ಮಧ್ಯಾಹ್ನ 2ರ ನಂತರ ಸಂಪೂರ್ಣ ಲಾಕ್‌ಡೌನ್

ಕೊರೊನಾ ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಯಲು ಜುಲೈ ೧೬ರಿಂದ ಶಿವಮೊಗ್ಗ ಜಿಲ್ಲೆಯ ಎಲ್ಲೆಡೆ ಮಧ್ಯಾಹ್ನ ೨ರ ನಂತರ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ಪ್ರತಿ ದಿನ ಬೆಳಿಗ್ಗೆ ೫ರಿಂದ ಮಧ್ಯಾಹ್ನ ೨ರವರೆಗೆ ಮಾತ್ರ ಜನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು. ಪರಿಣಾಮಕಾರಿಯಾಗಿ ಭಾಗಶಃ ಲಾಕ್ ಡೌನ್ ಜಾರಿಗೊಳಿಸಲು ಪೊಲೀಸರಿಗೆ ಹೆಚ್ಚಿನ ಜವಾಬ್ದಾರಿ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಈ ನಿರ್ಧಾರ ಪ್ರಕಟಿಸಿದರೆ. ಯಾವುದೇ ಹಬ್ಬಗಳನ್ನು ಸಾಮೂಹಿಕವಾಗಿ ಆಚರಿಸಲು ಅವಕಾಶ ಇಲ್ಲ. ಎಲ್ಲಾ ಹಬ್ಬಗಳನ್ನೂ ಮನೆಗಳಲ್ಲಿ ಆಚರಿಸಬಹುದು. ಮದುವೆ, ಅಂತ್ಯಸAಸ್ಕಾರ ಚಟುವಟಿಕೆಗಳಿಗೆ ಈ ಹಿಂದೆ ನಿಗದಿಪಡಿಸಲಾಗಿದ್ದ ಮಾನದಂಡವನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು. ಅಂತರವನ್ನು ಕಾಯ್ದುಕೊಳ್ಳದೇ ಗುಂಪು ಗೂಡುವುದು, ಮಾಸ್ಕ್ ಧರಿಸದೇ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿನೆ ನೀಡಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಕೊರೊನಾ ಸೋಂಕಿನ ಬಗ್ಗೆ ಶಾಕಿಂಗ್ ಮಾಹಿತಿ ಲಭ್ಯ

Wed Jul 15 , 2020
ಕೊರೊನಾ ಸೋಂಕಿಗೆ ತುತ್ತಾದವರಲ್ಲಿ ೨೦ ರಿಂದ ೪೦ ವರ್ಷ ವಯಸ್ಸಿನವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ರಾಜ್ಯ ಸರ್ಕಾರದ ಅಂಕಿ ಅಂಶಗಳು ಈ ಕುರಿತಾಗಿ ಮಾಹಿತಿ ನೀಡುತ್ತವೆ. ಇದಕ್ಕೆ ಸಂಬAಧಿಸಿದAತೆ ಒಂದು ವರದಿ ಇಲ್ಲಿದೆ. ಸರ್ಕಾರಿ ಅಂಕಿ ಅಂಶಗಳ ಪ್ರಕಾರ ಈ ವಯಸ್ಸಿನ ಜನರಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿ ಕಂಡುಬAದಿದೆ. ಸದ್ಯದ ಮಾಹಿತಿಯ ಪ್ರಕಾರ ಈ ಸಂಖ್ಯೆ ೧೯,೧೦೦ ರಷ್ಟಿದೆ. ಇನ್ನು ಕೊರೊನಾ ಸೋಂಕು ತುತ್ತಾದವರಲ್ಲಿ ೧೦ ವರ್ಷದ ಒಳಗಿನ ವಯೋಮಿತಿಯವರ ಸಂಖ್ಯೆ […]

Advertisement

Wordpress Social Share Plugin powered by Ultimatelysocial