ಮತದಾನ ಸಮಯ ಕಾಯ್ದಿರಿಸಿ!- ಮೊಬೈಲ್‌ ಆಯಪ್‌ ಅಭಿವೃದ್ಧಿಪಡಿಸಿದ ಚು. ಆಯೋಗ

 

ಬೆಂಗಳೂರು: ಸಿನೆಮಾ, ರೈಲ್ವೇ ಟಿಕೆಟ್‌ಗಳನ್ನು ಮುಂಚಿತವಾಗಿಯೇ ಕಾಯ್ದಿರಿಸುವಂತೆ ಈಗ ನೀವು ಮತದಾನ ಮಾಡುವ ಸಮಯವನ್ನೂ ಮೊದಲೇ ನಿಗದಿ ಮಾಡಿಕೊಳ್ಳಬಹುದು!

ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣ ವಿಭಾಗ ನೂತನ ಮೊಬೈಲ್‌ ಅಪ್ಲಿಕೇಷನ್‌ ಸಿದ್ಧಪಡಿಸುತ್ತಿದೆ.

ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿಯಿದ್ದು, ಆಯೋಗ ಈಗಿನಿಂದಲೇ ಸಿದ್ಧತೆ ನಡೆಸಿದೆ.

ಇದು ಯಶಸ್ವಿಯಾದರೆ ಮುಂದಿನ ಹಂತಗಳಲ್ಲಿ ರಾಜ್ಯದೆಲ್ಲೆಡೆ ವಿಸ್ತರಿಸುವ ಆಲೋಚನೆ ಆಯೋಗಕ್ಕಿದೆ.

ಮತದಾನ ಮಾಡಲು ಮತಗಟ್ಟೆಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಸಮಯ ವ್ಯರ್ಥ ಮಾಡುವ ಬದಲು, ಯಾವ ಸಮಯದಲ್ಲಿ ಮತದಾನ ಮಾಡಲು ಬರುತ್ತೇವೆ ಎಂಬುದನ್ನು ತಿಳಿಸಿ ಆ ಸಮಯದಲ್ಲಿ ಯಾವುದೇ ಅಡೆತಡೆಯಿಲ್ಲದೆ ನೇರವಾಗಿ ಹೋಗಿ ಮತದಾನ ಮಾಡಲು ಅವಕಾಶವಿರುವ ವ್ಯವಸ್ಥೆ ಮಾಡಲಾಗುತ್ತಿದೆ. ಈ ಕುರಿತಂತೆ ಚುನಾವಣ ಆಯೋಗದೊಂದಿಗೆ ಬಿಬಿಎಂಪಿ ಚುನಾವಣ ವಿಭಾಗ ಚರ್ಚೆ ನಡೆಸಿ, ಸಮಯ ನಿಗದಿಗೆ ಮೊಬೈಲ್‌ ಆಯಪ್‌ ಸಿದ್ಧಪಡಿಸುತ್ತಿದೆ.

ಎಸ್‌ಎಂಎಸ್‌ ಮೂಲಕ ಖಾತ್ರಿ
ಈ ಮೊಬೈಲ್‌ ಆಯಪ್‌ನಲ್ಲಿ ಚುನಾವಣೆ, ಮತದಾನಕ್ಕೆ ಸಂಬಂಧಿಸಿದ ವಿಷಯಗಳ ಮಾಹಿತಿ ಇರುತ್ತದೆ. ಅದರಲ್ಲಿ ಮತದಾರರು ತಮ್ಮ ಮತದಾರರ ಗುರುತಿನ ಚೀಟಿಯ ಸಂಖ್ಯೆ ನಮೂದಿಸಿದರೆ, ಯಾವ ಮತಗಟ್ಟೆಯಲ್ಲಿ ಮತದಾನ ಮಾಡಬೇಕು ಎಂಬ ಮಾಹಿತಿ ದೊರೆಯಲಿದೆ. ಜತೆಗೆ ತಾವು ಯಾವ ಸಮಯದಲ್ಲಿ ಮತದಾನ ಮಾಡಲು ಬರುತ್ತೇವೆ ಎಂಬುದನ್ನು ಮತದಾರರು ನಮೂದಿಸಿದರೆ, ಅದನ್ನು ನೋಂದಣಿ ಮಾಡಿಕೊಂಡು, ಅವರ ಮೊಬೈಲ್‌ಗೆ ಎಸ್‌ಎಂಎಸ್‌ ಮೂಲಕ ಖಾತ್ರಿಯ ಸಂದೇಶ ಬರಲಿದೆ. ಜತೆಗೆ ಸಂದೇಶದಲ್ಲಿ ಯುನೀಕ್‌ ಸಂಖ್ಯೆಯೂ ಇರಲಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗುರು ಶ್ರೀ ಅರವಿಂದರು ಅತೀತ ಮಾನಸ ಯೋಗದ ಪ್ರವರ್ತಕರು.

Wed Feb 22 , 2023
ಗುರು ಶ್ರೀ ಅರವಿಂದರು ಅತೀತ ಮಾನಸ ಯೋಗದ ಪ್ರವರ್ತಕರು. ಈ ಕೆಲಸದಲ್ಲಿ ಅವರಿಗೆ ಸಹಕಾರಿಯಾದವರು ಮುಂದೆ ಶ್ರೀಮಾತೆ ಎಂದು ಪೂಜನೀಯರಾದ ಮೀರಾ ಅಲ್ಫಾಸ ಅವರು. ಅರವಿಂದರಂತೆಯೇ ಸಾಕ್ಷಾತ್ಕಾರಗಳನ್ನು ಪಡೆದುಕೊಂಡ ಶ್ರೀಮಾತೆಯವರು “ಅತೀತ ಮಾನಸಯೋಗವು ಪೃಥ್ವಿಯ ಮುಂದಿನ ವಿಕಸನವನ್ನು ತ್ವರಿತಗೊಳಿಸುವುದೆಂದು” ಪ್ರತಿಪಾದಿಸಿದರು.ಮೀರಾ ಅಲ್ಫಾಸ ಅವರು 1878ರ ಫೆಬ್ರವರಿ 21ರಂದು ಪ್ಯಾರಿಸ್ಸಿನಲ್ಲಿ ಜನಿಸಿದರು. ಮೀರಾ ಅಲ್ಫಾಸಾ ಅವರು ಮೊದಲ ಬಾರಿಗೆ ಪಾಂಡಿಚೇರಿಯ ಅರವಿಂದೋ ಆಶ್ರಮಕ್ಕೆ ಭೇಟಿ ಇತ್ತಿದ್ದು ತಮ್ಮ 36ನೆಯ ವಯಸ್ಸಿನಲ್ಲಿ. ಪಾಶ್ಚಾತ್ಯ […]

Advertisement

Wordpress Social Share Plugin powered by Ultimatelysocial