ಭೂ ಸುಧಾರಣಾ ಕಾಯ್ದೆ ಜಾರಿ..!

ಭೂಮಿ ಮಾರಾಟದ ಮೇಲಿನ ನಿರ್ಬಂಧ ಸಡಿಲಿಸುವ ಕರ್ನಾಟಕ ಭೂ ಸುಧಾರಣಾ ಕಾಯ್ದೆ 79ಎ 79 ಬಿ ತಿದ್ದುಪಡಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸರ್ಕಾರ ನಿರ್ಧರಿಸಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಶೇಷಾಜ್ಞೆಗೆ ಒಪ್ಪಿಗೆ ಪಡೆಯಲಾಗುವುದು ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,ಭೂಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ಸುಗ್ರೀವಾಜ್ಞೆ ಜಾರಿಗೊಳಿಸಲು ನಿರ್ಧರಿಸಿದ್ದು, ವಿಶೇಷಾಜ್ಞೆಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲಾಗುವುದು. ಕೊರೊನಾ ಹಿನ್ನೆಲೆಯಲ್ಲಿ ವಿಧಾನಮಂಡಲ ಅಧಿವೇಶನ ಸದ್ಯಕ್ಕೆ ನಡೆಯುವುದು ಅನುಮಾನ. ಹಾಗಾಗಿ ತಿದ್ದುಪಡಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲಾಗುವುದು. ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡನೆ ಮಾಡಿ ತಿದ್ದುಪಡಿ ಮಸೂದೆಗೆ ಅಂಗೀಕಾರ ಪಡೆದುಕೊಳ್ಳುತ್ತೇವೆ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿಯಲ್ಲಿ ಯಾವತ್ತೂ ಲಾಭಿ

Fri Jun 12 , 2020
ಬಿಜೆಪಿಯಲ್ಲಿ ಯಾವತ್ತೂ ಯಾವ  ಲಾಭಿಯೂ ನಡೆದಿಲ್ಲ ಎಂದು  ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಎಂ.ಪಿ, ಎಂಎಲ್ ಎ, ವಿಧಾನ ಪರಿಷತ್ ಆಯ್ಕೆಯಲ್ಲಿ ಲಾಭಿ ನಡೆದಿಲ್ಲ. ಈ ಬಾರಿ ಕೇಂದ್ರದ ನಾಯಕರು ಸ್ಥಳೀಯ ಕಾರ್ಯಕರ್ತರನ್ನ ರಾಜ್ಯ ಸಭೆಗೆ ಆಯ್ಕೆ ಮಾಡಿದ್ದಾರೆ. 15 ರಂದು ರಾಜ್ಯ ಕೋರ್ ಕಮಿಟಿ ಸಭೆ ಇದೆ. ಈ ಸಭೆಯಲ್ಲಿ ವಿಧಾನ ಪರಿಷತ್ ಗೆ ಯಾರನ್ನ ಆಯ್ಕೆ ಮಾಡಬೇಕು ಅನ್ನುವ ಬಗ್ಗೆ ಚರ್ಚೆ ಆಗುತ್ತೆ. […]

Advertisement

Wordpress Social Share Plugin powered by Ultimatelysocial