ಬೆಂಗಳೂರು-ಮೈಸೂರು ರಸ್ತೆಗೆ 250 ರೂ.ಟೋಲ್ ದರ ನಿಗದಿ

 

ಬೆಂಗಳೂರು ಮೈಸೂರು ನಡುವಣ ಎಕ್ಸ್ ಪ್ರೆಸ್ ಹೈವೆಗೆ ಟೋಲ್ ದರ 250 ರೂ. ನಿಗದಿಯಾಗಬಹುದು ಎಂದು ಮೈಸೂರು-ಕೊಡಗು ಸಂಸದ ಬಿಜೆಪಿಯ ಪ್ರತಾಪ್ ಸಿಂಹ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೋಲ್ ದರ ಇನ್ನೂ ಅಂತಿಮಗೊಂಡಿಲ್ಲ. ಬೆಂಗಳೂರಿನಿಂದ ನಿಡಘಟ್ಟದವರೆಗಿನ ಮೊದಲ ಮಾರ್ಗಕ್ಕೆ 135 ರೂ.

ಮತ್ತು ಮೈಸೂರು-ಬೆಂಗಳೂರು ಹೈವೇ ಎರಡೂ ಕಡೆ ಸೇರಿ ಟೋಲ್​ ದರ 250 ರೂಪಾಯಿ ಆಗಬಹುದು ಎಂದರು.

ಬೆಂಗಳೂರು- ಮೈಸೂರು ನಡುವಿನ ರಸ್ತೆಯಲ್ಲಿ ಫ್ಲೈಓವರ್​​ಗಳು ಬಂದಾಗ ಟೋಲ್ ದರ ಕೊಂಚ ಹೆಚ್ಚಾಗುತ್ತದೆ. ಫ್ಲೈ ಓವರ್ಗಳು ಇರುವ ಕಾರಣ 250 ರೂ. ಟೋಲ್ ನಿಗದಿ ಆಗಬಹುದು ಎಂದು ಅವರು ಹೇಳಿದರು.

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಮಾರ್ಚ್ 2 ಅಥವಾ 3ನೇ ವಾರದಲ್ಲಿ ಹೈವೇ ಲೋಕಾರ್ಪಣೆ ಆಗುತ್ತೆ. ಸುಮಾರು 3,500 ಕೋಟಿ ವೆಚ್ಚದಲ್ಲಿ 115 ಕಿ.ಮೀ. ಹೈವೇ ನಿರ್ಮಾಣ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳು ಅಥವಾ ಮುಂದಿನ ತಿಂಗಳು ಎಕ್ಸ್‌ಪ್ರೆಸ್‌ವೇಯನ್ನು ಅನಾವರಣಗೊಳಿಸುವ ಸಾಧ್ಯತೆಯಿದೆ. ಎಕ್ಸ್‌ಪ್ರೆಸ್‌ವೇಗೆ ಕಾವೇರಿ ಎಕ್ಸ್‌ಪ್ರೆಸ್‌ವೇ ಎಂದು ಹೆಸರಿಸುವಂತೆ ಅಧಿಕಾರಿಗಳನ್ನು ಸಂಪರ್ಕಿಸಿದ್ದೇವೆ ಎಂದು ಪ್ರತಾಪ್ ಸಿಂಹ ತಿಳಿಸಿದರು.

ಬೆಂಗಳೂರಿನಿಂದ ನಿಡಘಟ್ಟವರೆಗಿನ 56-ಕಿಮೀ ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಬಳಸುವ ವಾಹನಗಳ ಟೋಲ್ ದರದ ಬಗ್ಗೆ ಚರ್ಚೆ ನಡೆದಿದ್ದು, ಕಾರು ಮತ್ತು ಇತರ ಲಘು ಮೋಟಾರು ವಾಹನಗಳ ಏಕಮುಖ ಸಂಚಾರಕ್ಕೆ 135 ರೂ. ಪಾವತಿಸಬೇಕಾಗುತ್ತದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು- ಮೈಸೂರು ನಡುವೆ ಬಸ್‌ ಸಂಚಾರಕ್ಕೆ 460 ರೂ. ಮತ್ತು ಭಾರೀ ಮೋಟಾರು ವಾಹನಗಳು 750-900 ರೂ.ಗಳ ನಡುವೆ ಪಾವತಿಸಬೇಕಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲಘು ಮತ್ತು ಭಾರೀ ವಾಹನಗಳಿಗೆ ಮಾಸಿಕ ಪಾಸ್‌ಗಳನ್ನು ನೀಡುತ್ತದೆ ಆದರೆ ಅವುಗಳನ್ನು ತಿಂಗಳಿಗೆ ನಿರ್ದಿಷ್ಟ ಸಂಖ್ಯೆಗೆ ನಿರ್ಬಂಧಿಸುತ್ತದೆ ಎಂದು ಹೇಳಲಾಗುತ್ತಿದೆ. ಪ್ರಸ್ತುತ, ಎಕ್ಸ್‌ಪ್ರೆಸ್‌ವೇಯಲ್ಲಿ ದ್ವಿಚಕ್ರ ವಾಹನಗಳ ಓಡಾಟಕ್ಕೆ ಅನುಮತಿ ನೀಡಲಾಗಿದೆ. ಆದರೆ ಟೋಲ್ ದರದ ಅಧಿಕೃತ ಸೂಚನೆ ಹೊರಡಿಸಿದ ನಂತರ, ಎಕ್ಸ್‌ಪ್ರೆಸ್‌ವೇ ನಲ್ಲಿ ದ್ವಿಚಕ್ರ ವಾಹನಗಳು ಮತ್ತು ತ್ರಿಚಕ್ರ ವಾಹನಗಳನ್ನು ನಿಷೇಧಿಸಲು ಹೆದ್ದಾರಿ ಪ್ರಾಧಿಕಾರ ಯೋಚಿಸಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದೆಹಲಿ : ಬಿಬಿಸಿ ಕಚೇರಿ ಮೇಲೆ ಐಟಿ ದಾಳಿ : ಮೊಬೈಲ್ ಫೋನ್ ಮತ್ತು ಲ್ಯಾಪ್ ಟಾಪ್ ವಶ!

Thu Feb 16 , 2023
    2002ರ ಗೋಧ್ರಾ ಹತ್ಯಾಕಾಂಡದ ಬಗ್ಗೆ ವರದಿ ಮಾಡಿದ ಬಿಬಿಸಿಯ ದೆಹಲಿ ಕಚೇರಿ ಮೆಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಕಚೇರಿಯಲ್ಲಿ ಬಳಸಲಾಗುತ್ತಿದ್ದ ಮೊಬೈಲ್ ಫೋನ್ ಮತ್ತು ಲ್ಯಾಪ್ ಟಾಪ್ ಅನ್ನು ವಶಪಡಿಸಿಕೊಂಡಿದ್ದಾರೆ. ಇಂಗ್ಲೆಂಡ್ ಮೂಲದ ಅತ್ಯಂತ ಜನಪ್ರಿಯ ಪ್ರಸಾರ ಸಂಸ್ಥೆಯಾಗಿರುವ ಬಿಬಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಣದ ವ್ಯವಹಾರದಲ್ಲಿ ಅಕ್ರಮ ಎಸಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.   ಗೋಧ್ರಾ ಹತ್ಯಾಕಾಂಡದಲ್ಲಿ […]

Advertisement

Wordpress Social Share Plugin powered by Ultimatelysocial