ಬೆಳಗಾವಿಯಲ್ಲಿ ರೈತರ ಖಾತೆಗೆ ಹಣ ಜಮಾ,ಶಿವಮೊಗ್ಗ ಏರ್ ಪೋರ್ಟ್ ಉದ್ಘಾಟನೆ : ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಶಿವಮೊಗ್ಗ ಮತ್ತು ಬೆಳಗಾವಿಗೆ ಭೇಟಿ ನೀಡಲಿರುವ ಪ್ರಧಾನಿ ಈ ತಿಂಗಳಲ್ಲಿ ಮೂರನೇ ಬಾರಿಗೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ, ಬೆಳಗಾವಿಯಲ್ಲಿ ನವೀಕೃತ ರೈಲು ನಿಲ್ದಾಣ ಸೇರಿದಂತೆ ಆರು ಸಾವಿರ ಕೋಟಿ ರೂ.ಗೂ ಹೆಚ್ಚು ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರ ಹುಟ್ಟುಹಬ್ಬದ ದಿನವೇ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಆಗುತ್ತಿರುವುದು ವಿಶೇಷವಾಗಿದೆ.

ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. ಸುಮಾರು 8 ಕೋಟಿ ಫಲಾನುಭವಿ ರೈತರ ಖಾತೆಗಳಿಗೆ 16 ಸಾವಿರ ಕೋಟಿ ರೂ.ಗೂ ಹೆಚ್ಚಿನ ಮೊತ್ತವನ್ನು ವರ್ಗಾವಣೆ ಮಾಡಲಾಗುವುದು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಾಲಾರ್ ನಲ್ಲಿ ಎಲ್ಲೆಮೀರಿದ ಶೋಷಣೆ.

Mon Feb 27 , 2023
ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಲು ಎಷ್ಟೇ ಪ್ರಯತ್ನ ಪಟ್ಟರು,ತಳಮಟ್ಟದಲ್ಲಿ ಬೇರೂರಿ ಕೂತಿರುವುದು ವ್ಯವಸ್ಥೆಗೆ ತಗುಲಿರಿವ ಅನಿಷ್ಟ. ಇಂದಿಗೂ ಜೀವಂತವಾಗಿದ್ದು ಅನೇಕ ಜೀವನಗಳಿಗೆ ಕೊಳ್ಳಿ ಇಟ್ಟಿದೆ. ಈ ರೀತಿಯ ಕಥೆಗಳನ್ನು ಸಿನಿಮಾ ಪರದೆಯ ಮೇಲೆ ತಂದು ಜಾಗೃತಿ ಮೂಡಿಸುವ ಕಾರ್ಯಗಳು ಈ ಹಿಂದೆ ಎಷ್ಟೋ ನಡೆದಿವೆ.ಈಗಲೂ ನಡೆಯುತ್ತಿವೆ. ಈ ವಾರ ತೆರೆ ಕಂಡು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿರುವ ಪಾಲಾರ್ ಸಿನಿಮಾ ಕೂಡ ಈ ವರ್ಗಕ್ಕೆ ಸೇರುತ್ತದೆ. ಜೀವನವೀನ್ ಆಕ್ಷನ್ ಕಟ್ ಹೇಳಿದ್ದು, […]

Advertisement

Wordpress Social Share Plugin powered by Ultimatelysocial