ಮನೆಯ ಮುಂದೆ ಆಟವಾಡುತ್ತಿದ್ದ ಮಗುವಿನಮೇಲೆ ಕಾಮುಕನ ಹಲ್ಲೆ

 

 

ಭುವನೇಶ್ವರ್ : ಐದು ವರ್ಷದ ಪುಟ್ಟ ಬಾಲಕಿಯನ್ನ ಚಾಲಕ ಅತ್ಯಾಚಾರ ಮಾಡಿದ ಘಟನೆ ಒಡಿಶಾದ ಪುರಿ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಕುಟುಂಬಕ್ಕೆ ಪರಿಚಯವಿದ್ದ ವ್ಯಕ್ತಿಯೊಬ್ಬ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ, ಬಾಲಕಿಯನ್ನು ಮನೆಯ ಟೆರೇಸ್‍ಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ.

ಮನೆಗೆ ಬಂದ ಬಾಲಕಿಯ ಅಮ್ಮ ಮಗಳ ಕಿರುಚಾಟವನ್ನು ಕೇಳಿ ಟೆರೇಸ್ ಗೆ ಹೋಗಿ ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಆದರೆ ಅಲ್ಲಿಂದ ಆರೋಪಿ ತಪ್ಪಿಸಿಕೊಂಡಿದ್ದಾನೆ.

ಬಾಲಕಿ ಪ್ರಸ್ತುತ ಕಟಕ್‍ನ ಎಸ್‍ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ.ಈ ಕುರಿತು ಮಾಹಿತಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಸಿಂಗ್, ಬಾಲಕಿಯ ಕುಟುಂಬಕ್ಕೆ ಪರಿಚಯವಿದ್ದ ವ್ಯಕ್ತಿಯೇ ಈ ಕೃತ್ಯವನ್ನ ಮಾಡಿ ದ್ದಾನೆ. ಆತ ಡ್ರೈವರ್ ವೃತ್ತಿ ಮಾಡುತ್ತಿದ್ದ ಎಂದು ಕುಟುಂಬದವರು ತಿಳಿಸಿದ್ದಾರೆ. ಬಾಲಕಿಯನ್ನು ಪುರಿ ಜಿಲ್ಲಾಸ್ಪತ್ರೆಗೆ ದಾಖಲಿಸ ಲಾಗಿದ್ದು, ಆದರೆ ಆಕೆಯ ಸ್ಥಿತಿ ಚಿಂತಜನಕವಾದ್ದರಿಂದ ಕಟಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದರು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಚಿವರಿಂದಾಗದ ಕೆಲಸವನ್ನ ಶಾಸಕಿ ಮಾಡಿದ್ದಾರೆಂಬ ಸಂತೋಷವಿಲ್ಲ : ಶಾಸಕ ಸುಧಾಕರ್ ಮೇಲೆ ಪೂರ್ಣಿಮಾ ಕಿಡಿ

Thu Jan 27 , 2022
  ಚಿತ್ರದುರ್ಗ : ಮೊನ್ನೆಯಷ್ಟೇ ನಡೆದ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಸಚಿವ ಸುಧಾಕರ್ ಕೂಡ ಭಾಗಿಯಾಗಿದ್ದರು. ಭಾಷಣ ಮಾಡುವಾಗ ಶಾಸಕಿ ಪತಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ ಎಂದಿದ್ದರು. ಆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕಿ ಪೂರ್ಣಿಮಾ, ಕ್ಷೇತ್ರದ ಜನತೆ ನಿಮಗೆ ಹತ್ತು ವರ್ಷಗಳ ಕಾಲ ಆಡಳಿತ ನೀಡಿದ್ದರು. ಆದ್ರೂ ಜಿಲ್ಲೆಗೊಂದು ಸುಸಜ್ಜಿತವಾದ ಆಸ್ಪತ್ರೆ ತರಲು ನಿಮ್ಮಿಂದ ಸಾಧ್ಯವಾಗಲಿಲ್ಲ. ಸಚಿವರು ಮಾಡದ ಕೆಲಸವನ್ನ […]

Advertisement

Wordpress Social Share Plugin powered by Ultimatelysocial