ಮಕ್ಕಳಿಗೆ ಚೂರಿಯಿಂದ ಇರಿದ ಭದ್ರತಾ ಸಿಬ್ಬಂದಿ

ಬೀಜಿಂಗ್: ಪ್ರಾಥಮಿಕ ಶಾಲೆಯ ಭದ್ರತಾ ಸಿಬ್ಬಂದಿಯೊಬ್ಬ ಚೂರಿಯಿಂದ ದಾಳಿ ನಡೆಸಿದ ಪರಿಣಾಮ 40 ಮಂದಿ ಮಕ್ಕಳು ಹಾಗೂ ಶಾಲೆಯ ಸಿಬ್ಬಂದಿಗಳು ಗಾಯಗೊಂಡಿರುವ ಘಟನೆ ಚೀನಾದಲ್ಲಿ ನಡೆದಿದೆ.ಚೀನಾದ ದಕ್ಷಿಣ ಗುವಾಂಕ್ಸಿ ಪ್ರಾಂತ್ಯದ ಶಾಲೆಯೊಂದರಲ್ಲಿ ಈ ಘಟನೆ ನಡೆದಿರುವುದಾಗಿ ಚೀನಾ ಸರ್ಕಾರ ಪ್ರಾಯೋಜಕತ್ವದ ದೈನಿಕದ ವರದಿ ವಿವರಿಸಿದೆ. ಮೂವರು ಪುಟ್ಟ ಮಕ್ಕಳ ಸ್ಥಿತಿ ಗಂಭೀರವಾಗಿರುವುದಾಗಿ ಸಿಜಿಟಿಎನ್ ಟಿವಿ ವರದಿ ಮಾಡಿದೆ. ಚೂರಿಯಿಂದ ದಾಳಿ ನಡೆಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಗಾಯಗೊಂಡಿರುವ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ. ಮಕ್ಕಳು, ಶಿಕ್ಷಕ ಸಿಬ್ಬಂದಿ ಸೇರಿದಂತೆ ಎಲ್ಲರನ್ನೂ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಗಾಯಗೊಂಡಿರುವ ಬಹುತೇಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿ ಹೇಳಿದೆ. ಪ್ರಾಥಮಿಕ ಶಾಲೆ ಬೆಳಗ್ಗೆ 8.30ಕ್ಕೆ ಆರಂಭಗೊಂಡಾಗ ಮಕ್ಕಳೆಲ್ಲರು ತರಗತಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ 50 ವರ್ಷದ ಸೆಕ್ಯೂರಿಟಿ ಗಾರ್ಡ್ ಚೂರಿಯಿಂದ ಮಕ್ಕಳ ಮೇಲೆ ದಾಳಿ ನಡೆಸಿರುವುದಾಗಿ ವರದಿ ವಿವರಿಸಿದೆ.

Please follow and like us:

Leave a Reply

Your email address will not be published. Required fields are marked *

Next Post

ರೈಲು ಹತ್ತಲು ಸಹಕರಿಸಿದ ಪೊಲೀಸರು

Thu Jun 4 , 2020
ಪಶ್ಚಿಮ ಬಂಗಾಳ: ಕೊರೋನ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ತಮ್ಮ ರಾಜ್ಯಗಳಿಗೆ ಶ್ರಮಿಕ್ ರೈಲುಗಳ ಮೂಲಕ ತೆರಳುತ್ತಿದ್ದಾರೆ. ಮುಂಬೈನಲ್ಲಿ ಪಶ್ಚಿಮ ಬಂಗಾಳಕ್ಕೆ ಹೊರಟ ರೈಲನ್ನು ಕೊನೆಕ್ಷಣದಲ್ಲಿ ಹತ್ತಲು ಬಂದ ಕಾರ್ಮಿಕರಿಗೆ ಪೊಲೀಸರು ಸಹಕರಿಸಿದ ವಿಡಿಯೋ ಈಗ ವೈರಲ್ ಆಗಿದೆ. ಕೊನೆಕ್ಷಣದಲ್ಲಿ ವಲಸೆ ಕಾರ್ಮಿಕರ ಗುಂಪೊಂದು ರೈಲು ಹತ್ತಲು ಸಾಧ್ಯವಾಗಿರಲಿಲ್ಲ. ಈ ವೇಳೆ ಪೊಲೀಸರು ಓಡಿ ರೈಲ್ವೆ ಸಿಬ್ಬಂದಿ ಗಮನಕ್ಕೆ ತಂದು, ರೈಲು ನಿಲ್ಲಿಸಿ ಈ ಕಾರ್ಮಿಕರನ್ನೆಲ್ಲ ಹತ್ತಿಸಿ ಕಳಿಸಿದರು. […]

Advertisement

Wordpress Social Share Plugin powered by Ultimatelysocial