ಯಾಲಯದ ಕುಲಸಚಿವರು ಇದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ʻಅಮಿತ್ ಶಾʼರ ರ್ಯಾಲಿಯಿಂದ ಹಿಂದಿರುಗುವಾಗ ಘೋರ ದುರಂತ;

Sat Feb 25 , 2023
ಸಿಧಿ (ಮಧ್ಯಪ್ರದೇಶ) : ಮಧ್ಯಪ್ರದೇಶದ ಸಿಧಿಯಲ್ಲಿ ಶುಕ್ರವಾರ ತಡರಾತ್ರಿ ಟ್ರಕ್‌ವೊಂದು ಎರಡು ಬಸ್‌ಗಳಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡಿದ್ದಾರೆ.ಮೊಹಾನಿಯಾ ಸುರಂಗದ ಸಮೀಪ ಬರ್ಖಾಡ ಗ್ರಾಮದ ಬಳಿ ಈ ಘಟನೆ ನಡೆದಿದೆ.ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರ್ಯಾಲಿಯಿಂದ ಹಿಂದಿರುಗುತ್ತಿದ್ದ ಜನರನ್ನು ಈ ಬಸ್ಸುಗಳು ಸಾಗಿಸುತ್ತಿದ್ದವು.ಅಧಿಕಾರಿಗಳ ಪ್ರಕಾರ, ಟ್ರಕ್‌ನಲ್ಲಿ ಟೈರ್ ಸ್ಫೋಟಗೊಂಡಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ […]

Advertisement

Wordpress Social Share Plugin powered by Ultimatelysocial